ನೌಕರರ ಕಾರ್ನರ್
Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ
ರಾಜ್ಯದ ಸರ್ಕಾರಿ ನೌಕರರು ಮಾ.1 ರಂದು ನಡೆಸಿದ ಕರ್ತವ್ಯಕ್ಕೆ ಗೈರಾಗುವ ಮುಷ್ಕರದ (Govt Employees Strike) ಸಂದರ್ಭದಲ್ಲಿ ಕೆಲಸಕ್ಕೆ ಹಾಜರಾಗದ ನೌಕರರಿಗೆ ರಾಜ್ಯ ಸರ್ಕಾರ ವೇತನ ಸಹಿತ ರಜೆಯನ್ನು ಮಂಜೂರು ಮಾಡಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.
ಬೆಂಗಳೂರು: 7ನೇ ವೇತನ ಆಯೋಗದ (7th pay commission) ವರದಿಯ ಜಾರಿಯು ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಮಧ್ಯಂತರ ಪರಿಹಾರ ಘೋಷಿಸಬೇಕು ಹಾಗೂ ನೂತನ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು (OPS) ಜಾರಿಗೊಳಿಸಲೇಬೇಕೆಂದು ಒತ್ತಾಯಿಸಿ ಮಾ.1 ರಂದು ಕರ್ತವ್ಯಕ್ಕೆ ಗೈರಾಗುವ ಮುಷ್ಕರ ನಡೆಸಿದ್ದ (Govt Employees Strike) ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ವೇತನ ಸಹಿತ ರಜೆ ನೀಡಲಿದೆ.
ಈ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದು, ಬುಧವಾರದಂದು ಕರ್ತವ್ಯಕ್ಕೆ ಗೈರಾದ ಯಾವುದೇ ನೌಕರರು ಹಾಜರಾತಿಯಲ್ಲಿ ಸಹಿ ಮಾಡಬಾರದು. ಯಾವ ರಜೆ ಹಾಕಬೇಕು ಎನ್ನುವುದರ ಬಗ್ಗೆ ಸರ್ಕಾರದಿಂದ ಸದ್ಯವೇ ಆದೇಶ ಬರಲಿದೆ. ಅದರಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಮುಷ್ಕರವನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಕಟಿಸಲು ಬುಧವಾರದಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿಯೇ ಷಡಾಕ್ಷರಿ ಅವರು ಈ ವಿಷಯವನ್ನು ಪ್ರಕಟಿಸಿದ್ದರು. ಅಲ್ಲದೆ ಈಗಾಗಲೇ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ವೇತನಸಹಿತ ರಜೆಯನ್ನು ಪ್ರಕಟಿಸುವಂತೆ ಕೋರಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘವು ಮನವಿಯನ್ನೂ ಸಲ್ಲಿಸಿದೆ.
ರಾಜ್ಯ ಸರ್ಕಾರವು ವೇತನವನ್ನು ಶೇ.17 ರಷ್ಟು ಹೆಚ್ಚಿಸಿ, ಅಧಿಕೃತ ಆದೇಶ ಹೊರಡಿಸಿದ್ದರಿಂದ ಹಾಗೂ ಎನ್‌ಪಿಎಸ್ ರದ್ದು ಮಾಡುವ ಕುರಿತು ತೀರ್ಮಾನಿಸಲು ವಿಶೇಷ ಸಮಿತಿ ರಚಿಸಿದ್ದರಿಂದ ಸರ್ಕಾರಿ ನೌಕರರ ಸಂಘವು ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡಿದೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ
ಮುಷ್ಕರದ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಿದ್ದು, ಎಲ್ಲ ಸರ್ಕಾರಿ ಸೇವೆಗಳನ್ನು ಬಂದ್ ಮಾಡಲಾಗಿತ್ತು. ರಾಜ್ಯಾದ್ಯಂತ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧವಾಗಿತ್ತು. ಆದರೆ ಮುಷ್ಕರ ಆರಂಭವಾದ ಮೂರು ಗಂಟೆಯ ಒಳಗೆ ಅದನ್ನು ಹಿಂದಕ್ಕೆ ಪಡೆಯಲಾಗಿತ್ತು. ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದರೂ ಕರ್ತವ್ಯದ ಸ್ಥಳದಿಂದ ದೂರವಿದ್ದವರಿಗೆ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಬುಧವಾರದಂದು ಕೆಲಸಕ್ಕೆ ಗೈರಾದ ಬಹುತೇಕ ನೌಕರರಿಗೆ ಇದರಿಂದ ಅನುಕೂಲವಾಗಲಿದೆ.
ಇದನ್ನೂ ಓದಿ: Govt. Employees strike : 17% ವೇತನ ಹೆಚ್ಚಿಸಿದ ಸಿಎಂ ಬೊಮ್ಮಾಯಿಗೆ ನೌಕರರ ಸಂಘದಿಂದ ಅಭಿನಂದನೆ
ನೌಕರರ ಕಾರ್ನರ್
Govt Employees News : ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆಗೆ ಚಾಲನೆ; ವೇಳಾಪಟ್ಟಿ ಇಲ್ಲಿದೆ!
ರಾಜ್ಯ ಸರ್ಕಾರವು ಸಾರ್ವತ್ರಿಕ ವರ್ಗಾವಣೆಗೆ ಅನುಮತಿ ನೀಡದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆಯು ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದೆ (Govt Employees News). ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ (Govt Employees News) ನೀಡಿದೆ. ಜತೆಗೆ ವರ್ಗಾವಣಾ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ.
ವರ್ಗಾವಣೆಗೆ ಇಚ್ಛಿಸುವ ಅಧಿಕಾರಿಗಳು/ ನೌಕರರು ಜೂನ್ 12 ರಿಂದ 26 ರವರೆಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಜುಲೈ 31ರ ಒಳಗೆ ಈ ವರ್ಗಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ. ಜುಲೈ 4 ರಿಂದ 10 ರವರೆಗೆ ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಪ್ರಪಟಿಸಲಾಗುತ್ತದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಏಳು ದಿನ ಕಾಲಾವಕಾಶ ನೀಡಲಾಗುತ್ತದೆ. ಜುಲೈ 14 ರಿಂದ ವೃತವಾರು ಸಮಾಲೋಚನೆಯನ್ನು ಪ್ರಾರಂಭಿಸಲಾಗುತ್ತದೆ.
ವೃಂದಬಲದ ಕಾರ್ಯನಿರತ ಹುದ್ದೆಯ ಶೇ. 15 ರಷ್ಟು ಸಂಖ್ಯೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಅವಕಾಶ ಇರುತ್ತದೆ ಎಂದು ಇಲಾಖೆಯು ತಿಳಿಸಿದ್ದು, ಶೇಕಡ 15 ರಷ್ಟು ವೃಂದಬಲದಲ್ಲಿ ಶೇ.2 ರಷ್ಟು ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಮಾಡಲು ಇಲಾಖೆಯು ತೀರ್ಮಾನಿಸಿದೆ.
ವರ್ಗಾವಣೆ ವೇಳಾಪಟ್ಟಿ ಇಲ್ಲಿದೆ ನೋಡಿ;
ʻʻಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಮತ್ತು ಗ್ರೂಪ್ ಡಿ ವರ್ಗದ ನೌಕರರಿಗೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6 ರಷ್ಟನ್ನು ಮೀರದಂತೆ ದಿನಾಂಕ 01-06-2023 ರಿಂದ 15-06-2023ರವರೆಗೆ ಸಾರ್ವತ್ರಿಕ ವರ್ಗಾವಣೆಯನ್ನು ಕೈಗೊಳ್ಳಲು ಅಯಾ ಇಲಾಖೆಯ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿದೆʼʼ ಎಂದು ಸರ್ಕಾರವು ಇತ್ತೀಚೆಗೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಈ ವರ್ಗಾವಣೆ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.
2015-16, 2017-18 ನೇ ಸಾಲಿನ ವರ್ಗಾವಣೆ ಸಮಯದಲ್ಲಿ ಸರ್ಕಾರವು 10 ವರ್ಷಗಳಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ತಜ್ಞ (ವೈದ್ಯಾಧಿಕಾರಿಗಳು, ಬಿ ವೃಂದ ಮತ್ತು ಸಿ. ವೃಂದದ ಹುದ್ದೆಗಳನ್ನು ಖಾಲಿ ಹುದ್ದೆಗಳೆಂದು ಪ್ರಕಟಿಸಿ, ವಯೋ ನಿವೃತ್ತಿ ಹೊಂದಲು 2 ವರ್ಷ ಸೇವೆ ಬಾಕಿ ಇರುವವರನ್ನು ಹೊರತುಪಡಿಸಿ) ಸಮಾಲೋಚನೆ ಮುಖಾಂತರ ಈ ಸ್ಥಳಗಳನ್ನು ಭರ್ತಿ ಮಾಡಲು ಹಾಗೂ ಈ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಹಾಜರಾದ ಬಳಿಕ ಕರ್ತವ್ಯದಿಂದ ಬಿಡುಗಡೆ ಹೊಂದಿದ ವೈದ್ಯರುಗಳನ್ನು ಹಾಗು ಇತರೆ ಬಿ ವೃಂದ ಮತ್ತು ಸಿ ವೃಂದದ ನೌಕರನ್ನು ಮುಂದಿನ ನೇಮಕಾತಿಗೆ ಆಯುಕ್ತಾಲಯಕ್ಕೆ ವರದಿ ಮಾಡಿಕೊಂಡ ನಂತರ ಅವರುಗಳಿಗೆ
ಸಮಾಲೋಚನೆ ಮುಖಾಂತರ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ ಸರ್ಕಾರ ಅನುಮತಿ ನೀಡಿತ್ತು. ಇದೇ ಕ್ರಮವನ್ನು 2023- 24 ನೇ ಸಾಲಿನಲ್ಲಿ ಅಳವಡಿಸಿಕೊಳ್ಳಲು ಅನುಮತಿ ನೀಡಬೇಕೆಂದು ಇಲಾಖೆಯ ಆಯುಕ್ತರು ಕೋರಿದ್ದು, ಇದಕ್ಕೆ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿವೆ.
ಇಲಾಖೆಯ ಅಧೀನದ 19 ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಟ್ಟದ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪ್ರಸ್ತುತ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಒಂದು ಬಾರಿಗೆ ಸಮಾಲೋಚನೆ ಮುಖಾಂತರ ಭರ್ತಿ ಮಾಡಲು ಕೂಡ ಇಲಾಖೆ ನಿರ್ಧರಿಸಿದೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಒಂದೇ ಕಚೇರಿ ಅಥವಾ ಆಸ್ಪತ್ರೆಯಲ್ಲಿ 15 ವರ್ಷಕ್ಕೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಡಿ ನೌಕರರು ವರ್ಗಾವಣೆ ಕೋರಿಕೆ ಅರ್ಜಿ ಸಲ್ಲಸಿದ ಸಂದರ್ಭದಲ್ಲಿ ಮಾತ್ರ ವರ್ಗಾವಣೆಗೆ ಪರಿಗಣಿಸಲಾಗುತ್ತದೆ. ಪತಿ-ಪತ್ನಿ ಪ್ರಕರಣ/ಅಂಗವಿಕಲ/ವಿಧವೆ/ವಿಧುರ ಪ್ರಕರಣದಡಿ ಒಂದು ಬಾರಿ ವರ್ಗಾವಣೆ ತೆಗೆದುಕೊಂಡ ನಂತರ ಕನಿಷ್ಠ ಮೂರು ವರ್ಷಗಳ ನಂತರವೇ ನಿಯಮಾನುಸಾರ ವರ್ಗಾವಣೆಯ ಅರ್ಜಿ ಪರಿಗಣಿಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ : Teacher Transfer : ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್; ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಉದ್ಯೋಗ
KPSC Departmental Examination : ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ; ಪ್ರವೇಶ ಪತ್ರ ಪ್ರಕಟ
ಕೆಪಿಎಸ್‌ಸಿಯು 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ (KPSC Departmental Examination) ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಒದಗಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ (KPSC Departmental Examination) ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಜೂನ್ 9 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜುಲೈ 9 ರವರೆಗೆ ನಡೆಯಲಿವೆ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ.
ಆಫ್‌ಲೈನ್ ಮಾದರಿಯಲ್ಲಿಯೇ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಸಂಬಂಧಿಸಿದಂತೆ ಜನವರಿ 6 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರಿ ನೌಕರರು (ಗ್ರೂಪ್-ಡಿ ನೌಕರರು ಹೊರತುಪಡಿಸಿ), ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ/ ಪ್ರಾಧಿಕಾರಗಳ ಕಾಯಂ ನೌಕರರಿಗೆ ಈ ಪರೀಕ್ಷೆ ನಡೆಸಲಾಗುತ್ತದೆ.
ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಅಧಿಸೂಚನೆಯಲ್ಲಿ ಆನ್‌ಲೈನ್ ಮಾದರಿಯ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿತ್ತಾದರೂ ಈಗ ಕೆಪಿಎಸ್‌ಸಿಯು ಆಫ್‌ಲೈನ್ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.
ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತಗೊಂಡಿದ್ದು, ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://kpsc.kar.nic.in/
ನೌಕರರ ಕಾರ್ನರ್
Teacher Transfer : ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್; ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಚುನಾವಣೆಯ ಕಾರಣದಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡದ ಬೆನ್ನಲ್ಲೆ ಶಾಲಾ ಶಿಕ್ಷಣ ಇಲಾಖೆಯು ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದೆ.
ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದೆ.
ಈ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ. 31 ರಂದು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇಲಾಖೆಯ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಈಗ ವೇಳಾಪಟ್ಟಿ ಪ್ರಕಟಿಸಿದೆ. ಇದರಿಂದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು / ತತ್ಸಮಾನ ವೃಂದದ ಶಿಕ್ಷಕರ ವರ್ಗಾವಣೆಗೆ ಕೊನೆಗೂ ದಿನ ಕೂಡಿಬಂದಂತಾಗಿದೆ.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್ 6 ರಿಂದ ಜುಲೈ 31 ರವರೆಗೆ ನಡೆಯಲಿದೆ. ಜೂನ್6 ರಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ಪರಿಷ್ಕೃತ ಕರಡು ಪಟ್ಟಿ ಪ್ರಕಟವಾಗಲಿದೆ. ಜೂನ್ 10 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಜೂನ್ 6 ಮತ್ತು 10 ರೊಳಗೆ ವರ್ಗಾವಣೆ ತಂತ್ರಾಂಶದ ಮೂಲಕ ಆದ್ಯತೆ ಕೋರಿ ಅರ್ಜಿ, ದಾಖಲೆ ಅಪ್‌ಲೋಡ್ ಮಾಡಲು ಅವಕಾಶ ನೀಡಲಾಗುತ್ತದೆ. ಜೂನ್ 14ಕಕ್ಕೆ ಕರಡು ಜೇಷ್ಠತಾ ಪಟ್ಟಿ ಪ್ರಕಟವಾಗಲಿದೆ.
ಜೂನ್ 17 ಕ್ಕೆ ಕೌನ್ಸಿಲಿಂಗ್ಗೆ ಲಭ್ಯವಿರುವ ವೃಂದವಾರು ವಿಷಯವಾರು ಖಾಲಿ ಹುದ್ದೆಗನ್ನು ಪ್ರಕಟಿಸಲಾಗುತ್ತದೆ. ಜುಲೈ 27 ಕ್ಕೆ ಅಂತಿಮ ಆದ್ಯತಾ ಪಟ್ಟಿಯಂತೆ ಪರಸ್ಪರ ವರ್ಗಾವಣೆಗಳ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ನಡೆಯಲಿದೆ.
ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿ ಇಲ್ಲಿದೆ;
ಕಳೆದ ವರ್ಷ ಜಾರಿಗೆ ಬಂದ ಹೊಸ ವರ್ಗಾವಣೆ ನಿಯಮದಂತೆ ಈ ವರ್ಗಾವಣೆ ನಡೆಯಲಿದ್ದು, ಪರಸ್ಪರ ವರ್ಗಾವಣೆಗೆ ಇದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ. ಇದುವರೆಗೆ ಒಂದು ಬಾರಿ ಮಾತ್ರ ಈ ರೀತಿಯ ವರ್ಗಾವಣೆ ಮಾಡಿಕೊಳ್ಳಬಹುದಾಗಿತ್ತು. ಒಮ್ಮೆ ವರ್ಗಾವಣೆಯಾದ ಬಳಿಕ ಮತ್ತೆ ಮೂರು ವರ್ಷ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂಬ ನಿಯಮವೂ ಇದರಲ್ಲಿ ಸೇರಿದೆ.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು, ಮಲೆನಾಡು ವಲಯ ಹಾಗೂ ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲೂಕುಗಳಿಗೆ ಹೋಗ ಬಯಸುವವರಿಗೆ ವಿಶೇಷ ಆದ್ಯತೆ ದೊರೆಯಲಿದೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಸಾರ್ವತ್ರಿಕ ವರ್ಗಾವಣೆ ಒಟ್ಟು ವೃಂದ ಬಲದ ಶೇ.11ರಷ್ಟು ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗದು. ಯಾವುದೇ ಒಂದು ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಅಥವಾ ಎಲ್ಲ ವೃಂದಗಳೂ ಸೇರಿ 15 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇ.25 ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ತಾಲೂಕಿಗೆ ವರ್ಗಾವಣೆಗೆ ಅವಕಾಶವಿರುತ್ತದೆ. ಈಗಾಗಲೇ ಶಿಕಕ್ಷರ ವರ್ಗಾವಣೆ ಮಾರ್ಗಸೂಚಿಯಲ್ಲಿರುವಂತೆ ಶಿಕ್ಷಕರ ವೇಯ್ಟೆಡ್ ಅಂಕಗಳ (ಸೇವಾ ಅಂಕಳಗ) ಲೆಕ್ಕಾಚಾರವನ್ನು ಹೊಸ ನಿಯಮಾವಳಿಗೆ ಸೇರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://www.schooleducation.kar.nic.in/indexKn.html
ಇದನ್ನೂ ಓದಿ : Teacher Transfer : ಶಾಲೆ ಆರಂಭದ ದಿನವೇ ಶಿಕ್ಷಕರಿಗೆ ಸಿಹಿ ಸುದ್ದಿ! ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಸರ್ಕಾರದ ಅನುಮತಿ
ನೌಕರರ ಕಾರ್ನರ್
Govt Employees News : ಸರ್ಕಾರಿ ನೌಕರರು ತಿಂಗಳು ಮುಗಿಯುವ ಮೊದಲೇ ವೇತನ ಪಡೆಯಬಹುದು! ರಾಜಸ್ಥಾನದಲ್ಲಿಈ ಸೌಲಭ್ಯ
ರಾಜಸ್ಥಾನ ಸರ್ಕಾರವು ರಾಜ್ಯದ ಸರ್ಕಾರಿ ನೌಕರರಿಗೆ ತಮ್ಮ ವೇತನವನ್ನು ಮುಂಗಡವಾಗಿ ಪಡೆಯಲು ಅವಕಾಶ (Govt Employees News) ನೀಡಿದೆ. ಈ ಯೋಜನೆ ಜೂನ್ 1 ರಿಂದಲೇ ಜಾರಿಗೆ ಬಂದಿದೆ.
ಜೈಪುರ: ರಾಜಸ್ಥಾನ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ (Govt Employees News) ನೀಡಿದೆ. ಅಲ್ಲಿಯ ಸರ್ಕಾರಿ ನೌಕರರು ಹಣದ ಅಗತ್ಯವಿದ್ದರೆ ವೇತನ ನೀಡುವುದಕ್ಕಿಂತ ಮೊದಲೇ ಮುಂಗಡವಾಗಿ ಹಣವನ್ನು ಪಡೆಯಬಹುದು. ಇದಕ್ಕಾಗಿ ಅಲ್ಲಿಯ ಸರ್ಕಾರ ʻಅರ್ನ್‌ಡ್ ಸ್ಯಾಲರಿ ಅಡ್ವಾನ್ಸ್ ಡ್ರಾ ಸ್ಕೀಮ್ʼ (Earned Salary Advance Drawal Scheme) ಎಂಬ ಯೋಜನೆ ರೂಪಿಸಿದೆ. ಈ ಯೋಜನೆಯನ್ನು ಮೇ 31ರಂದು ರಾಜಸ್ಥಾನದ ಆರ್ಥಿಕ ಇಲಾಖೆಯು ಘೋಷಿಸಿದೆ.
ಸರ್ಕಾರಿ ನೌಕರರಿಗೆ ಈ ರೀತಿ ಮುಂಗಡವಾಗಿ ವೇತನ ಪಡೆಯಲು ಅವಕಾಶ ಮಾಡಿಕೊಟ್ಟ ದೇಶದಲ್ಲಿಯೇ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಿದೆ. ಜೂನ್ 1ರಿಂದ ಈ ಯೋಜನೆ ಜಾರಿಗೆ ಬಂದಿದೆ. ಇಂಟ್ರಿಗೆಟೆಡ್ ಫೈನಾನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (IFMS-3.0) ಮೂಲಕ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಸರ್ಕಾರಿ ನೌಕರರು ತಿಂಗಳಿನಲ್ಲಿ ಎಷ್ಟು ಬಾರಿ ಬೇಕಾದರೂ ಮುಂಗಡವಾಗಿ ಹಣವನ್ನು ಪಡೆಯಬಹುದು. ಆದರೆ ಅವರು ಪಡೆಯುವ ಮಾಸಿಕ ವೇತನದ ಶೇ.50 ಕ್ಕಿಂತ ಹೆಚ್ಚು ಹಣವನ್ನು ಮುಂಗಡವಾಗಿ ನೀಡಲಾಗುವುದಿಲ್ಲ. ಒಂದು ವೇಳೆ ನೌಕರರು ತಿಂಗಳ 21 ನೇ ತಾರೀಖಿನೊಳಗೆ ಮುಂಗಡ ಹಣ ಪಡೆದುಕೊಂಡಿದ್ದರೆ, ಅದೇ ತಿಂಗಳ ವೇನತದಲ್ಲಿಯೇ ಈ ಹಣವನ್ನು ಹೊಂದಿಸಿ, ವೇತನ ನೀಡಲಾಗುತ್ತದೆ.
ಆನ್‌ಲೈನ್‌ನಲ್ಲಿಯೇ ಮುಂಗಡ ಪಡೆಯುವ ವ್ಯವಸ್ಥೆ
ಸರ್ಕಾರಿ ನೌಕರರು ಆನ್‌ಲೈನ್‌ನಲ್ಲಿಯೇ IFMS 3.0 ಸಾಫ್ಟ್‌ವೇರ್‌ನಲ್ಲಿ ಲಾಗಿನ್ ಆಗಿ ಅಥವಾ IFMS ವೆಬ್‌ಸೈಟ್‌ನಲ್ಲಿ ಲಾಗಿನ್ ಆಗಿ ಪಡೆದುಕೊಳ್ಳಬಹುದಾಗಿರುತ್ತದೆ. ಇದು ಓಟಿಪಿ ಆಧಾರಿತ ಸೇವೆಯಾಗಿರುತ್ತದೆ.
ಈ ರೀತಿ ಸರ್ಕಾರಿ ನೌಕರರು ಮುಂಗಡವಾಗಿ ಹಣ ಪಡೆದರೆ ಇದಕ್ಕೆ ಯಾವುದೇ ಬಡ್ಡಿಯನ್ನಾಗಲೀ, ಹೆಚ್ಚುವರಿ ಶುಲ್ಕವನ್ನಾಗಲೀ ವಿಧಿಸಲಾಗುವುದಿಲ್ಲ ಎಂದು ಆರ್ಥಿಕ ಇಲಾಖೆಯು ಹೇಳಿದೆ. ಕೇವಲ ಹಣಕಾಸು ವರ್ಗಾವಣೆ ಶುಲ್ಕವನ್ನು ಮಾತ್ರ ಪಡೆದುಕೊಳ್ಳಲಾಗುತ್ತದೆ. ಇದರಿಂದಾಗಿ ಸರ್ಕಾರಿ ನೌಕರರು ತುರ್ತಾಗಿ ಹಣ ಬೇಕಾದಾಗ ಹೆಚ್ಚಿನ ಬಡ್ಡಿಗೆ ಸಾಲ ಪಡೆಯುವುದು ತಪ್ಪಲಿದೆ ಎಂದು ಸರ್ಕಾರ ಹೇಳಿದೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ
ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ರಾಜಸ್ಥಾನದ ಸರ್ಕಾರಿ ನೌಕರರು ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ನೌಕರರ ಒತ್ತಡಕ್ಕೆ ಮಣಿದಿದ್ದ ರಾಜಸ್ಥಾನ ಸರ್ಕಾರವು ನೂತನ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ (ಓಪಿಎಸ್) ಜಾರಿಗೆ ತಂದಿತ್ತು.
ಇದನ್ನೂ ಓದಿ: NPS News : ಗ್ಯಾರಂಟಿಗಳಂತೆ ಓಪಿಎಸ್ ಜಾರಿ ಕೂಡ ಸದ್ಯಕ್ಕಿಲ್ಲ; ಸರ್ಕಾರ ಯೋಚಿಸುತ್ತಿರುವುದಾದರೂ ಏನು?
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ12 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ14 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಉತ್ತರ ಕನ್ನಡ22 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ17 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ23 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ23 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?
-
ಕರ್ನಾಟಕ8 hours ago
Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!