Site icon Vistara News

Govt Employees News : ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆಗೆ ಚಾಲನೆ; ವೇಳಾಪಟ್ಟಿ ಇಲ್ಲಿದೆ!

health department employees

#image_title

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ (Govt Employees News) ನೀಡಿದೆ. ಜತೆಗೆ ವರ್ಗಾವಣಾ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ.

ವರ್ಗಾವಣೆಗೆ ಇಚ್ಛಿಸುವ ಅಧಿಕಾರಿಗಳು/ ನೌಕರರು ಜೂನ್‌ 12 ರಿಂದ 26 ರವರೆಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಜುಲೈ 31ರ ಒಳಗೆ ಈ ವರ್ಗಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ. ಜುಲೈ 4 ರಿಂದ 10 ರವರೆಗೆ ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಪ್ರಪಟಿಸಲಾಗುತ್ತದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಏಳು ದಿನ ಕಾಲಾವಕಾಶ ನೀಡಲಾಗುತ್ತದೆ. ಜುಲೈ 14 ರಿಂದ ವೃತವಾರು ಸಮಾಲೋಚನೆಯನ್ನು ಪ್ರಾರಂಭಿಸಲಾಗುತ್ತದೆ.

ವೃಂದಬಲದ ಕಾರ್ಯನಿರತ ಹುದ್ದೆಯ ಶೇ. 15 ರಷ್ಟು ಸಂಖ್ಯೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಅವಕಾಶ ಇರುತ್ತದೆ ಎಂದು ಇಲಾಖೆಯು ತಿಳಿಸಿದ್ದು, ಶೇಕಡ 15 ರಷ್ಟು ವೃಂದಬಲದಲ್ಲಿ ಶೇ.2 ರಷ್ಟು ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಮಾಡಲು ಇಲಾಖೆಯು ತೀರ್ಮಾನಿಸಿದೆ.

ವರ್ಗಾವಣೆ ವೇಳಾಪಟ್ಟಿ ಇಲ್ಲಿದೆ ನೋಡಿ;

ʻʻಗ್ರೂಪ್‌ ಎ, ಗ್ರೂಪ್‌ ಬಿ, ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವರ್ಗದ ನೌಕರರಿಗೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6 ರಷ್ಟನ್ನು ಮೀರದಂತೆ ದಿನಾಂಕ 01-06-2023 ರಿಂದ 15-06-2023ರವರೆಗೆ ಸಾರ್ವತ್ರಿಕ ವರ್ಗಾವಣೆಯನ್ನು ಕೈಗೊಳ್ಳಲು ಅಯಾ ಇಲಾಖೆಯ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿದೆʼʼ ಎಂದು ಸರ್ಕಾರವು ಇತ್ತೀಚೆಗೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಈ ವರ್ಗಾವಣೆ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.

2015-16, 2017-18 ನೇ ಸಾಲಿನ ವರ್ಗಾವಣೆ ಸಮಯದಲ್ಲಿ ಸರ್ಕಾರವು 10 ವರ್ಷಗಳಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ತಜ್ಞ (ವೈದ್ಯಾಧಿಕಾರಿಗಳು, ಬಿ ವೃಂದ ಮತ್ತು ಸಿ. ವೃಂದದ ಹುದ್ದೆಗಳನ್ನು ಖಾಲಿ ಹುದ್ದೆಗಳೆಂದು ಪ್ರಕಟಿಸಿ, ವಯೋ ನಿವೃತ್ತಿ ಹೊಂದಲು 2 ವರ್ಷ ಸೇವೆ ಬಾಕಿ ಇರುವವರನ್ನು ಹೊರತುಪಡಿಸಿ) ಸಮಾಲೋಚನೆ ಮುಖಾಂತರ ಈ ಸ್ಥಳಗಳನ್ನು ಭರ್ತಿ ಮಾಡಲು ಹಾಗೂ ಈ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಹಾಜರಾದ ಬಳಿಕ ಕರ್ತವ್ಯದಿಂದ ಬಿಡುಗಡೆ ಹೊಂದಿದ ವೈದ್ಯರುಗಳನ್ನು ಹಾಗು ಇತರೆ ಬಿ ವೃಂದ ಮತ್ತು ಸಿ ವೃಂದದ ನೌಕರನ್ನು ಮುಂದಿನ ನೇಮಕಾತಿಗೆ ಆಯುಕ್ತಾಲಯಕ್ಕೆ ವರದಿ ಮಾಡಿಕೊಂಡ ನಂತರ ಅವರುಗಳಿಗೆ
ಸಮಾಲೋಚನೆ ಮುಖಾಂತರ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ ಸರ್ಕಾರ ಅನುಮತಿ ನೀಡಿತ್ತು. ಇದೇ ಕ್ರಮವನ್ನು 2023- 24 ನೇ ಸಾಲಿನಲ್ಲಿ ಅಳವಡಿಸಿಕೊಳ್ಳಲು ಅನುಮತಿ ನೀಡಬೇಕೆಂದು ಇಲಾಖೆಯ ಆಯುಕ್ತರು ಕೋರಿದ್ದು, ಇದಕ್ಕೆ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿವೆ.

ಇಲಾಖೆಯ ಅಧೀನದ 19 ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಟ್ಟದ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪ್ರಸ್ತುತ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಒಂದು ಬಾರಿಗೆ ಸಮಾಲೋಚನೆ ಮುಖಾಂತರ ಭರ್ತಿ ಮಾಡಲು ಕೂಡ ಇಲಾಖೆ ನಿರ್ಧರಿಸಿದೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಒಂದೇ ಕಚೇರಿ ಅಥವಾ ಆಸ್ಪತ್ರೆಯಲ್ಲಿ 15 ವರ್ಷಕ್ಕೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್‌ ಡಿ ನೌಕರರು ವರ್ಗಾವಣೆ ಕೋರಿಕೆ ಅರ್ಜಿ ಸಲ್ಲಸಿದ ಸಂದರ್ಭದಲ್ಲಿ ಮಾತ್ರ ವರ್ಗಾವಣೆಗೆ ಪರಿಗಣಿಸಲಾಗುತ್ತದೆ. ಪತಿ-ಪತ್ನಿ ಪ್ರಕರಣ/ಅಂಗವಿಕಲ/ವಿಧವೆ/ವಿಧುರ ಪ್ರಕರಣದಡಿ ಒಂದು ಬಾರಿ ವರ್ಗಾವಣೆ ತೆಗೆದುಕೊಂಡ ನಂತರ ಕನಿಷ್ಠ ಮೂರು ವರ್ಷಗಳ ನಂತರವೇ ನಿಯಮಾನುಸಾರ ವರ್ಗಾವಣೆಯ ಅರ್ಜಿ ಪರಿಗಣಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ : Teacher Transfer : ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್‌; ಪರಿಷ್ಕೃತ ವೇಳಾಪಟ್ಟಿ ಪ್ರಕಟ

Exit mobile version