ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಳೆದ ಒಂದು ತಿಂಗಳಿನಿಂದ ನಿರೀಕ್ಷಿಸುತ್ತಿದ್ದ ತುಟ್ಟಿ ಭತ್ಯೆ (Dearness Allowance) ಹೆಚ್ಚಳದ ಆದೇಶ ಕೊನೆಗೂ ಹೊರಬಿದ್ದಿದೆ. ಕೇಂದ್ರ ಸರ್ಕಾರದಂತೆ ಶೇ.4 ರಷ್ಟು (DA Hike News) ತುಟ್ಟಿಭತ್ಯೆ ಹೆಚ್ಚಳ ಮಾಡಿ ಆರ್ಥಿಕ ಇಲಾಖೆಯು ಬುಧವಾರ ಆದೇಶ ಹೊರಡಿಸಿದೆ.
ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಕಳೆದ ಬುಧವಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಮಾಡಿದ್ದರು. ಆರ್ಥಿಕ ಇಲಾಖೆ ಆದೇಶ ಹೊರಡಿಸುವುದು ಬಾಕಿ ಇತ್ತು. ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಲಾಗಿದೆ. ಈ ಪರಿಷ್ಕರಣೆ ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ನಿರೀಕ್ಷೆಯಂತೆ ತುಟ್ಟಿ ಭತ್ಯೆ ಹೆಚ್ಚಳವು ಕಳೆದ ಜನವರಿ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬಂದಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು ಸಹ ಈ ಹೆಚ್ಚಳದ ಲಾಭ ಪಡೆಯಲಿದ್ದಾರೆ. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೂ ಸಹ ಈ ಅದೇಶ ಅನ್ವಯವಾಗುತ್ತದೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ
ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಏ. 3 ರಂದು ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿದ್ದಂತೆಯೇ ರಾಜ್ಯ ಸರ್ಕಾರ ಕೂಡ ಹೆಚ್ಚಳ ಮಾಡುವುದು ವಾಡಿಕೆಯಾಗಿತ್ತು. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆಯನ್ನು (Dearness Allowance) ಹೆಚ್ಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದುದ್ದರಿಂದ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿರಲಿಲ್ಲ.
2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
— CM of Karnataka (@CMofKarnataka) May 30, 2023
– ಮುಖ್ಯಮಂತ್ರಿ @siddaramaiah pic.twitter.com/C5wnY9ujjF
ಈ ಹಿಂದಿನಿಂದಲೂ ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರವೂ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿಕೊಂಡು ಬಂದಿದೆ. ಅದರಂತೆ ಈಗಲೂ ರಾಜ್ಯ ಸರ್ಕಾರಿ ನೌಕರರಿಗೂ ಸಹ ಜನವರಿ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ. 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ ನೂತನ ಸರ್ಕಾರವನ್ನೂ ಕೋರಿದ್ದರು. ಬುಧವಾರ ಈ ಸಂಬಂಧದ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡುವ ಮೂಲಕ ತುಟ್ಟಿಭತ್ಯೆ ಹೆಚ್ಚಳದ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ಇದನ್ನೂ ಓದಿ: DA Hike News : ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಯಾರ ವೇತನ ಎಷ್ಟು ಹೆಚ್ಚಲಿದೆ?
ರಾಜ್ಯ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಿತ್ತು. ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.
ಆರ್ಥಿಕ ಇಲಾಖೆ ಹೊರಡಿಸಿದ ಆದೇಶ ಇಲ್ಲಿದೆ ನೋಡಿ;
ಸಾಮಾನ್ಯವಾಗಿ ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್ ಅನ್ನು ವರ್ಷಕ್ಕೆ ಎರಡು ಸಲ ಏರಿಸುತ್ತದೆ. ಜನವರಿ ಹಾಗೂ ಜುಲೈನಲ್ಲಿ ಇದು ನಡೆಯುತ್ತದೆ. 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಪಿಂಚಣಿದಾರರು ಈ ಹೆಚ್ಚಳದ ಸೌಲಭ್ಯ ಪಡೆಯುತ್ತಾರೆ. ಇತ್ತೀಚಿನ ಗ್ರಾಹಕ ದರ ಸೂಚ್ಯಂಕ (consumer price index) ಆಧರಿಸಿ ತುಟ್ಟಿಭತ್ಯೆಯ ಪ್ರಮಾಣವನ್ನು ಸರ್ಕಾರ ನಿರ್ಧರಿಸುತ್ತದೆ.
ಇದನ್ನೂ ಓದಿ : NPS News : ಗ್ಯಾರಂಟಿಗಳಂತೆ ಓಪಿಎಸ್ ಜಾರಿ ಕೂಡ ಸದ್ಯಕ್ಕಿಲ್ಲ; ಸರ್ಕಾರ ಯೋಚಿಸುತ್ತಿರುವುದಾದರೂ ಏನು?