test for government employees district level officer get responsibilityCLT Exam : ಸರ್ಕಾರಿ ನೌಕರರ ಕಂಪ್ಯೂಟರ್‌ ಟೆಸ್ಟ್‌; ಜಿಲ್ಲಾ, ತಾಲೂಕು ಅಧಿಕಾರಿಗಳಿಗೆ ಜವಾಬ್ದಾರಿ - Vistara News

ನೌಕರರ ಕಾರ್ನರ್

CLT Exam : ಸರ್ಕಾರಿ ನೌಕರರ ಕಂಪ್ಯೂಟರ್‌ ಟೆಸ್ಟ್‌; ಜಿಲ್ಲಾ, ತಾಲೂಕು ಅಧಿಕಾರಿಗಳಿಗೆ ಜವಾಬ್ದಾರಿ

ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಸರ್ಕಾರಿ ನೌಕರರು ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ (CLT Exam) ಉತ್ತೀರ್ಣರಾಗಿರಲೇಬೇಕೆಂದು ಸರ್ಕಾರ ಹೇಳಿದ್ದು, ಎಲ್ಲರೂ ಪರೀಕ್ಷೆ ತೆಗೆದುಕೊಳ್ಳುವಂತೆ ಮಾಡಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದೆ.

VISTARANEWS.COM


on

computer literacy test
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ (CLT Exam) ಉತ್ತೀರ್ಣರಾಗುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು, ಎಲ್ಲರೂ ಪರೀಕ್ಷೆ ತೆಗೆದುಕೊಳ್ಳುವಂತೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಗಡುವನ್ನು ವಿಸ್ತರಿಸಿದ್ದು, ಈಗ ದಿನಾಂಕ 31-12-2023ರ ಒಳಗೆ ಎಲ್ಲ ನೌಕರರು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿರುತ್ತದೆ. ಇ-ಆಡಳಿತ ಕೇಂದ್ರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಸೂಚಿಸಬೇಕೆಂದು ಕೋರಿದೆ.

ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012 ರಲ್ಲಿ “ಈ ನಿಯಮದ ಪ್ರಾರಂಭದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ಮುಂಬಡ್ತಿಗೆ ಅನರ್ಹರಾಗುತ್ತಾರೆʼʼ ಎಂದು ತಿಳಿಸಲಾಗಿದೆ. 2014ರ ಡಿಸೆಂಬರ್‌ನಲ್ಲಿಯೇ ಸರ್ಕಾರ ಈ ಸಂಬಂಧ ಅಧಿಕೃತ ಆದೇಶ (ಡಿಪಿಎಆರ್ 104 ಇ-ಆಡಳಿತ 2014) ಕೂಡ ಹೊರಡಿಸಲಾಗಿದೆ.

ಇದಕ್ಕೆ ಕಳೆದ ಮೇನಲ್ಲಿ ತಿದ್ದುಪಡಿ ತಂದು, “ಹತ್ತು ವರ್ಷಗಳ ಅವಧಿಯೊಳಗೆʼʼ ಎಂಬುದಕ್ಕೆ ಬದಲಾಗಿ, “ಯಾವುದೇ ಸರ್ಕಾರಿ ನೌಕರನು ದಿನಾಂಕ:31-12-2022ರೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ಮುಂಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿಗಳಿಸಲು ಅನರ್ಹನಾಗತಕ್ಕದ್ದಲ್ಲʼʼ ಎಂದು ಹೇಳಲಾಗಿತ್ತು. ನಂತರ ತಿದ್ದುಪಡಿ ಅಧಿಸೂಚನೆ ಹೊರಡಿಸಿ, ಡಿಸೆಂಬರ್‌ 31, 2023 ರವರೆಗೆ ವಿಸ್ತರಿಸಲಾಗಿದೆ.

ಸರ್ಕಾರಿ ನೌಕರರು ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವುದನ್ನು ಕಲಿಯಬೇಕೆಂಬ ಉದ್ದೇಶದಿಂದ ಸರ್ಕಾರ ಈ ಪರೀಕ್ಷೆ ನಡೆಸುತ್ತಿದೆ. ಮೊದಲ ಬಾರಿಗೆ ಉಚಿತವಾಗಿ ಈ ಪರೀಕ್ಷೆ ಬರೆಯಬಹುದಾಗಿರುತ್ತದೆ. ಒಂದು ವೇಳೆ ಇದರಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ, ಮುಂದೆ ಪರೀಕ್ಷೆ ಬರೆಯಲು 359 ರೂ. ಹಾಗೂ ಬ್ಯಾಂಕ್‌ ಸೇವಾ ಶುಲ್ಕವನ್ನು ನೌಕರರು ಪಾವತಿಸ ಬೇಕಾಗಿರುತ್ತದೆ. ಶುಲ್ಕ ಪಾವತಿಸಿದ ದಿನಾಂಕದಿಂ­­­­ದ 90 ದಿನಗಳೊಳಗೆ ಮಾತ್ರ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಪರೀಕ್ಷೆ ಬರೆಯಲು ವೆಬ್‌ ವಿಳಾಸ ಇಂತಿದೆ: https://clt.karnataka.gov.in/

ಕಿಯೋನಿಕ್ಸ್ ಸಂಸ್ಥೆಯು ಇ-ಆಡಳಿತ ಕೇಂದ್ರದ ಸಹಯೋಗದೊಂದಿಗೆ ಆನ್ ಲೈನ್ ನಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸುತ್ತಿದೆ. ಇದಕ್ಕಾಗಿ ವಿಶೇಷವಾದ ವೆಬ್‌ಸೈಟ್‌ ಪ್ರಾರಂಭಿಸಲಾಗಿದೆ. ನೌಕರರು ಇದರಲ್ಲಿ ಮೊದಲಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಯಶಸ್ವಿಯಾಗಿ ಹೆಸರು ನೊಂದಾಯಿಸಿಕೊಂಡವರು, ಮುಂದೆ ಪರೀಕ್ಷೆಯ ಸ್ಲಾಟ್‌ ಅನ್ನು ಬುಕ್‌ ಮಾಡಿಕೊಂಡು ನಿಗದಿತ ದಿನದಂದು ಈ ಪರೀಕ್ಷೆ ಬರೆಯಬಹುದಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಕುರಿತು ಮಾತ್ರ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ: 080-43780467/ 080-22209990

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ಈಗಾಗಲೇ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ನೌಕರರಿಗೆ ಐದು ಸಾವಿರ ರೂ. ಪ್ರೋತ್ಸಾಹ ಧನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕ ಸಿವಿಲ್‌ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) ನಿಯಮಗಳು -2012 ಜಾರಿಗೆ ಬಂದ 22-03-2012ರಂದು ಸೇವೆಯಲ್ಲಿದ್ದು, ದಿನಾಂಕ 17-04-2021 ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ನೌಕರರಿಗೆ ಈ ಪ್ರೋತ್ಸಾಹ ಧನ ನೀಡಲಾಗಿದೆ.

ಸರ್ಕಾರಿ ನೌಕರರಾಗಿರುವ ಚಾಲಕರಿಗೆ, ಪೊಲೀಸ್‌ ಕಾನ್ಸ್‌ಟೇಬಲ್‌, ನರ್ಸ್‌, ಫಾರೆಸ್ಟ್‌ ಗಾರ್ಡ್‌, ಫಾರೆಸ್ಟ್‌ ವಾಚರ್ಸ್‌, ಅಬಕಾರಿ ರಕ್ಷಕರಿಗೆ ಮತ್ತು “ಡಿʼʼ ದರ್ಜೆಯ ನೌಕರರಿಗೆ ಈ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. 45 ಮೇಲ್ಪಟ್ಟ ಸರ್ಕಾರಿ ನೌಕರರಿಗೆ ಈ ಪರೀಕ್ಷೆಯಿಂದ ವಿನಾಯಿತಿ ನೀಡಬೇಕೆಂದೂ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ. ಸರ್ಕಾರ ಈ ಕುರಿತು ಇನ್ನಷ್ಟೇ ತೀರ್ಮಾನ ತೆಗೆದುಕೊಳ್ಳಬೇಕಿದೆ.

ಇದನ್ನೂ ಓದಿ : Govt Employees News : ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ; ಅವಧಿ ವಿಸ್ತರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

Transfer Guidelines: ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಜೂನ್‌ 25ರಿಂದ ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

VISTARANEWS.COM


on

Transfer Guidelines
Koo

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ವರ್ಗಾವಣಾ ಮಾರ್ಗಸೂಚಿಗಳನ್ನು (Transfer Guidelines) ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ವರ್ಗಾವಣೆ ಸಂಖ್ಯೆಯು ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಜೂನ್‌ 25ರಿಂದ ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ. ವರ್ಗಾವಣೆಯಲ್ಲಿ ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಛಿಸುತ್ತದೆ. ಈ ಮಾರ್ಗಸೂಚಿಗಳು 2024-25 ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

1. ವಿವರಣೆ:- ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು;

  1. 1.“ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ,
    2.”ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ನಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಚೇರಿಯ ಪ್ರಸ್ತುತ ಇರುವ ಕೇಂದ್ರ ಸ್ಥಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಚೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
    3.“ಚಲನವಲನ” ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಮಾಡುವ ಸ್ಥಳ ನಿಯುಕ್ತಿ, ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.
    ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.
    4.‘ಗುಂಪು-‘ಎ’, ‘ಬಿ’, ‘ಸಿ’, ಮತ್ತು ‘ಡಿ’ ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು.
  2. 5.‘ಜೇಷ್ಠತಾ ಘಟಕ’ ಎಂದರೆ ಒಂದು ಹುದ್ದೆಗೆ ಸಂಬಂಧಿಸಿದಂತೆ ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ;

2.ವರ್ಗಾವಣಾ ಪ್ರಕ್ರಿಯೆ:

  1. ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಈ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.

3. ವರ್ಗಾವಣೆಯ ಬಗ್ಗೆ ನಿರ್ಬಂಧಗಳು/ ಸಕ್ಷಮ ಪ್ರಾಧಿಕಾರ ಹಾಗೂ ನೌಕರನ ಜವಾಬ್ದಾರಿಗಳು:

  1. 1.ಪ್ರಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ದಿನಾಂಕ: 25.06.2024 ರಿಂದ ದಿನಾಂಕ: 09.07.2024ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
  2. 2.ಆದರೆ ವರ್ಗಾವಣೆ/ ಚಲನವಲನಗಳನ್ನು ಮಾಡುವಾಗ ಯಾವುದೇ ಸರ್ಕಾರಿ ನೌಕರನು ಕಡ್ಡಾಯ ನಿರೀಕ್ಷಣೆಯಲ್ಲಿ ಉಳಿಯುವಂತಹ ಸಂದರ್ಭಗಳು ಉಂಟಾಗದಂತೆ ನೋಡಿಕೊಳ್ಳತಕ್ಕದ್ದು.
    3.ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಆರೋಪಗಳಿದ್ದಲ್ಲಿ ಹಾಗೂ ಆತನ ವಿರುದ್ಧ ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಸೂಕ್ಷ್ಮ ಹುದ್ದೆಗಳಿಗೆ / ಕಾರ್ಯಕಾರಿ ಹುದ್ದೆಗಳಿಗೆ ನೇಮಿಸದೇ ಅವರು ತಮ್ಮ ಬಾಕಿಯಿರುವ ವಿರುದ್ಧ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲದಿರುವಂತಹ ಕಾರ್ಯಕಾರಿಯೇತರ (non-executive) ಹುದ್ದೆಗಳಿಗೆ ನೇಮಿಸತಕ್ಕದ್ದು, ಮುಂದುವರೆದು, ಇಲಾಖಾ ವಿಚಾರಣೆ/ ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರನನ್ನು ಅವನು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.
    4.ವರ್ಗಾವಣೆಗೊಂಡ ಸರ್ಕಾರಿ ನೌಕರರು ವರ್ಗಾವಣೆ ಆದೇಶದ ಪ್ರಕಾರ ಅವರಿಗೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗದೆ, ವೈದ್ಯಕೀಯ ಕಾರಣಗಳನ್ನು ನೀಡಿ ರಜೆ ಅರ್ಜಿಗಳನ್ನು ಸಲ್ಲಿಸುವ ಪ್ರಕರಣಗಳಲ್ಲಿ ವರ್ಗಾವಣೆಗೊಂಡ ಅಂತಹ ಸರ್ಕಾರಿ ನೌಕರ, ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ಪತ್ರದೊಂದಿಗೆ ದೃಢೀಕರಣ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.
  3. 5.ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.6.
  4. ಸಂಬಂಧಿಸಿದ ಸರ್ಕಾರಿ ನೌಕರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾರಣಗಳ ಮೇಲೆ ರಜಾ ಅರ್ಜಿಯನ್ನು ಕಡ್ಡಾಯವಾಗಿ ನಿಗದಿತ ಸೇರಿಕೆ ಕಾಲದೊಳಗೆ (Within the joining time prescribed) ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು, ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರುಹಾಜರಿ ಎಂದು ಪರಿಗಣಿಸತಕ್ಕದ್ದು.

4.ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸಕ್ಷಮ ಪ್ರಾಧಿಕಾರಗಳು ವರ್ಗಾವಣೆಗಳನ್ನು ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲ;

  1. (1) ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ;
    (2) ಹೊಸ ಕಚೇರಿ / ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ತಿ, ರಾಜೀನಾಮೆ ಹಿಂಬಡ್ತಿ, ವಜಾಗೊಳಿಸುವುದರಿಂದ, ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ತಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಭವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ:
    (3) ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯು ಅವಶ್ಯವೆನಿಸಿದಲ್ಲಿ ಇಂತಹ ಪ್ರಕರಣಗಳನ್ನು ಚಾಚೂ ತಪ್ಪದೇ ಸನ್ಮಾನ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಅವರ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.
    (4) ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪವಿದೆಯೆಂಬ ಬಗ್ಗೆ, ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ಚಾರ್ಜ್‌ ಶೀಟ್ ಜಾರಿಯಾಗಿರುವುದು ಅಥವಾ ಸಕ್ಷಮ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ, ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ,

5.ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ:

  1. (1). ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ:
    ವೃಂದ-ಸೇವಾವಧಿ
    ಎಲ್ಲ ಗುಂಪು-ಎ ಹುದ್ದೆಗಳು- 2 ವರ್ಷ
    ಎಲ್ಲ ಗುಂಪು-ಬಿ ಹುದ್ದೆಗಳು- 4 ವರ್ಷ
    ಎಲ್ಲ ಗುಂಪು-ಸಿ ಹುದ್ದೆಗಳು- 4 ವರ್ಷ
    ಎಲ್ಲ ಗುಂಪು-ಡಿ ಹುದ್ದೆಗಳು-7 ವರ್ಷ
    ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಸನ್ಮಾನ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು.
  2. (2). ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಛೇರಿಗಳಿಗೆ ಸ್ಥಳಿಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳ ವರೆವಿಗೂ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.

6. ಅವಧಿ ಪೂರ್ವ /ಅವಧಿ ಮೀರಿದ ವರ್ಗಾವಣೆಗಳು:

  1. (1). ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ಷಮ ಪ್ರಾಧಿಕಾರವು ಸರ್ಕಾರಿ ನೌಕರನು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.
    (ಎ) ಒಂದು ಸ್ಥಳದಲ್ಲಿರಬಹುದಾದ ಗರಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿವೃತ್ತನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ;
    (ಬಿ) ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಹತೆ ಅಥವಾ ಅನುಭವ ಹೊಂದಿದ್ದು, ಅಂತಹ ನಿರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ;
    (ಸಿ) ಕೇಂದ್ರ ಸರ್ಕಾರದ ಯೋಜನೆ ಅಥವಾ ಫಾಗ್‌ಶಿಪ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು ಆ ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಪಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳುವಿಕೆಯು ಗಂಭೀರವಾಗಿ ನಿಲ್ಲುವ ಸಂಭವವಿದ್ದಲ್ಲಿ
    (ಡಿ)ಪತಿ-ಪತ್ನಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆ ಸ್ಥಳಕ್ಕೆ ಅಥವಾ ಹತ್ತಿರವಿರುವ ಸ್ಥಳಕ್ಕೆ ವರ್ಗಾಯಿಸಲು;
    (ಇ) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ವರ್ಗಾಯಿಸಬಾರದು. ७ ಪದಾಧಿಕಾರದ ಅವಧಿ ಮುಗಿಯುವವರೆಗೆ
    (ಎಫ್) ಸರ್ಕಾರಿ ನೌಕರ ಅಥವಾ ಆತನ / ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ಥಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದಲ್ಲಿ;

7.ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು:

  1. (1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;
    (2) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.
    (3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
    (4) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳವಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.

ಇದನ್ನೂ ಓದಿ | Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

LKG UKG in Anganwadis: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.

VISTARANEWS.COM


on

LKG UKG in Anganwadis
Koo

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ (LKG UKG in Anganwadis) ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಿದ್ದಾರೆ.

ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವು ನಮ್ಮ ಉದ್ದೇಶವಾಗಿದೆ,. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನ ಮಾಡಲಾಗಿದೆ. ಜತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚನೆ: ಲಕ್ಷ್ಮಿ ಹೆಬ್ಬಾಳ್ಕರ್‌

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.

ಇದನ್ನೂ ಓದಿ | LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Continue Reading

ಕರ್ನಾಟಕ

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

LKG UKG In Govt Schools: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

VISTARANEWS.COM


on

LKG UKG In Govt Schools
Koo

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ (LKG UKG In Govt Schools) ಪ್ರಾರಂಭ ವಿರೋಧಿಸಿ, ಗೌರವ ಧನ ಹೆಚ್ಚಳ ಹಾಗೂ ಗುಣಮಟ್ಟದ ಆಹಾರ ಪೂರೈಕೆ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುತ್ತಿದೆ. ಹೀಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳ ಬಗ್ಗೆ ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಬೇಡಿಕೆಗಳ ಪೈಕಿ ಕೆಲವೊಂದನ್ನು ಪರಿಶೀಲಿಸಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಆದರೆ, ಸರ್ಕಾರದ ಈ ನಿರ್ಧಾರದ ಹಿಂದೆ, ಅಂಗನವಾಡಿಗಳನ್ನು ಮುಚ್ಚುವ ಹುನ್ನಾರವಿದೆ. ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಗಳಲ್ಲೇ ಆರಂಭಿಸಬೇಕು. ಇಲ್ಲದಿದ್ದರೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂಬುವುದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒತ್ತಾಯವಾಗಿದೆ.

ತಜ್ಞರ ಕಮಿಟಿ ರಚನೆ ಮಾಡಲು ಚರ್ಚೆ: ಲಕ್ಷ್ಮಿ ಹೆಬ್ಬಾಳ್ಕರ್‌

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರದಿಂದ ಚಿಂತನೆ ಮಾಡಲಾಗಿದೆ. ಆದರೆ, ಈ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವ ಕಳಕಳಿ ಶಿಕ್ಷಣ ಇಲಾಖೆಗೆ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಬೇಡ ಎಂಬುವುದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಗಿದೆ, ಅಂಗನವಾಡಿಗಳನ್ನು ಮೇಲ್ದೆರ್ಜೇಗೇರಿಸುವ ಬಗ್ಗೆ ಸಿಎಂ ಹೇಳಿದ್ದಾರೆ. ಕನ್ನಡ, ಇಂಗ್ಲಿಷ್ ಎರಡನ್ನೂ ಕಲಿಸುವ ಚಿಂತನೆ ಇದೆ. ಸರ್ಕಾರಿ ಮಾಂಟೆಸ್ಸರಿ ಮಾದರಿಯಲ್ಲಿ ಮಾಡುತ್ತೇವೆ. 9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾನ್ಸ್‌ ಡಿಪಾರ್ಟ್‌ಮೆಂಟ್ ಅಪ್ರೂವಲ್ ಪಡೆದು ಮಾಡೋಣ ಎಂದಿದ್ದಾರೆ. ಪ್ರಸ್ತುತ 2600 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಮಾಡೋಕೆ ಸುತ್ತೋಲೆ ಹೊರಡಿಸಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಹೇಳಿದರು.

Continue Reading

ಕರ್ನಾಟಕ

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Govt Employees: ಕೇಂದ್ರ ಸರ್ಕಾರಿ ನೌಕರರು ಬೆಳಗ್ಗೆ 9.15ರೊಳಗೆ ಕಚೇರಿ ತಲುಪಿ, ಬಯೋಮೆಟ್ರಿಕ್‌ ನೀಡದಿದ್ದರೆ ಅಂತಹವರಿಗೆ ಅರ್ಧ ದಿನ ರಜೆ ಎಂದು ಪರಿಗಣಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ನೀಡಿದೆ.

VISTARANEWS.COM


on

govt employees
Koo

ನವ ದೆಹಲಿ: ಸರ್ಕಾರಿ ಕಚೇರಿಗಳಿಗೆ ಕೆಲ ನೌಕರರು (Govt Employees) ತಡವಾಗಿ ಬರುತ್ತಾರೆ ಎಂಬ ವಿಷಯ ಎಲ್ಲರಿಗೂ ತಿಳಿದಿರುವ ಸಂಗತಿ. ಅಂತಹವರಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಇದೀಗ ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರಿ ನೌಕರರು ಕಚೇರಿಗೆ ಬೆಳಗ್ಗೆ 9.15ರೊಳಗೆ ಕಚೇರಿ ತಲುಪಿ, ಬಯೋಮೆಟ್ರಿಕ್‌ ನೀಡದಿದ್ದರೆ ಅಂತಹವರಿಗೆ ಅರ್ಧ ದಿನ ಸಾಂದರ್ಭಿಕ ರಜೆ (casual leave) ಎಂದು ಪರಿಗಣಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DOPT) ಆದೇಶ ನೀಡಿದೆ.

ಇನ್ನು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಪುಸ್ತಕದ ಬದಲಾಗಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಬಳಸಬೇಕು ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಒಂದು ವೇಳೆ ವಿವಿಧ ಕಾರಣಗಳಿಂದ ನೌಕರರು ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದಿದ್ದರೆ, ಒಂದು ದಿನ ಮೊದಲೇ ಕಚೇರಿಯಲ್ಲಿ ತಿಳಿಸಿ ಸಾಂದರ್ಭಿಕ ರಜೆ (CL) ಚೀಟಿ ಸಲ್ಲಿಸಬೇಕು ಎಂದು ನೌಕರರಿಗೆ ಸೂಚಿಸಲಾಗಿದೆ.

ಹಾಗೆಯೇ ಉದ್ಯೋಗಿಗಳ ಹಾಜರಾತಿ, ಸಮಯ ಪಾಲನೆ ಬಗ್ಗೆ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಕೇಂದ್ರ ಸರ್ಕಾರಿ ಕಚೇರಿಗಳ ಕೆಲಸದ ಅವಧಿ ಬೆಳಗ್ಗೆ 9ಗಂಟೆಯಿಂದ ಸಂಜೆ 5.30ವರೆಗೆ ಇರುತ್ತದೆ. ಆದರೆ, ಕೆಲ ನೌಕರರು, ಅಧಿಕಾರಿಗಳು ಮಾತ್ರ ತಡವಾಗಿ ಆಫೀಸ್‌ಗೆ ಬಂದು, ಬೇಗನೆ ವಾಪಸ್‌ ಹೋಗುತ್ತಾರೆ. ಇದರಿಂದ ಕೆಲಸದ ನಿಮಿತ್ತ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಹಾಜರಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಇದನ್ನೂ ಓದಿ | KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

2014ಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ಕಚೇರಿಗಳಲ್ಲಿ ಆಧಾರ್‌ ಆಧಾರಿತ ಬಯೋಮೆಟ್ರಿಕ್ಸ್ ಹಾಜರಾತಿ ವ್ಯವಸ್ಥೆ (AEBAS) ಜಾರಿ ಮಾಡಿತ್ತು. 2019ರಲ್ಲಿ ಕೋವಿಡ್‌ ವ್ಯಾಪಿಸಿದಾಗ ಮುನ್ನೆಚ್ಚರಿಕಾ ಕ್ರಮವಾಗಿ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು, ನಂತರ 2022ರಲ್ಲಿ ವ್ಯವಸ್ಥೆ ಮರು ಆರಂಭವಾಗಿದೆ. ಇದೀಗ ಕಚೇರಿಗಳಲ್ಲಿ ನೌಕರರು ಸಮಯಪಾಲನೆ ಮಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವುದರಿಂದ ಸುಧಾರಣೆ ಕಂಡುಬರಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ.

Continue Reading
Advertisement
Actor Darshan support by singer dr shamitha malnad
ಸ್ಯಾಂಡಲ್ ವುಡ್18 mins ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ22 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ25 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್39 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ43 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Self Harming
ಕ್ರೈಂ45 mins ago

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Gold Rate Today
ವಾಣಿಜ್ಯ55 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್58 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ2 hours ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌