ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವು ಮೇ 30 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದು, ಇದರ ನಿಯಮಾವಳಿಗಳನ್ನು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಕಟಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ . ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ನೀಡಲಾಗುತ್ತದೆ ಎಂದು ಇಲಾಖೆಯು ತಿಳಿಸಿದೆ.
ಈ ಸುದ್ದಿಯನ್ನೂ ಓದಿ |ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ
ನಿಯಮಾವಳಿಗಳು ಇಂತಿವೆ;
- ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ. ಶಿಕ್ಷಕರು. ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾ ಕೋಟದಡಿ ನೇಮಕಗೊಂಡ ನೌಕರರು ಭಾಗವಹಿಸುವಂತಿಲ್ಲ.
- ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
- ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಅರ್ಹರಾಗಿರುವುದಿಲ್ಲ.
- ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಖಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹ ರಾಗಿರುವುದಿಲ್ಲ.
- ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದ ರಿಂದ ಈ ಎರಡೂ ಇಲಾಖೆಗಳ ಕಚೇರಿ ಹಾಗೂ ಲಿಪಿಕ ನೌಕರರು/ಕಚೇರಿ ಸಿಬ್ಬಂದಿ ಮತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
- ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳಲ್ಲಿ ಕ್ರೀಡಾಕೋಟಾದಡಿ ನೇಮಕವಾದ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
- 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
- ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.
- ನಿಗದಿತ ಸಮಯದಲ್ಲಿಯೇ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಯಾವುದೇ ಕಾರಣಕ್ಕೂ ಸ್ಪರ್ಧಿಗಳನನ್ನು ಕಾಯಿಸಲಾಗುವುದಿಲ್ಲ.
- ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ದವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಿಸಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
- ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ.
- ಸಂಘಟಕರೊಡನೆ ಆಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಸ್ಪರ್ಧೆಯಿಂದ ಹೊರಹಾಕುವುದಲ್ಲದೆ, ಸಂ ಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಥ ಕ್ರೀ ಕಡಾ ಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾ ಇರಸ್ಸು ಮಾಡಲಾಗುತ್ತದೆ.
- ಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗಧಿತ ಸಮಯಕ್ಕೆ ಕನಿಷ್ಠ 1 ಗಂಟೆ ಮುಂಚಿತವಾಗಿ ಹಾಜರಿದ್ದು, ಕೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳಬೇಕು.
- ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸರ್ಧಿಗಳು. ತಮ್ಮದೇ ಆದ ಸಲಕರಣೆಗಳನ್ನು ತರಬೇಕು.
- ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು (ಫಿಲಂಟ್ಯೂನ್) ಇತ್ಯಾದಿಗಳಿಗೆ ಅವಕಾಶವಿಲ್ಲ.
- ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ.
- ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
- ಕ್ರೀಡಾಕೂಟದಲ್ಲಿ ಕೋವಿಡ್-19 ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.