CLT Exam : ಕಂಪ್ಯೂಟರ್‌ ಪರೀಕ್ಷೆಯಲ್ಲಿ ಈಗಾಗಲೇ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ಪ್ರೋತ್ಸಾಹ ಧನ - Vistara News

ನೌಕರರ ಕಾರ್ನರ್

CLT Exam : ಕಂಪ್ಯೂಟರ್‌ ಪರೀಕ್ಷೆಯಲ್ಲಿ ಈಗಾಗಲೇ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ಪ್ರೋತ್ಸಾಹ ಧನ

ಸರ್ಕಾರಿ ನೌಕರರಿಗೆ ನಡೆಸಲಾಗುವ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ (CLT Exam) ಈಗಾಗಲೇ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ಪ್ರೋತ್ಸಾಹ ಧನ ನೀಡಲು ಇದ್ದ ಅಡೆ-ತಡೆಯನ್ನು ಸರ್ಕಾರ ಈಗ ನಿವಾರಿಸಿದೆ.

VISTARANEWS.COM


on

CLT Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ (CLT Exam) ಉತ್ತೀರ್ಣರಾಗಿರಲೇಬೇಕೆಂದು ಸರ್ಕಾರ ನಿಗದಿಪಡಿಸಿದ್ದ ಗಡುವನ್ನು ವಿಸ್ತರಿಸಿದ ಬೆನ್ನ ಹಿಂದೆಯೇ, ಈಗಾಗಲೇ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ರೂ. ಪ್ರೋತ್ಸಾಹ ಧನವನ್ನು ಘೋಷಿಸಿದೆ.

ಕರ್ನಾಟಕ ಸಿವಿಲ್‌ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) ನಿಯಮಗಳು -2012 ಜಾರಿಗೆ ಬಂದ 22-03-2012ರಂದು ಸೇವೆಯಲ್ಲಿದ್ದು, ದಿನಾಂಕ 17-04-2021 ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ನೌಕರರಿಗೆ ಈ ಪ್ರೋತ್ಸಾಹ ಧನ ದೊರೆಯಲಿದೆ.

ಈ ಪ್ರೋತ್ಸಾಹ ಧನ ನೀಡುವ ಕುರಿತು 2012ರ ಆದೇಶದಲ್ಲಿಯೇ ತಿಳಿಸಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಕುರಿತು ಪ್ರಮಾಣ ಪತ್ರವನ್ನು ನೀಡುವಲ್ಲಿ ಗೊಂದಲ ಉಂಟಾಗಿದ್ದರಿಂದ 2017 ರಲ್ಲಿಯೇ ಇದಕ್ಕೆ ತಡೆ ನೀಡಲಾಗಿತ್ತು. ಈಗ ಪ್ರಮಾಣ ಪತ್ರ ವಿತರಿಸಲು ಇ ಆಡಳಿತ ಕೇಂದ್ರದ ಯೋಜನಾ ನಿರ್ದೇಶಕರಿಗೆ (ಸಾಮರ್ಥ್ಯ ಸಂಘಟನೆ) ಸರ್ಕಾರ ಸೂಚಿಸಿದ್ದು, ಡಿಜಿಟಲ್‌ ಸಹಿ ಮಾಡಲ್ಪಟ್ಟ ಪ್ರಮಾಣ ಪತ್ರವನ್ನು ಒದಗಿಸಲಾಗುತ್ತದೆ. ಹೀಗಾಗಿ ಈ ಪ್ರೋತ್ಸಾಹ ಧನ ನೀಡುವಲ್ಲಿ ಇದ್ದ ಗೊಂದಲ ಬಗೆಹರಿದಂತಾಗಿದೆ. ಈಗಾಗಲೇ ಉತ್ತೀರ್ಣರಾಗಿರುವ ನೌಕರರು ಈ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ.

ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್‌ ಸಹಿ ಹೊಂದಿರುವ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ ಪ್ರಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಬೇಕೆಂದು ಸರ್ಕಾರವು ಮಂಗಳವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಈ ಪ್ರೋತ್ಸಾಹ ಧನವನ್ನು ಸರ್ಕಾರಿ ನೌಕರರು ವೇತನ ಪಡೆಯುವ ಲೆಕ್ಕಶೀರ್ಷಿಕೆಯಡಿಯ subsidiary expenses ಉಪ ಶೀರ್ಷಿಕೆಯಡಿಯಲ್ಲಿ ಭರಿಸಬೇಕೆಂದು ಸೂಚಿಸಲಾಗಿದೆ. ಈ ಪ್ರೋತ್ಸಾಹ ಧನವನ್ನು ನೀಡಲು ಆರ್ಥಿಕ ಇಲಾಖೆಯು ಕಳೆದ ಡಿಸೆಂಬರ್‌ನಲ್ಲಿಯೇ ಅನುಮತಿ ನೀಡಿತ್ತು.

ರಾಜ್ಯದ 5.40 ಲಕ್ಷ ನೌಕರರ ಪೈಕಿ ಸುಮಾರು 3.50 ಲಕ್ಷ ನೌಕರರು ಈ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಿದೆ. ಈ ಪರೀಕ್ಷೆ ಬರೆಯಲು 2.55 ಲಕ್ಷಕ್ಕೂ ಹೆಚ್ಚು ನೌಕರರು ನೋಂದಣಿ ಮಾಡಿಕೊಂಡಿದ್ದರೂ 1.5 ಲಕ್ಷ ನೌಕರರು ಮಾತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಸುಮಾರು ನಾಲ್ಕು ಲಕ್ಷ ನೌಕರರು ಇನ್ನೂ ಪರೀಕ್ಷೆ ಬರೆದು ಉತ್ತೀರ್ಣರಾಗಬೇಕಿದೆ.

ಇದನ್ನೂ ಓದಿ: CLT Exam | ಸರ್ಕಾರಿ ನೌಕರರ ಕಂಪ್ಯೂಟರ್‌ ಟೆಸ್ಟ್‌; ಗಡುವು ಮಾ.31ರ ವರೆಗೆ ವಿಸ್ತರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading

ಪ್ರಮುಖ ಸುದ್ದಿ

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

UPSC Results 2023: ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದ ಬಳ್ಳಾರಿಯ ಶಾಂತಪ್ಪ ಕುರುಬರ್ ಅವರು, ಇದೀಗ ಯುಪಿಎಸ್‌ಸಿ ಫಲಿತಾಂಶದಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ. ಸದ್ಯ ಇವರು ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗಳ ಅಂತಿಮ ಪರೀಕ್ಷೆ 2023ರ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಳ್ಳಾರಿಯ ಶಾಂತಪ್ಪ ಕುರುಬರ್ (ಶಾಂತಪ್ಪ ಜಡೆಮ್ಮನವರ್‌) ಅವರು ನಾಗರಿಕ ಸೇವೆಗೆ (UPSC Results 2023) ಆಯ್ಕೆಯಾಗಿದ್ದು, ಇವರು ಕನ್ನಡದಲ್ಲೇ ಪರೀಕ್ಷೆ ಬರೆದು ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ್ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಪಿಯುಸಿ ಅನುತ್ತೀರ್ಣವಾಗಿದ್ದ ಶಾಂತಪ್ಪ ಕುರುಬರ್

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ಎಂದರೆ ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿದೆ. ಈಗ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ 3 ವಿದ್ಯಾರ್ಥಿಗಳು ಪಾಸ್‌

ಶಾಂತಪ್ಪ ಕುರುಬರ್, ಭರತ್ ಸಿ ಯಾರಮ್ ಹಾಗೂ ಭಾನು ಪ್ರಕಾಶ್

ಯೂಪಿಎಸ್‌ಸಿ ಪರೀಕ್ಷೆಯಲ್ಲಿ ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ ಮೂವರು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಳ್ಳಾರಿಯ ಶಾಂತಪ್ಪ ಕುರುಬರ್ (644 ರ‍್ಯಾಂಕ್‌), ಮೈಸೂರಿನ ಭಾನು ಪ್ರಕಾಶ್ (600 ರ‍್ಯಾಂಕ್‌), ಶಿವಮೊಗ್ಗ ಭರತ್ ಸಿ ಯಾರಮ್ (667 ರ‍್ಯಾಂಕ್‌) ಉತ್ತೀರ್ಣರಾದವರು.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಭಾನು ಪ್ರಕಾಶ್ ಅವರು ಮೂಲತಃ ಮೈಸೂರಿನವರಾಗಿದ್ದು, ಕಳೆದ ಬಾರಿ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು.
ಮತ್ತೆ ಐಎಎಸ್ ಮಾಡುವ ಕನಸಿನೊಂದಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಈ ಬಾರಿ 600ನೇ ರ‍್ಯಾಂಕ್‌ ಪಡೆದಿದ್ದಾರೆ.

ಭರತ್ ಸಿ ಯಾರಮ್ ಅವರು ಶಿವಮೊಗ್ಗ ಮೂಲದವರಾಗಿದ್ದು, ನಾಲ್ಕನೇ ಬಾರಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇವರು 667 ರ‍್ಯಾಂಕ್‌ ಪಡೆದಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

ಇದನ್ನೂ ಓದಿ | UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

Continue Reading

ಪ್ರಮುಖ ಸುದ್ದಿ

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

UPSC Result 2024: ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

VISTARANEWS.COM


on

UPSC Result 2024:
Koo

ಹೊಸದಿಲ್ಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (Union Public Service Commission – UPSC) ನಡೆಸಿದ ಈ ವರ್ಷದ ಪರೀಕ್ಷೆಯ ಫಲಿತಾಂಶಗಳನ್ನು (UPSC Result 2024) ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ (Aditya Srivastava) ಅವರು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅಗ್ರಸ್ಥಾನ (UPSC Result 2024 topper) ಗಳಿಸಿದ್ದಾರೆ.

ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

ಶಿಫಾರಸು ಮಾಡಿದ 355 ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಾತ್ಕಾಲಿಕವಾಗಿ ಇಟ್ಟುಕೊಳ್ಳಲಾಗಿದೆ. UPSC ತನ್ನ ಕ್ಯಾಂಪಸ್‌ನಲ್ಲಿರುವ ಪರೀಕ್ಷಾ ಹಾಲ್‌ನ ಬಳಿ “ಸಂಪರ್ಕ ಕೌಂಟರ್” ಅನ್ನು ತೆರೆದಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 23385271/23381125/23098543 ಮೂಲಕ ಪಡೆಯಬಹುದು.

ಫಲಿತಾಂಶ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗೆ ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗುತ್ತದೆ. ವ್ಯಕ್ತಿತ್ವ ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು UPSC ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.

ಫಲಿತಾಂಶವನ್ನು ಪರಿಶೀಲಿಸಲು ಹೀಗೆ ಮಾಡಿ:

1) ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ

2) What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.

3) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿರುವುದು ತೆರೆಯುತ್ತದೆ.

ಇದನ್ನೂ ಓದಿ: UPSC CSE 2024: ಯುಪಿಎಸ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿಯಮದಲ್ಲಿದೆ ಕೆಲವು ಬದಲಾವಣೆ; ಇಲ್ಲಿದೆ ಮಾಹಿತಿ

Continue Reading

ಉದ್ಯೋಗ

Old Pension Scheme: ಹಳೆಯ ಪಿಂಚಣಿ ಬೇಕಿದ್ದರೆ ಯೋಚಿಸಿ ನಿರ್ಧಾರ ಮಾಡಿ! ಏನಿದು ರಾಜ್ಯ ಸರ್ಕಾರದ ಆದೇಶ?

Old Pension Scheme: ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

VISTARANEWS.COM


on

Old Pension Scheme new order from Karnataka state government
Koo

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ (National Pension Scheme) ಸಂಬಂಧಪಟ್ಟಂತೆ ಹಳೇ ಪಿಂಚಣಿ (Old Pension Scheme) ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ.

ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ರಾಜ್ಯ ಸರ್ಕಾರ ವಿಧಿಸಿದ ಷರತ್ತುಗಳು ಏನು?

  • ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
  • ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
Old Pension Scheme new order from Karnataka state government
  • ಒಂದು ವೇಳೆ ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ಮೇಲೆ ಹೇಳಲಾದ ಆಯ್ಕೆಯನ್ನು ಮಾಡಿಕೊಳ್ಳದೆ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ.
  • ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಹಾಗೂ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

ಹೀಗಾಗಿ ಇಚ್ಛೆಯುಳ್ಳ ಎಲ್ಲ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಅನುಬಂಧದ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.

    Continue Reading
    Advertisement
    Covaxin
    ದೇಶ43 seconds ago

    Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

    Prajwal Revanna Case Another victim gives statement before judge Will Revanna get anticipatory bail
    ಕ್ರೈಂ3 mins ago

    Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

    KL Rahul
    ಕ್ರೀಡೆ17 mins ago

    KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

    T20 World Cup
    ಕ್ರೀಡೆ40 mins ago

    T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

    Shine Shetty Summer Fashion
    ಫ್ಯಾಷನ್60 mins ago

    Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

    IPL 2024
    ಕ್ರೀಡೆ1 hour ago

    IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

    assault Case
    ಬೆಂಗಳೂರು1 hour ago

    Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

    Prajwal Revanna Case Centre says it has no power to revoke Prajwal diplomatic passport Big relief for MP
    ಕರ್ನಾಟಕ1 hour ago

    Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

    Virat kohli
    ಪ್ರಮುಖ ಸುದ್ದಿ1 hour ago

    Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

    Brij Bhushan Singh
    ದೇಶ1 hour ago

    ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

    Sharmitha Gowda in bikini
    ಕಿರುತೆರೆ7 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ7 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ5 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ7 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ6 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Prajwal Revanna Case Another victim gives statement before judge Will Revanna get anticipatory bail
    ಕ್ರೈಂ3 mins ago

    Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

    Dina Bhavishya
    ಭವಿಷ್ಯ14 hours ago

    Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

    dina bhavishya read your daily horoscope predictions for April 30 2024
    ಭವಿಷ್ಯ3 days ago

    Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

    PM Narendra modi in Bagalakote and Attack on Congress
    Lok Sabha Election 20243 days ago

    PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

    PM Narendra modi in Bagalakote for Election Campaign and here is Live telecast
    Lok Sabha Election 20243 days ago

    PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

    dina bhavishya read your daily horoscope predictions for April 29 2024
    ಭವಿಷ್ಯ4 days ago

    Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

    Vote Jihad
    Lok Sabha Election 20244 days ago

    PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

    PM Narendra Modi in Sirsi
    Lok Sabha Election 20244 days ago

    PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

    If Congress comes to power all your assets will belong to Government says PM Narendra Modi
    Lok Sabha Election 20244 days ago

    Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

    Congress ties with Aurangzeb supporters and Girls killed under his rule says Narendra Modi
    Lok Sabha Election 20244 days ago

    Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

    ಟ್ರೆಂಡಿಂಗ್‌