Site icon Vistara News

KAS Recruitment 2024: ಕೆಎಎಸ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ; ಸಚಿವ ಸಂಪುಟ ಅನುಮೋದನೆ

KAS Recruitment 2024

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ (Job News) ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (KAS Recruitment 2024) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅರ್ಜಿ ಸಲ್ಲಿಕೆಗೆ ವಿಶೇಷ ಅವಕಾಶ ನೀಡಲಾಗಿತ್ತು. ಇದೀಗ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದರಿಂದ ಗರಿಷ್ಠ ವಯೋಮಿತಿ ಮೀರಿದವರಿಗೆ ಅನುಕೂಲವಾಗಲಿದೆ.

‘ಕೆಎಎಸ್ ಹುದ್ದೆಗಳ ನೇಮಕಾತಿಗೆ ಪ್ರತಿವರ್ಷ ಅಧಿಸೂಚನೆ ಹೊರಡಿಸಬೇಕು ಎಂದು ಪಿ.ಸಿ. ಹೋಟಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ರಾಜ್ಯದಲ್ಲಿ 3-4 ವರ್ಷಗಳಿಗೊಮ್ಮೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಒಡಿಶಾ ಸರ್ಕಾರವು 2017ರಲ್ಲಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಪರಿಗಣಿಸದೆ 2024ರ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಅದೇ ರೀತಿ ಗರಿಷ್ಠ ವಯೋಮಿತಿ ಮೀರಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವಂತೆ ಈ ಹಿಂದೆ ಕೆಪಿಎಸ್‌ಸಿಗೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಹೀಗಾಗಿ 2017-18ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದವರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಿ ಕೆಪಿಎಸ್‌ಸಿ ಆದೇಶ ಹೊರಡಿಸಿತ್ತು. ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

2017-18ನೇ ಸಾಲಿನಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನುಕೂಲವಾಗಲು ಅರ್ಜಿ ಸಲ್ಲಿಕೆ ಅವಧಿ ಮುಗಿದರೂ ಕೂಡ ಜುಲೈ 6ರಿಂದ ಜುಲೈ 21ರವರೆಗೆ ಕೆಎಎಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ವಿಶೇಷ ಅವಕಾಶ ನೀಡಿತ್ತು.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ| Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

Exit mobile version