ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಆದರೆ ಸಿಗದ ಸಮ್ಮತಿ - Vistara News

ನೌಕರರ ಕಾರ್ನರ್

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಆದರೆ ಸಿಗದ ಸಮ್ಮತಿ

ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ ಪ್ರಸ್ತಾಪದ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆಯಾದರೂ ಇದಕ್ಕೆ ಸಮ್ಮತಿ ನೀಡಲಾಗಿಲ್ಲ. ಹೀಗಾಗಿ ಸಾವಿರಾರು ಶಿಕ್ಷಕರಿಗೆ ನಿರಾಸೆಯಾಗಿದೆ.

VISTARANEWS.COM


on

teacher transfer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ (graduate teacher promotion) ಪ್ರಸ್ತಾಪದ ಕುರಿತು ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆಯಾದರೂ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿಲ್ಲ.

ಇದರಿಂದಾಗಿ ಕಳೆದ ಇಪ್ಪತ್ತು, ಇಪ್ಪತ್ತೈದು ವರ್ಷಗಳಿಂದ ಶಾಲೆಗಳಲ್ಲಿ ಬೋಧಿಸುತ್ತಿರುವ ಸುಮಾರು 75 ಸಾವಿರಕ್ಕೂ ಹೆಚ್ಚು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನಿರಾಸೆಯಾಗಿದೆ.

ʻʻಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಬದಲಾವಣೆ ಮಾಡುವ ಪ್ರಸ್ತಾಪದ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಆದರೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಈ ಪ್ರಸ್ತಾಪಕ್ಕೆ ಸಂಪುಟದ ಒಪ್ಪಿಗೆ ಸಿಕ್ಕಿಲ್ಲʼʼ ಎಂದು ಸಚಿವ ಸಂಪುಟದ ಸಭೆಯ ನಂತರ ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಪಿಯು ನಂತರ ಎರಡು ವರ್ಷಗಳ ಶಿಕ್ಷಣ ಡಿಪ್ಲೊಮಾ (ಡಿ.ಇಡಿ) ಪೂರೈಸಿದ ಅಭ್ಯರ್ಥಿಗಳು ಪ್ರಾಥಮಿಕ ಶಾಲೆಗಳಿಗೆ ನೇಮಕವಾಗಿದ್ದು, ಒಂದರಿಂದ ಏಳನೇ ತರಗತಿಯವರೆಗೆ ಪಾಠ ಮಾಡುತ್ತಿದ್ದರು. ಅವರಲ್ಲಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಸೇವಾ ಅವಧಿಯಲ್ಲಿಯೇ ಪದವಿ ಶಿಕ್ಷಣ ಪೂರೈಸಿದ್ದಾರೆ. ಇಂತಹ ಶಿಕ್ಷಕರಲ್ಲಿ ಶೇ.40 ರಷ್ಟು ಮಂದಿಯನ್ನು ಯಾವುದೇ ಪರೀಕ್ಷೆ ನಡೆಸದೇ ಪದವೀಧರ ಪ್ರಾಥಮಿಕ ಶಿಕ್ಷಕರ ಸ್ಥಾನಕ್ಕೆ ಅಂದರೆ 6 ರಿಂದ 8 ನೇ ತರಗತಿಯ ಶಿಕ್ಷಕರ ಸ್ಥಾನಕ್ಕೆ ಬಡ್ತಿ ನೀಡಬೇಕೆಂಬುದು ಈ ಶಿಕ್ಷಕರ ಒತ್ತಾಯವಾಗಿತ್ತು.

2017ರಲ್ಲಿ ತಿದ್ದುಪಡಿ ಮಾಡಿರುವ ಪ್ರಾಥಮಿಕ ಶಾಲಾ ಶೀಕ್ಷಕರ ವೃಂದ ಮತ್ತು ನೇಮಕಾತಿ ನಿಯಮದಿಂದ ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (graduate teacher promotion) ಬಡ್ತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಈಗ ನಿಯಮಗಳಿಗೆ ಮತ್ತೊಂದು ತಿದ್ದುಪಡಿ ಮಾಡುವ ಮೂಲಕ ಈ ಅನ್ಯಾಯವನ್ನು ಸರಿಪಡಿಸಬೇಕೆಂಬ ಶಿಕ್ಷಕರ ಬೇಡಿಕೆ ಇನ್ನೂ ಬೇಡಿಕೆಯಾಗಿಯೇ ಉಳಿದಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸೇವಾ ನಿರತ ಪದವೀಧರ ಶಿಕ್ಷಕರ ಪರವಾಗಿ ಈ ಬಡ್ತಿಗಾಗಿ ಹೋರಾಟ ನಡೆಸಿಕೊಂಡು ಬಂದಿತ್ತು. ಸಂಘದ ನಿಯೋಗವು ಇದಕ್ಕಾಗಿ ಹಲವಾರು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿತ್ತು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಬದಲಾವಣೆ ಮಾಡುವ ಕುರಿತು ಸರ್ಕಾರ ತಾತ್ವಿಕ ಒಪ್ಪಿಗೆ ನೀಡುವಂತೆ ಮಾಡಿದ್ದ ಸಂಘವು ಇದಕ್ಕೆ ಸಂಬಂಧಿಸಿದ ಕಡತವು ತ್ವರಿತವಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅನುಮತಿ ಪಡೆದುಕೊಳ್ಳುವಂತೆ ನೋಡಿಕೊಂಡಿತ್ತು.

ಈಗ ಈ ಪ್ರಸ್ತಾಪಕ್ಕೆ ಸಚಿವ ಸಂಪುಟ ಒಪ್ಪಿಗೆ ಪಡೆಯುವುದು ಮಾತ್ರ ಬಾಕಿ ಇತ್ತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದು ಪ್ರಸ್ತಾಪಗೊಂಡಿತಾದರೂ ಅಂತಿಮ ಒಪ್ಪಿಗೆ ಸಿಕ್ಕಿಲ್ಲ. ಇದು ನಮಗೆ ಬಹಳ ಬೇಸರ ಮೂಡಿಸಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.

ಇದನ್ನೂ ಓದಿ: 7th pay commission : ಸರ್ಕಾರಿ ನೌಕರರಿಗೆ ಶನಿವಾರವೂ ರಜೆ; ಸಂಘದ ಬೇಡಿಕೆ ಕುರಿತು ಬಿಸಿಬಿಸಿ ಚರ್ಚೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ನೌಕರರ ಕಾರ್ನರ್

KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

KSET- 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಜುಲೈ 22ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ ನಡೆಯಲಿದೆ.

VISTARANEWS.COM


on

KSET-2024
Koo

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನದಂತೆ ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ (KSET- 2024) ನಡೆಸುವುದಾಗಿ ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಅರ್ಹ ಅಭ್ಯರ್ಥಿಗಳು KEA ವೆಬ್ ಸೈಟ್ http://kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಕೆಸೆಟ್ (KSET) 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

1) ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
5) ಪರೀಕ್ಷಾ ದಿನಾಂಕ- ನವೆಂಬರ್‌ 24

ವಯೋಮಿತಿ:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.

ಇದನ್ನೂ ಓದಿ | Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಪರೀಕ್ಷಾ ಶುಲ್ಕ, ಪಾವತಿಸುವ ವಿಧಾನ

1) ಪರೀಕ್ಷಾ ಶುಲ್ಕ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: 1,000 ರೂ.
ಪ್ರವರ್ಗ-I, ಎಸ್‌ಸಿ, ಎಸ್‌ಟಿ, ವಿಶೇಷಚೇತನರು, ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ: 700 ರೂ.

2) ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ವಿಶೇಷಚೇತನರಾದ ಪ್ರವರ್ಗ-I, ಎಸ್‌ಸಿ, ಎಸ್‌ಟಿ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. (Medical Certificate with 40% or more disability )

ಪರೀಕ್ಷಾ ವಿಧಾನ, ಪರೀಕ್ಷಾ ದಿನಾಂಕ

ಕೆಸೆಟ್ (KSET) ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷೆಯು ನವೆಂಬರ್ 24 ರಂದು ಒಂದು ಅವಧಿಯಲ್ಲಿ ಈ ಕೆಳಕಂಡಂತೆ ನಡೆಯುವುದು.

ಪತ್ರಿಕೆ-1: 50 ಪ್ರಶ್ನೆ (100 ಅಂಕ)
ಪತ್ರಿಕೆ-2: 100 ಪ್ರಶ್ನೆ (200 ಅಂಕ)
(ಸಮಯ-ಬೆಳಗ್ಗೆ 10ರಿಂದ ಮ.1 ಗಂಟೆವರೆಗೆ)

ಫಲಿತಾಂಶ ಪ್ರಕಟಣೆಯ ವಿಧಾನ

ಯುಜಿಸಿ ಮಾರ್ಗಸೂಚಿಗಳ ಪ್ರಕಾರ KSETನ ಮಾನದಂಡವು UGC-NETನ ಮಾನದಂಡದ ಪ್ರಕಾರವಾಗಿರುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಅಭ್ಯರ್ಥಿಗಳು ಪೇಪರ್-I ಮತ್ತು ಪೇಪರ್-II ರ ಪತ್ರಿಕೆಗಳ ಒಟ್ಟು ಅಂಕಗಳಲ್ಲಿ ಕೆಳಗೆ ನಿರ್ದಿಷ್ಟಪಡಿಸಿದ ಕನಿಷ್ಠ ಅಂಕಗಳನ್ನು ಪಡೆಯಬೇಕು.

ಸಾಮಾನ್ಯ ವರ್ಗ(GM): ಎರಡೂ ಪತ್ರಿಕೆಗಳಲ್ಲೂ ಸೇರಿ ಒಟ್ಟು ಶೇ. 40 ಅಂಕಗಳು
ಎಸ್‌ಸಿ. ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ವಿಶೇಷಚೇತನರು, ತೃತೀಯ ಲಿಂಗಿಗಳು: ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳು

ಅರ್ಹತಾ ನಿಬಂಧನೆಗಳು

1) ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ, ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತ ಗೊಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-1, IIA, IIB, IIIA, IIIB), ವಿಕಲಚೇತನರು (PwD) ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು (ಪೂರ್ಣಾಂಕಿತ ಗೊಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.

2) ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರದೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು, ಸಾಮಾನ್ಯ ವರ್ಗದವರು ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಕಲಚೇತನರು (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆ ರದ್ದಾಗುತ್ತದೆ.

3) ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿಯೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕು. ಪ್ರಸ್ತುತ ಕೆಸೆಟ್ ಪ್ರಕಟಣೆಯಲ್ಲಿ ಇಲ್ಲದಿರುವ ವಿಷಯಗಳಿಗೆ, ಅಭ್ಯರ್ಥಿಗಳು ವರ್ಷದಲ್ಲಿ ಎರಡು ಬಾರಿ ನಡೆಯುವ ಯು.ಜಿ.ಸಿ, ಎನ್.ಇ.ಟಿ. ಅಥವಾ ಯು.ಜಿ.ಸಿ-ಸಿ.ಎಸ್.ಐ.ಆರ್-ಎನ್.ಇ.ಟಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

4) 1991ರ ಸೆಪ್ಟೆಂಬರ್ 19ರೊಳಗೆ ಸ್ನಾತಕೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿ (ಫಲಿತಾಂಶ ಘೋಷಣೆಯ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ (55%ರ ಬದಲಾಗಿ 50%).

5) ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಮೀಸಲಾತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲೇ ಸ್ಪಷ್ಟವಾಗಿ ನಮೂದಿಸಿರಬೇಕು. SC, ST, CAT-1, IIA, IIB, IIIA, IIIB ಅಭ್ಯರ್ತಿಗಳು ಸಕ್ಷಮ ಪ್ರಾಧಿಕಾರಗಳು ನೀಡುವ ಪ್ರವರ್ಗ ಪ್ರಮಾಣಪತ್ರಗಳನ್ನು ಲಗತ್ತಿಸಬೇಕು. ಈ ಅಭ್ಯರ್ಥಿಗಳ ಪ್ರಮಾಣ ಪತ್ರಗಳು ಯಾವುದೇ ಹಂತದಲ್ಲಾದರೂ, ಸುಳ್ಳು ಎಂದು ಸಾಬೀತಾದರೆ ಅವರ ಆಭ್ಯರ್ಥಿತ್ವವನ್ನು ಮುನ್ಸೂಚನೆ ಇಲ್ಲದೆ ರದ್ದುಗೊಳಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

6) ಹೊರರಾಜ್ಯದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗಧಿತ ಕನಿಷ್ಟ 55% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ ಸಾಮಾನ್ಯ ವರ್ಗದಡಿಯಲ್ಲಿ ಪ್ರವೇಶಾತಿಗೆ ನೊಂದಾಯಿಸಬಹುದು. SC/ ST/OBC ಅರ್ಹತೆಯ ನಿಯಮವು ಕೇವಲ ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.

7) ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಅವರ ಅಭ್ಯರ್ಥಿತನವು ತಾತ್ಕಾಲಿಕವೆಂದು ಭಾವಿಸಿಕೊಳ್ಳತಕ್ಕದ್ದು. ಪ್ರವೇಶಾತಿ ಪಡೆದ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರನ್ನು ಅರ್ಹ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದು ತಿಳಿಯಬಾರದು. ಅಭ್ಯರ್ಥಿಗಳ ಅರ್ಹತಾ ನಿಬಂಧನೆಗಳನ್ನು ಪರಿಶೀಲಿಸಿದ ನಂತರ ಅವರ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು.

8) ಈಗಾಗಲೇ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂಬರುವ ಕೆಸೆಟ್ ಪರೀಕ್ಷೆಗೆ ಆದೇ ವಿಷಯದಲ್ಲಿ (Same Subject) ಅರ್ಜಿ ಸಲ್ಲಿಸುವಂತಿಲ್ಲ. ಕೆಸೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಿದ್ದು ಕಂಡು ಬಂದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ರದ್ದುಗೊಳಿಸಲಾಗುವುದು ಹಾಗೂ ಅವರು ಹಿಂದೆ ಪಡೆದಿರುವ ಕೆಸೆಟ್ ಪರೀಕ್ಷೆಯ ಅರ್ಹತೆಯನ್ನು ಕೂಡ ಡಿನೋಟಿಫಿಕೇಷನ್ ಮೂಲಕ ಹಿಂಪಡೆಯಲಾಗುವುದು.

9) ಭಾರತೀಯ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾ / ಪ್ರಮಾಣಪತ್ರ ಅಥವಾ ವಿದೇಶಿ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ವಿದೇಶಿ ಪದವಿ / ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ಹಿತದೃಷ್ಟಿಯಿಂದ, ಮಾನ್ಯತೆ ಪಡೆದ ಭಾರತೀಯ ಸ್ನಾತಕೋತ್ತರ ಪದವಿಯೊಂದಿಗೆ ತಮ್ಮ ಡಿಪ್ಲೊಮಾ/ ಪದವಿ/ ಪ್ರಮಾಣಪತ್ರದ ಸಮಾನತೆಯನ್ನು (ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ನವದೆಹಲಿ) ಯಿಂದ ಖಚಿತಪಡಿಸಿಕೊಳ್ಳಬೇಕು.

ವಿನಾಯಿತಿ:

ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು / ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ / ಅನುದಾನಿತ / ಖಾಸಗಿ) ನೇಮಕವಾಗಬೇಕಾದರೆ, ಆಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ ಎನ್.ಇ.ಟಿ ಪರೀಕ್ಷೆಯಲ್ಲಿ ಆರ್ಹತೆ ಪಡೆದಿರಬೇಕೆಂಬ ನಿಯಮವಿದೆ.

ಅ) ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಮತ್ತು ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.

ಆ) ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್ / ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇ) ಕೆಸೆಟ್ ಅಭ್ಯರ್ಥಿಗಳಿಗೆ 1ನೇ ಜೂನ್ 2002ಕ್ಕಿಂತ ಮೊದಲೇ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 1ನೇ ಜೂನ್ 2002ರ ನಂತರ ಕೆಸೆಟ್‌ನಲ್ಲಿ ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.

Continue Reading

ಕರ್ನಾಟಕ

Govt Employees: ವಿವಿಧ ಬೇಡಿಕೆ ಈಡೇರಿಸಲು ಮುಖ್ಯ ಕಾರ್ಯದರ್ಶಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

Govt Employees: ಬೆಂಗಳೂರು ನಗರದ 3000ಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರು, ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಬಳಿಕ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

VISTARANEWS.COM


on

Govt Employees
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ನೇತೃತ್ವದ ನಿಯೋಗ, ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ಗೆ ಮನವಿ ಪತ್ರ ಸಲ್ಲಿಸಿತು.
Koo

ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನ, ಹಳೆಯ ಪಂಚಣಿ ಯೋಜನೆ (ಒಪಿಎಸ್‌), ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ನೇತೃತ್ವದ ನಿಯೋಗವು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿತು.

ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೌಕರರ ಸಂಘ ಹಮ್ಮಿಕೊಂಡಿರುವ ಪ್ರತಿಭಟನೆಯ ಮೊದಲ ಹಂತವಾಗಿ ತಹಸೀಲ್ದಾರ್‌, ಜಿಲ್ಲಾಧಿಕಾರಿಗಳು, ಸ್ಥಳೀಯ ಶಾಸಕರು ಮತ್ತು ಸಚಿವರಿಗೆ ಮನವಿ ಪತ್ರ ನೀಡುವ ಮೂಲಕ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುತ್ತಿದೆ. ಈ ನಡುವೆ ಶುಕ್ರವಾರ, ಬೆಂಗಳೂರು ನಗರದ ಎಲ್ಲಾ ಇಲಾಖೆಗಳ ಸುಮಾರು 3000ಕ್ಕೂ ಹೆಚ್ಚು ನೌಕರರು, ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು

1) ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು: ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಯಥಾವತ್ತಾಗಿ 01-07-2022ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, ದಿ: 01-04-2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು.

2) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು: ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

3) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು.

ಬೇಡಿಕೆ ಈಡೇರಿಸದಿದ್ದರೆ ಜು. 29ರಿಂದ ಮುಷ್ಕರ; ಸಿ.ಎಸ್‌.ಷಡಾಕ್ಷರಿ ಎಚ್ಚರಿಕೆ

ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದ ಪಕ್ಷದಲ್ಲಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ವೃಂದ ಸಂಘಗಳಿಂದ ಜುಲೈ 29-07-2024 ರಿಂದ ರಾಜ್ಯಾದಾದ್ಯಂತ ಅನಿರ್ದಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರುಹಾಜರಾಗದೆ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಏಳನೇ ವೇತನ ಆಯೋಗ, ಒಪಿಎಸ್‌ ಸೇರಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಸರ್ಕಾರವು ಜುಲೈ 28ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ ನಾವು ಜುಲೈ 29ರಿಂದ ಮುಷ್ಕರ ಆರಂಭಿಸುತ್ತೇವೆ. ಕೆಲಸ ಮಾಡದೆ ಮನೆಯಲ್ಲಿಯೇ ಇರುತ್ತೇವೆ. ಎಲ್ಲವನ್ನೂ ಗಮನಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ರಾಜ್ಯ ಸರ್ಕಾರವು ಬೇಡಿಕೆ ಈಡೇರಿಸಿದ ಬಳಿಕವೇ ಕೆಲಸಕ್ಕೆ ಹಾಜರಾಗುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ | Govt Employees: ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಮುಷ್ಕರ; ಸಿ.ಎಸ್‌.ಷಡಾಕ್ಷರಿ ಎಚ್ಚರಿಕೆ

ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ, ಬಿ.ಬಿ.ಎಂ.ಪಿ. ಅಧಿಕಾರಿ-ನೌಕರರ ಸಂಘದ ಅಧ್ಯಕ್ಷರಾದ ಅಮೃತರಾಜ್, ಕೆ.ಪಿ.ಟಿ.ಸಿ.ಎಲ್. ಅಧಿಕಾರಿ-ನೌಕರರ ಸಂಘದ ಅಧ್ಯಕ್ಷರಾದ ಬಲರಾಂ ಭಜಂತ್ರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಾ.ಎಲ್. ಭೈರಪ್ಪ ಹಾಗೂ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ, ಟಿ. ಶ್ರೀನಿವಾಸ್, ಖಜಾಂಜಿಗಳಾದ ಡಾ. ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷರಾದ ಎಂ.ವಿ. ರುದ್ರಪ್ಪ, ಶ್ರೀ ಎಸ್. ಬಸವರಾಜು, ರಾಜ್ಯ ಕಾರ್ಯದರ್ಶಿಗಳಾದ ಡಾ. ನೆಲ್ಯುದ್ರಿ ಸದಾನಂದ ಹಾಗೂ ರಾಜ್ಯ ಸಂಘದ ರಾಜ್ಯ ಸಂಘದ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ರಾಜ್ಯ ಪರಿಷತ್ ಸದಸ್ಯರುಗಳು ಹಾಜರಿದ್ದರು.

Continue Reading

ಕರ್ನಾಟಕ

Govt Employees: ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಮುಷ್ಕರ; ಸಿ.ಎಸ್‌.ಷಡಾಕ್ಷರಿ ಎಚ್ಚರಿಕೆ

Govt Employees: ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ (Karnataka Government) ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Govt Employees
Koo

ಬೆಂಗಳೂರು: ಹಳೆಯ ಪಂಚಣಿ ಯೋಜನೆ ಜಾರಿ, ಏಳನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿ ಕರ್ನಾಟಕ ಸರ್ಕಾರಿ ನೌಕರರ (Govt Employees) ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇದೆ. ಇದರ ಬೆನ್ನಲ್ಲೇ, ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ (Karnataka Government) ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಏಳನೇ ವೇತನ ಆಯೋಗ, ಒಪಿಎಸ್‌ ಸೇರಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಸರ್ಕಾರವು ಜುಲೈ 28ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ ನಾವು ಜುಲೈ 29ರಿಂದ ಮುಷ್ಕರ ಆರಂಭಿಸುತ್ತೇವೆ. ಕೆಲಸ ಮಾಡದೆ ಮನೆಯಲ್ಲಿಯೇ ಇರುತ್ತೇವೆ. ಎಲ್ಲವನ್ನೂ ಗಮನಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ರಾಜ್ಯ ಸರ್ಕಾರವು ಬೇಡಿಕೆ ಈಡೇರಿಸಿದ ಬಳಿಕವೇ ಕೆಲಸಕ್ಕೆ ಹಾಜರಾಗುತ್ತೇವೆ” ಎಂದು ತಿಳಿಸಿದರು.

Reservation in outsourcing

ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು

1) ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು: ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಯಥಾವತ್ತಾಗಿ 01-07-2022ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, ದಿ: 01-04-2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು.

2) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು: ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

3) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು.

ವೇತನ ಆಯೋಗ ವರದಿ

ರಾಜ್ಯ 6ನೇ ವೇತನ ಆಯೋಗದ ವರದಿಯು ಅನುಷ್ಟಾನಗೊಂಡು ದಿ: 31-06-2022ಕ್ಕೆ 5 ವರ್ಷ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ದಿನಾಂಕ:01-07-2022ರಿಂದ ಪರಿಷ್ಕರಣೆಗೊಳಿಸಬೇಕಾಗಿತ್ತು. ಸಂಘವು ಸರ್ಕಾರಕ್ಕೆ ಒತ್ತಡ ತಂದ ಹಿನ್ನೆಲೆಯಲ್ಲಿ; ಈ ಹಿಂದಿನ ಸರ್ಕಾರವು 19-11-2022 ರಂದು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್‌ ರಾವ್‌ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಆಯೋಗವು ದಿ:16-03-2024ರಂದು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದೆ. ವೇತನ ಆಯೋಗ ರಚನೆಯಾಗಿ ಇಂದಿಗೆ 19 ತಿಂಗಳು ಕಳೆದಿದ್ದು, ಇಂದಿಗೆ ಸರ್ಕಾರ ವರದಿ ಪಡೆದು 04 ತಿಂಗಳು ಪೂರ್ಣಗೊಳ್ಳುತ್ತಿದೆ.

ಈ ಮಧ್ಯೆ ಸಂಘವು ದಿನಾಂಕ: 01-03-2023 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡ ಪರಿಣಾಮ ಸರ್ಕಾರವು ದಿನಾಂಕ: 01-04-2023 ರಿಂದ ಅನ್ವಯವಾಗುವಂತೆ ಶೇ. 17 ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಸರ್ಕಾರಿ ಆದೇಶ ಹೊರಡಿಸಿತ್ತು. 27-02-2024ರಂದು ರಾಜ್ಯ ಮಟ್ಟದ ಮಹಾ ಸಮ್ಮೇಳನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, 7ನೇ ವೇತನ ಆಯೋಗವು ವರದಿ ನೀಡಿದ ನಂತರ ಜಾರಿಗೊಳಿಸುವ ಸ್ಪಷ್ಟ ಭರವಸೆಯನ್ನು ನೌಕರರಿಗೆ ನೀಡಿದ್ದರು. ಈ ಸಂಬಂಧ ಮುಖ್ಯಮಂತ್ರಿಗಳನ್ನು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಸಂಘದ ನಿಯೋಗ
ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಹಳೇ ಪಿಂಚಣಿ ಯೋಜನೆ

ಸಂಘದ ಮತ್ತೊಂದು ಪ್ರಮುಖ ಬೇಡಿಕೆಯಾದ 2006ರ ನಂತರ ಸರ್ಕಾರಿ ಸೇವೆಗೆ ನೇಮಕವಾದ ನೌಕರರ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಲುವಾಗಿ ಈ ಹಿಂದಿನ ಸರ್ಕಾರ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ದಿ: 01-03-2023 ರಂದು ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಇದುವರೆವಿಗೂ ಒಂದೂ ಸಭೆಯನ್ನು ನಡೆಸಿಲ್ಲ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನವನ್ನೂ ಸಹ ನಡೆಸಿಲ್ಲ. ಅಲ್ಲದೆ ಈ ಸಂಬಂಧ ಸರ್ಕಾರಕ್ಕೆ ಯಾವುದೇ ವರದಿಯನ್ನು ಇಲ್ಲಿಯವರೆಗೂ ನೀಡಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಎನ್.ಪಿ.ಎಸ್. ಯೋಜನೆಯಲ್ಲಿ ನೇಮಕಗೊಂಡು ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ ಮಾಸಿಕ ಕೇವಲ ರೂ.1500 ಪಿಂಚಣಿ ಲಭ್ಯವಾಗುತ್ತಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2.50 ಲಕ್ಷ ಎನ್.ಪಿ.ಎಸ್ ಯೋಜನೆ ವ್ಯಾಪ್ತಿಯ ನೌಕರರ ಸಂಧ್ಯಾ ಕಾಲದ ಬದುಕು ಆರ್ಥಿಕ ಭದ್ರತೆಯಿಲ್ಲದೆ ದುಸ್ತರಗೊಳ್ಳುತ್ತಿದೆ.

ಆರೋಗ್ಯ ಸಂಜೀವಿನಿ ಯೋಜನೆ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಸಚಿವ ಸಂಪುಟದ ಅನುಮೋದನೆ ಪಡೆದು ಈ ಯೋಜನೆಯ ರೂಪ-ರೇಷೆಗಳನ್ನು ಸಿದ್ಧಪಡಿಸಿ ನಿರ್ವಹಣೆ ಮಾಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಜವಾಬ್ದಾರಿಯನ್ನು ನೀಡಿ 5-9-2022 ರಂದು ಸರ್ಕಾರಿ ಆದೇಶ ಹೊರಡಿಸಿದೆ. ಹಿಂದಿನ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯನ್ನು 20-03-2023
ರಂದು ಸಾಂಕೇತಿಕವಾಗಿ ಲೋಕಾರ್ಪಣೆ ಮಾಡಿದ್ದರು. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ರಾಜ್ಯದ ಬಹಳಷ್ಟು ಸಿ ಮತ್ತು ಡಿ ವರ್ಗದ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಗಂಭೀರ ಸ್ವರೂಪದ ಖಾಯಿಲೆಗಳಾದಲ್ಲಿ ಲಕ್ಷಾಂತರ ರೂಗಳನ್ನು ಭರಿಸಲು ಕಷ್ಟವಾಗುತ್ತಿದೆ ಎನ್ನುವುದನ್ನು ಷಡಾಕ್ಷರಿ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: Govt Employees: ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್‌ ನೀಡಲು ರಾಜ್ಯ ಸರ್ಕಾರ ಆದೇಶ!

Continue Reading

ಪ್ರಮುಖ ಸುದ್ದಿ

Govt Employees: ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್‌ ನೀಡಲು ರಾಜ್ಯ ಸರ್ಕಾರ ಆದೇಶ!

Govt Employees: ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆ ಅಡಿಯಲ್ಲಿ 2018ರ ಏಪ್ರಿಲ್‌ 1ರಿಂದ 2020ರ ಮಾರ್ಚ್‌ 31ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

VISTARANEWS.COM


on

Govt Employees
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Govt Employees) ಜೀವ ವಿಮಾ ಪಾಲಿಸಿಗಳ (Life Insurance Policies) ಸ್ಥಿರಪಡಿಸಿದ ಮೊತ್ತದಲ್ಲಿ ಒಂದು ಸಾವಿರ ರೂ.ಗೆ 80 ರೂ. ಲಾಭಾಂಶ (ಬೋನಸ್)‌ ನೀಡಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆ ಅಡಿಯಲ್ಲಿ 2018ರ ಏಪ್ರಿಲ್‌ 1ರಿಂದ 2020ರ ಮಾರ್ಚ್‌ 31ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡುವ ಕುರಿತು ರಾಜ್ಯ ಸರ್ಕಾರವು (Karnataka Government) ಗುರುವಾರ (ಜುಲೈ 11) ಆದೇಶ ಹೊರಡಿಸಿದೆ.

ಯಾವುದಕ್ಕೆ ಸರ್ಕಾರದ ಮಂಜೂರಾತಿ?

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯು ನಿರ್ವಹಿಸುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ, 2018-2020ರ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯನ್ನು ಆಧರಿಸಿ ಈ ಕೆಳಕಂಡಂತೆ ಬೋನಸ್ ನೀಡಲು ಸರ್ಕಾರ ಮಂಜೂರಾತಿಯನ್ನು ನೀಡಿದೆ.

  1. 01/04/2018ರಿಂದ 31/03/2020ರ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ 80 ರೂಪಾಯಿಯಂತೆ ಲಾಭಾಂಶ (Bonus) ನೀಡುವುದು.
  2. ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ 01/04/2020ರಿಂದ 31/03/2022ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ 80 ರೂ.ನಂತೆ ಮಧ್ಯಂತರ ಲಾಭಾಂಶ (Interim Bonus) ನೀಡುವುದು.

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958ರ ನಿಯಮ-22ರನ್ವಯ ವಿಮಾ ಮೌಲ್ಯಮಾಪನವನ್ನು ದೈವಾರ್ಷಿಕವಾಗಿ ಮಾಡಿಸಬೇಕಾಗಿದ್ದು, ಅದರನ್ವಯ 2018-2020ನೇ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ವಿಮಾ ಪಾಲಿಸಿಗಳ ಮೌಲ್ಯಮಾಪನವನ್ನು ನಡೆಸಿ, ಅಧಿಲಾಭಾಂಶವನ್ನು ಘೋಷಿಸಲು ಅನುವಾಗುವಂತೆ ಮೌಲ್ಯಮಾಪನ ಕಾರ್ಯ ಕೈಗೊಳ್ಳಲು ವಿಮಾ ಗಣಕಕಾರರನ್ನು ನೇಮಿಸಲಾಗಿತ್ತು. ವಿಮಾ ಗಣಕಕಾರರು 2018-2020ನೇ ಅವಧಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಮೌಲ್ಯಮಾಪನ ವರದಿ ಸಲ್ಲಿಸಿದ್ದರು.

ವಿಮಾ ಗಣಕರು ತಮ್ಮ ವರದಿಯಲ್ಲಿ 2020ರ ಮಾರ್ಚ್‌ 31ರಂದು ಚಾಲ್ತಿಯಲ್ಲಿರುವ ಎಲ್ಲ ಪಾಲಿಸಿಗಳಿಗೆ ಪ್ರತಿ ಸಾವಿರ ರೂ. ವಿಮಾ ಮೊತ್ತಕ್ಕೆ ಪ್ರತಿ ವರ್ಷಕ್ಕೆ 80 ರೂ.ನಂತೆ ಪ್ರತ್ಯಾವರ್ತಿ ಲಾಭಾಂಶವನ್ನು ಘೋಷಿಸಲು ಹಾಗೂ ಈ ಉದ್ದೇಶಕ್ಕಾಗಿ ಮೌಲ್ಯಮಾಪನದ ಅನುಸಾರ ಒಟ್ಟಾರೆಯಾಗಿ ಹೆಚ್ಚಳವಾಗಿರುವ 1769.28 ಕೋಟಿ ರೂ.ನಲ್ಲಿ 1711.89 ಕೋಟಿ ರೂ.ಅನ್ನು ಸರಳ ಪ್ರತ್ಯಾವರ್ತಿ ಲಾಭಾಂಶವಾಗಿ ವಿತರಣೆ ಮಾಡಲು ಹಾಗೂ ಉಳಿದ ರೂ.57.39 ಕೋಟಿ ಮೊತ್ತವನ್ನು ಅವರ್ಗೀಕೃತವಾಗಿ ಮುಂದುವರಿಸಲ್ಪಟ್ಟ ಮೊಬಲಗು ಎಂದು ಪರಿಗಣಿಸಿ ಮುಂದಿನ ಮೌಲ್ಯಮಾಪನ ಅವಧಿಗೆ ಕೊಂಡೊಯ್ಯಲು ವಿಮಾ ಗಣಕರು ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯ ಸರ್ಕಾರವೀಗ ಅನುಮೋದನೆ ನೀಡಿದೆ.

ಇದನ್ನೂ ಓದಿ: 8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

Continue Reading
Advertisement
NSUI
ದೇಶ4 hours ago

NSUI: ದೆಹಲಿ ವಿವಿಯಲ್ಲಿ ಗಲಾಟೆ ಮಾಡಿ, ರಾಮನ ಮೂರ್ತಿ ಒಡೆದ ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ಸದಸ್ಯರು; ಭಾರಿ ವಿವಾದ!

Yashasvi Jaiswal
ಕ್ರಿಕೆಟ್4 hours ago

Yashasvi Jaiswal : ಇನಿಂಗ್ಸ್​​ನ ಮೊದಲ ಎಸೆತಕ್ಕ 13 ರನ್​, ವಿನೂತನ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

MUDA Scam
ಕರ್ನಾಟಕ4 hours ago

MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

Hardik Pandya
ಕ್ರೀಡೆ4 hours ago

Hardik Pandya : ಪತ್ನಿ ಜತೆ ವಿಚ್ಛೇದನ ಸುದ್ದಿ ನಡುವೆ ರಷ್ಯನ್ ಮಾಡೆಲ್​ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ; ಯಾರವರು?

Anant Ambani Wedding
ದೇಶ5 hours ago

ಅನಂತ್‌ ಅಂಬಾನಿ ಮದುವೆಯಲ್ಲಿ ಶಂಕರ್‌ ಮಹಾದೇವನ್‌, ಶ್ರೇಯಾ ಘೋಷಾಲ್ ಗಾಯನಕ್ಕೆ ಮನಸೋತ ಗಣ್ಯರು; Video ಇದೆ

Carlos Alcaraz
ಪ್ರಮುಖ ಸುದ್ದಿ6 hours ago

Wimbledon 2024 : ಜೊಕೊವಿಕ್ ಮಣಿಸಿದ 2ನೇ ವಿಂಬಲ್ಡನ್​ ಟ್ರೋಫಿ ಗೆದ್ದ ಕಾರ್ಲೋಸ್ ಅಲ್ಕರಾಜ್

Appu Cup Season 2
ಕರ್ನಾಟಕ6 hours ago

Appu Cup Season 2: ಅಪ್ಪು ಕಪ್‌ ಸೀಸನ್‌ 2ಗೆ ವಿಧ್ಯುಕ್ತ ಚಾಲನೆ; ಅಶ್ವಿನಿ ಪುನೀತ್‌ ಟ್ರೋಫಿ ಅನಾವರಣ

Fidias Panayiotou
ಪ್ರಮುಖ ಸುದ್ದಿ6 hours ago

Fidias Panayiotou: ನಮ್ಮ ಮೆಟ್ರೊದೊಳಗೆ ಅಕ್ರಮವಾಗಿ ನುಸುಳಿದವನು ಈಗ ಯುರೋಪ್ ಸಂಸದನಾಗಿ ಆಯ್ಕೆ!

Team India
ಪ್ರಮುಖ ಸುದ್ದಿ7 hours ago

Team India : ಆಸ್ಟ್ರೇಲಿಯಾ ಪ್ರವಾಸಕ್ಕೆ 18 ಸದಸ್ಯರ ಭಾರತ ‘ಎ’ ಮಹಿಳಾ ತಂಡ ಪ್ರಕಟ

Self harming
ಕರ್ನಾಟಕ7 hours ago

Self Harming: ಪದವಿ ಪರೀಕ್ಷೆಯಲ್ಲಿ ಇಂಗ್ಲಿಷ್‌ ಸಬ್ಜೆಕ್ಟ್‌ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ11 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ15 hours ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ16 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ1 day ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ6 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ6 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

ಟ್ರೆಂಡಿಂಗ್‌