Site icon Vistara News

Govt Employees News : ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ; ಅವಧಿ ವಿಸ್ತರಣೆ

karnataka govt employees transfer

#image_title

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ನಿಗದಿಪಡಿಸಿದ್ದ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ (Govt Employees News). ಈಗ ಜೂನ್‌ 30 ರ ವರೆಗೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಬಹುದಾಗಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಈ ಸಂಬಂಧ ಜೂನ್‌ 16 ರಂದು ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮೇ 30 ರಂದು ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯನ್ನು ಜೂನ್‌ 1ರಿಂದ 15ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿತ್ತು. ಇನ್ನೂ ವರ್ಗಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳದೇ ಇರುವುದರಿಂದ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ನೂತನವಾಗಿ ಅಧಿಕಾರ ಹಿಡಿದಿರುವ ಸಚಿವರಿಗೆ ಯಾವ ಅಧಿಕಾರಿಗಳು ಎಲ್ಲಿದ್ದಾರೆ, ಯಾರನ್ನು ಎಲ್ಲಿಗೆ ನಿಯೋಜಿಸಬೇಕೆಂಬ ಕುರಿತು ಇನ್ನೂ ಸ್ಪಷ್ಟ ಚಿತ್ರಣ ದೊರೆತಿಲ್ಲ. ಅನೇಕ ಅಧಿಕಾರಿಗಳು, ನೌಕರರು ವರ್ಗಾವಣೆಗೆ ಕೋರಿಕೆ ಸಲ್ಲಿಸುತ್ತಿದ್ದು, ಇದು ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಹಲವು ಸಚಿವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಈಗ ಅವಧಿಯನ್ನು ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜಿ. ಹೇಮಲತಾ ಆದೇಶ ಹೊರಡಿಸಿದ್ದಾರೆ.

ವರ್ಗಾವಣೆಗೆ ಸಂಬಂಧಿಸಿದ ಆದೇಶಗಳನ್ನು ನೋಡಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ಸರ್ಕಾರದ ವರ್ಗಾವಣಾ ಮಾರ್ಗಸೂಚಿಯ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿರುವ ಪರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ. ಅದರಂತೆ 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6 ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ : GPF Interest Rate : ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರ ನಿಗದಿ; ರಾಜ್ಯ ಸರ್ಕಾರದ ಅಧಿಸೂಚನೆ

Exit mobile version