ಬೆಂಗಳೂರು: ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ (KPSC Departmental Examination) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್‌ಗೆ ಬದಲಾಗಿ ಈಗ ಮೇ ತಿಂಗಳಿನಲ್ಲಿ ಈ ಪರೀಕ್ಷೆ ನಡೆಯಲಿದೆ.
ಈ ಪರೀಕ್ಷೆಗೆ ಸಂಬಂಧಿಸಿದಂತೆ ಜನವರಿ 6 ರಂದು ಅಧಿಸೂಚನೆ ಹೊರಡಿಸಿತ್ತು. ಅಲ್ಲದೆ ಈಗಾಲೇ ಪರೀಕ್ಷೆಯ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗಾಗಲೇ ಅರ್ಜಿ ಸಲ್ಲಿಸಿರುವ ಸರ್ಕಾರಿ ನೌಕರರು (ಗ್ರೂಪ್-ಡಿ ನೌಕರರು ಹೊರತುಪಡಿಸಿ), ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ/ ಪ್ರಾಧಿಕಾರಗಳ ಕಾಯಂ ನೌಕರರು ಈ ಪರೀಕ್ಷೆ ಬರೆಯಬಹುದಾಗಿದೆ.
ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಆನ್‌ಲೈನ್ ಮಾದರಿಯ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇದಾಗಿದೆ. ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.
ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತಗೊಂಡಿದ್ದು, ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://kpsc.kar.nic.in/
ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?