Site icon Vistara News

KPSC Departmental Examination : ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಪ್ರಮಾಣ ಪತ್ರ ಬಿಡುಗಡೆ

kpsc recruitment 2023 result of compulsory kannada examination held february 25 published

KPSC Recruitment 2023

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಲ್ಲಿ (KPSC Departmental Examination) ಉತ್ತೀರ್ಣರಾದ ಅಭ್ಯರ್ಥಿಗಳ ಪ್ರಮಾಣ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಅರ್ಹ ಅಭ್ಯರ್ಥಿಗಳು ಡಿಜಿಲಾಕರ್‌ ಅಕೌಂಟ್‌ನೊಂದಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸಿ, ನಂತರ ಅಭ್ಯರ್ಥಿಯ ನೋಂದಣಿ ಸಂಖ್ಯೆಯನ್ನು (7ಅಂಕಿಗಳು) ಯೂಸರ್‌ನೇಮ್‌ ಆಗಿ ಮತ್ತು ಪಾನ್‌ಕಾರ್ಡ್‌ ನಂಬರನ್ನು ಪಾಸ್‌ವರ್ಡ್‌ ಆಗಿ ಉಪಯೋಗಿಸಿ ಪ್ರಮಾಣ ಪತ್ರಗಳನ್ನು ಲಾಗಿನ್‌ ಆದ 3 ರಿಂದ 4 ಗಂಟೆಗಳೊಳಗಾಗಿ ಪಡೆಯಬಹುದಾಗಿದೆ ಎಂದು ಆಯೋಗ ತಿಳಿಸಿದೆ.

ಪ್ರಮಾಣ ಪತ್ರ ಡೌನ್‌ಲೋಡ್‌ ಮಾಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಪ್ರಮಾಣ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುವ ಹಂತದಲ್ಲಿ ಯಾವುದಾದರೂ ತಾಂತ್ರಿಕ ದೋಷ ಉಂಟಾದಲ್ಲಿ ಸೇವಾಸಿಂಧು ಸಹಾಯವಾಣಿ ಸಂಖ್ಯೆ: 080-22279954, 8088384855 ಸಂಪರ್ಕಿಸಬಹುದಾಗಿದೆ ಎಂದು ಆಯೋಗ ತಿಳಿಸಿದೆ.

ಈ ನಡುವೆ ಆಯೋಗವು ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಸರ್ಕಾರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ.

ಅಧಿಸೂಚನೆಯನ್ನು ನೋಡಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ. ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತಗೊಂಡಿದ್ದು, ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 080-22279954/9380206704/8088304855 ಯನ್ನು ಸಂಪರ್ಕಿಸಬಹುದಾಗಿದೆ. ಈ ಬಾರಿ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://kpsc.kar.nic.in/

ಇದನ್ನೂ ಓದಿ | KPSC Recruitment 2022 | ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ; ಇನ್ನು ಒಮ್ಮೆ ಬರೆದರೆ ಸಾಕು!

Exit mobile version