ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ (Departmental Examination 2021) ಫಲಿತಾಂಶ ಪ್ರಕಟಿಸಿದೆ.
ಕಳೆದ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸರ್ಕಾರಿ ನೌಕರರ ರಿಜಿಸ್ಟರ್ ನಂಬರ್ ಅನ್ನು ಕೆಪಿಎಸ್‌ಸಿಯ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದ್ದು, (ಕನ್ನಡ ಭಾಷಾ ಪರೀಕ್ಷೆ ವಿಷಯ ಸಂಕೇತ:47 & 73 ಹೊರತುಪಡಿಸಿ) ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ನೋಡಬಹುದಾಗಿದೆ.
ಮರು ಮೌಲ್ಯಮಾಪನ ಮಾಡಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಮುಂದಿನ 30 ದಿನಗಳ ಒಳಗೆ ಇದಕ್ಕಾಗಿ ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇದಕ್ಕೆ 100 ರೂ. ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಬೇಕಿರುತ್ತದೆ.
ಸರ್ಕಾರಿ ನೌಕರರು, ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು /ವಿಶ್ವವಿದ್ಯಾಲಯಗಳು/ ಪ್ರಾಧಿಕಾರಗಳ ಖಾಯಂ ನೌಕರರು ಈ ಪರೀಕ್ಷೆ ಬರೆದಿದ್ದರು.
ಫಲಿತಾಂಶ ನೋಡಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್: https://kpsc.kar.nic.in/
ಇದನ್ನೂ ಓದಿ | NPS News | ಎನ್‌ಪಿಎಸ್ ರದ್ದು; ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲಿಯೂ ಚುನಾವಣಾ ವಿಷಯವಾಗಲಿದೆಯೇ?