ನೌಕರ ಮಿತ್ರ | ಸೇವಾ ಪುಸ್ತಕದಲ್ಲಿ ಮದುವೆ ಬಗ್ಗೆ ತಡವಾಗಿ ನಮೂದಿಸಬಹುದೇ? - Vistara News

ನೌಕರರ ಕಾರ್ನರ್

ನೌಕರ ಮಿತ್ರ | ಸೇವಾ ಪುಸ್ತಕದಲ್ಲಿ ಮದುವೆ ಬಗ್ಗೆ ತಡವಾಗಿ ನಮೂದಿಸಬಹುದೇ?

ʼನೌಕರ ಮಿತ್ರʼ ಇದು ಸರ್ಕಾರಿ ನೌಕರರಿಗಿರುವ ಸಮಸ್ಯೆ, ಗೊಂದಲವನ್ನು ದೂರ ಮಾಡುವ ಅಂಕಣ. ಸರ್ಕಾರಿ ನೌಕರರು ರಜೆ, ವೇತನ, ಪಿಂಚಣಿ, ಇಲಾಖಾ ವಿಚಾರಣೆ, ಪದೋನ್ನತಿ ಮುಂತಾದ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ಸಮಸ್ಯೆ, ಪ್ರಶ್ನೆಗಳನ್ನು janasamparka@vistaranews.comಈ ವಿಳಾಸಕ್ಕೆ ಇ-ಮೇಲ್‌ ಮಾಡಿದಲ್ಲಿ, ತಜ್ಞರಿಂದ ಉತ್ತರ ಕೊಡಿಸಲಾಗುತ್ತದೆ.

VISTARANEWS.COM


on

marriage registration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Naukra Mitra

ನಿಮ್ಮ ಪ್ರಶ್ನೆ : ನಾನು ಸರ್ಕಾರಿ ನೌಕರನಾಗಿದ್ದೇನೆ. ನನ್ನ ಹೆಂಡತಿ ಕೂಡ ಸರ್ಕಾರದ ಸೇವೆಯಲ್ಲಿ “ಡಿʼʼ ಗುಂಪಿನ ನೌಕರಳಾಗಿದ್ದಾಳೆ. ಸದ್ಯ ಪ್ರೊಬೇಷನರಿಯ ಅವಧಿಯಲ್ಲಿದ್ದಾಳೆ. ನಾವು ರಿಜಿಸ್ಟರ್ ಮದುವೆಯಾಗಿದ್ದು, ಒಂದು ವರ್ಷದ ನಂತರ ಅವಳ ಸೇವಾ ಪುಸ್ತಕದಲ್ಲಿ ಮದುವೆ ಬಗ್ಗೆ ನಮೂದಿಸಬೇಕೆಂದಿದೆ. ಇದರಿಂದ ನನ್ನ ಪತ್ನಿಯ ಕೆಲಸಕ್ಕೆ ತೊಂದರೆಯಾಗುತ್ತದೆಯೇ?
ಶಿವಾನಂದ ಕತ್ತಿ | ಹಾವೇರಿ

ತಜ್ಞರು ನೀಡಿದ ಉತ್ತರ: ಕರ್ನಾಟಕ ಸರ್ಕಾರಿ ಸೇವಾ ನಿಯಮ ೩೦೨ರಂತೆ ಸರ್ಕಾರಿ ನೌಕರರು ವಿವಾಹವಾದ ನಂತರ ನಾಮ ನಿರ್ದೇಶನವನ್ನು ಅಗತ್ಯ ದಾಖಲೆಗಳೊಂದಿಗೆ ಮಾಡಬಹುದು. ಇದಕ್ಕೆ ನಿಯಮಾವಳಿಯಲ್ಲಿ ಯಾವುದೇ ಕಾಲಮಿತಿ ಇಲ್ಲದಿರುವುದರಿಂದ ನಿಮ್ಮ ಮದುವೆ ಮಾಹಿತಿಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲು ತೊಂದರೆಯಾಗುವುದಿಲ್ಲ. ಅಲ್ಲದೇ ನಿಮ್ಮ ಪತ್ನಿಯ ಕೆಲಸಕ್ಕೂ ಸಮಸ್ಯೆಯಾಗುವುದಿಲ್ಲ.

ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್‌ ವಿಳಾಸ: janasamparka@vistaranews.com

ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಇದನ್ನೂ ಓದಿ | ನೌಕರ ಮಿತ್ರ | ಸರ್ಕಾರಿ ನೌಕರನು ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಬಹುದೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Govt Employees: ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಚಾಲನೆ ನೀಡಿದರು.

VISTARANEWS.COM


on

Govt Employees
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (Govt Employees) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ 2023-24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶನಿವಾರ ಚಾಲನೆ ನೀಡಲಾಯಿತು. ಮೂರು ದಿನಗಳ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಉದ್ಘಾಟಿಸಿದರು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸಿ.ಎಸ್. ಷಡಾಕ್ಷರಿ ಅವರು, ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ತಾವೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅತ್ಯಂತ ಉತ್ಸುಕತೆಯಿಂದ ಭಾಗವಹಿಸಿದ್ದೀರಿ. ನಮ್ಮ ಅವಧಿಯಲ್ಲಿ ಇದು 5ನೇ ರಾಜ್ಯ ಮಟ್ಟದ ಕ್ರೀಡಾಕೂಟವಾಗಿದ್ದು, ಈ ಹಿಂದೆ ಎರಡು ವರ್ಷಗಳಿಗೊಮ್ಮೆ ಕ್ರೀಡಾಕೂಟವನ್ನು ನಡೆಸಲಾಗುತ್ತಿತ್ತು. ನಾನು ರಾಜ್ಯಾಧ್ಯಕ್ಷರಾದ ನಂತರ ಪ್ರತಿ ವರ್ಷ ಕ್ರೀಡಾಕೂಟಗಳನ್ನು ನಡೆಸಲು ಸರ್ಕಾರದ ಮೇಲೆ ಒತ್ತಡ ತಂದದ್ದಲ್ಲದೇ ಕ್ರೀಡಾ ಕೂಟದ ಅನುದಾನವನ್ನು 50 ಲಕ್ಷ ದಿಂದ 3 ಕೋಟಿಗೆ ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಪಡೆಯುವ ಮೂಲಕ ವಿಶಿಷ್ಟ ರೀತಿಯನ್ನು ಕ್ರೀಡಾಕೂಟವನ್ನು ನಡೆಸೋಣವೆಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟ- ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದ್ದು, ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕ್ರೀಡಾಪಟುಗಳಲ್ಲಿ ಮನವಿ ಮಾಡಿದರು.

ಇದನ್ನೂ ಓದಿ | Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗ್ಗೆ ಅರಮನೆ ಮೈದಾನದಲ್ಲಿ ಬೆಂಗಳೂರಿನಲ್ಲಿ ಸಂಘದ ವತಿಯಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಆಯೋಜಿಸಲಾಗಿದ್ದ “ನಮ್ಮಭಿಮಾನದ ಅಭಿನಂದನೆ” ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ಸಂಘದ ಈ ಕಾರ್ಯವನ್ನು ಶ್ಲಾಘಿಸಿದ್ದನ್ನು ಹಾಗೂ ಸಂಘದ ಪ್ರಮುಖ ಬೇಡಿಕೆಗಳಾದ 1) ಹಳೇ ಪಿಂಚಣಿ ಯೋಜನೆ ಮಾರು ಜಾರಿ 2) ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಅನುಷ್ಠಾನ ಹಾಗೂ 3) ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರದ ಬದ್ಧತೆಯನ್ನು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಆರ್ ಚೇತನ್‌ ಮಾತನಾಡಿ, ಕ್ರೀಡಾಪಟುಗಳು ಉತ್ಸುಕತೆಯಿಂದ ಭಾಗವಹಿಸಿದ್ದೀರಿ. ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸಿ ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟದ ಕ್ರೀಡೆಗಳಿಗೆ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಉತ್ತಮ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.

ಇದಕ್ಕೂ ಮೊದಲು ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್. ಚೇತನ್ ಅವರು ಧ್ವಜಾರೋಣ ನೆರವೇರಿಸಿದರು. ಉಪಾಧ್ಯಕ್ಷರಾದ ನರಸಿಂಹರಾಜುರವರು ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಮುಗಿದ ನಂತರ ಸಂಜೆ. 6.30ಕ್ಕೆ ಸರಿಗಮ ಖ್ಯಾತಿಯ ಶ್ರೀ ಕಂಬದ ರಂಗಯ್ಯ ಮತ್ತು ತಂಡದವರಿಂದ “ಸಂಗೀತ ರಸ ಸಂಜೆ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜ್ಯ ಎಲ್ಲಾ ಜಿಲ್ಲೆಗಳು ಮತ್ತು ಸಚಿವಾಲಯ ಸೇರಿದಂತೆ ಸುಮಾರು 11000 ಸರ್ಕಾರಿ ನೌಕರರ ಕ್ರೀಡಾಪಟುಗಳು ಕ್ರೀಡೆಗಳಿಗೆ ನೋಂದಾಯಿಸಿಕೊಂಡಿದ್ದರು. 77 ವಿವಿಧ ವೈಯಕ್ತಿಕ ಮತ್ತು ಗುಂಪು ಕ್ರೀಡೆಗಳು ಹಾಗೂ 18 ಸಾಂಸ್ಕೃತಿಕ, ಸಂಗೀತ ಜನಪದ ಸ್ಪರ್ಧೆಗಳು ನಡೆಯಲಿವೆ. ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಉತ್ತಮ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ.

ಕ್ರೀಡಾಕೂಟಗಳನ್ನು ಸಂಘಟಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಶಾಲಾ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರುಗಳೂ ಸೇರಿದಂತೆ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ, ಟ್ರೋಪಿ, ಕ್ರೀಡಾ ಬ್ಯಾಗ್‌ಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ | Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; 391 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಕಾರ್ಯಕ್ರಮದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರಾದ ಕೆ. ಶಶಿಕಲಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಗೌರವಾಧ್ಯಕ್ಷರಾದ ಬಿ.ಎಚ್.ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರುಗಳಾದ ಎಂ.ವಿ. ರುದ್ರಪ್ಪ, ಬಸವರಾಜು, ರಾಜ್ಯ ಖಜಾಂಚಿಗಳಾದ ಡಾ. ಎಸ್. ಸಿದ್ದರಾಮಣ್ಣ ರಾಜ್ಯ ಕಾರ್ಯದರ್ಶಿಗಳಾದ ಡಾ. ನೆಲ್ಕುದ್ರಿ ಸದಾನಂದಪ್ಪ ಸೇರಿ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ರಾಜ್ಯ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Continue Reading

ಪ್ರಮುಖ ಸುದ್ದಿ

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

VISTARANEWS.COM


on

cm siddaramaiah 1
Koo

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ (Pay Commission) ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು, ಸರ್ಕಾರಿ ನೌಕರರ (Govt Employees) ಹಿತಾಸಕ್ತಿಯನ್ನು ಕಾಯಲು ಸದಾ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Continue Reading

ಕರ್ನಾಟಕ

Teachers Transfer: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ

Teachers Transfer: ಆ. 17, 19, 20 ಮತ್ತು 27 ರಂದು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ಕೌನ್ಸೆಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

VISTARANEWS.COM


on

Teachers Transfer
Koo

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಅಂತರ ವಿಭಾಗ ಮಟ್ಟದ ಕೋರಿಕೆ, ಪರಸ್ಪರ ವರ್ಗಾವಣೆಗೆ (Teachers Transfer) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಿದ್ದು, ಆಗಸ್ಟ್ 17ರಿಂದ ಪ್ರಕ್ರಿಯೆ ಆರಂಭವಾಗಲಿದೆ. ಆ. 17, 19, 20 ಮತ್ತು 27 ರಂದು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ವರ್ಗಾವಣೆಗೆ ಈಗಾಗಲೇ ಪ್ರಕಟಿಸಿರುವ ಆದ್ಯತಾ ಪಟ್ಟಿಗೆ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ತಾವು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಎಲ್ಲಾ ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್‌ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು.

ಆ.17ರಂದು ಎಲ್ಲಾ ಮುಖ್ಯ ಶಿಕ್ಷಕರು, ಹಿರಿಯ ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಹಾಗೂ 1ರಿಂದ 300 ರವರೆಗೆ ಅದ್ಯತಾ ಕ್ರಮಾಂಕದ ಸಹ ಶಿಕ್ಷಕರಿಗೆ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ಆಗಸ್ಟ್ 19 ರಂದು 301 ರಿಂದ 800 ರವರೆಗಿನ ಅದ್ಯತಾ ಕ್ರಮಾಂಕದ ಸಹ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಾಗುವುದು, ಆ.20ರಂದು 801 ರಿಂದ ಕ್ರಮಾಂಕ ಮುಕ್ತಾಯವಾಗುವವರೆಗೆ ಕೌನ್ಸೆಲಿಂಗ್ ನಡೆಯಲಿದೆ. ಅದೇ ರೀತಿ ಆ.17ರಿಂದ ಪರಸ್ಪರ ವರ್ಗಾವಣೆಗೆ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ | Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Alert
Job Alert

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ಲಿಮಿಟೆಡ್ ನಲ್ಲಿ (HESCOM) ಖಾಲಿ ಇರುವ ಒಟ್ಟು 338 ಹುದ್ದೆಗಳಿಗೆ ಅರ್ಹರಿಂದ ಅರ್ಜಿ (Job Alert) ಆಹ್ವಾನಿಸಲಾಗಿದೆ. ಅಪ್ರೆಂಟಿಸ್‌ಶಿಪ್ ಕಾಯಿದೆ 1961ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ (Apprentice Post) ನೇಮಕಾತಿಗಾಗಿ ಈ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅವಕಾಶವನ್ನು ಪಡೆಯಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಈಗಾಗಲೇ ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2024 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಇದು ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಏಕೀಕೃತ ಪೋರ್ಟಲ್ ಆಗಿದೆ.

ಹುದ್ದೆಗಳ ವಿವರ

ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಪದವೀಧರರಿಗೆ ಒಟ್ಟು 200 ಹುದ್ದೆಗಳು, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರುವವರಿಗೆ ಒಟ್ಟು 138 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಪ್ರೆಂಟಿಸ್‌ಶಿಪ್ ಹುದ್ದೆಗೆ ಹೆಸ್ಕಾಂನಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ಅಪ್ರೆಂಟಿಸ್‌ಗಳಿಗೆ ಮಾಸಿಕ ಸ್ಟೈಫಂಡ್ 9000 ರೂ. ಮತ್ತು ಡಿಪ್ಲೋಮಾ ಅಪ್ರೆಂಟಿಸ್‌ಗಳಿಗೆ ಮಾಸಿಕ ಸ್ಟೈಫಂಡ್ 8000 ರೂ. ಆಗಿರುತ್ತದೆ.

ಅರ್ಹತೆ

ಅಪ್ರೆಂಟಿಸ್ ಶಿಪ್ ನಿಯಮಗಳ ಪ್ರಕಾರ ಪ್ರತಿ ಹುದ್ದೆಗೂ ವಯಸ್ಸಿನ ಮಿತಿ ಅನ್ವಯಿಸುತ್ತದೆ. ಇದಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ, ಬಿಟೆಕ್ ಪದವಿ ಹಾಗೂ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಮೊದಲು ಪೂರ್ಣ ನೇಮಕಾತಿ ಅಧಿಸೂಚನೆಯನ್ನು ಒಮ್ಮೆ ಎಚ್ಚರಿಕೆಯಿಂದ ಓದಿ. ಇದರಿಂದ ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಬಹುದು. ಬಳಿಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಆನ್‌ಲೈನ್ ಮೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ. ಅನಂತರ ಆನ್‌ಲೈನ್ ಅಪ್ಲಿಕೇಶನ್‌ನಲ್ಲಿ ಕೇಳಿರುವ ಅಗತ್ಯ ದಾಖಲೆಗಳು ಮತ್ತು ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ. ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿದ ಅನಂತರ ಅರ್ಜಿ ನಮೂನೆಯನ್ನು ಸಲ್ಲಿಸಿ.

ಇದನ್ನೂ ಓದಿ: Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಆಗಸ್ಟ್ 27ರೊಳಗೆ ಘೋಷಣೆ ಮಾಡಲಾಗುತ್ತದೆ. ದಾಖಲೆ ಪರಿಶೀಲನೆ ಪ್ರಕ್ರಿಯೆಯು ಸೆಪ್ಟೆಂಬರ್ 9ರಂದು ಹುಬ್ಬಳ್ಳಿಯ ಕಾರವಾರ ರಸ್ತೆ, ವಿದ್ಯುತ್ ನಗರದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ (ಎಲ್.), ಐಟಿಐ, ಹೆಸ್ಕಾಂನಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ಇರುತ್ತದೆ.

Continue Reading

ಕರ್ನಾಟಕ

Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

Government Employees: ನಮ್ಮ ಅಭಿಮಾನದ ಅಭಿನಂದನಾ ಸಮಾರಂಭದ ಹಿನ್ನೆಲೆಯಲ್ಲಿ ನೌಕರರಿಗೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

VISTARANEWS.COM


on

Government Employees
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆ.17ರಂದು ನಮ್ಮ ಅಭಿಮಾನದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೌಕರರಿಗೆ (Government Employees) ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಸುಮಾರು 50 ಸಾವಿರಕ್ಕೂ ಹೆಚ್ಚು ನೌಕರರು ಜಿಲ್ಲಾ, ತಾಲೂಗಳಿಂದ ಭಾಗವಹಿಸಲಿದ್ದು, ಸರ್ಕಾರದಿಂದ ಆ.17 ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಹಾಗೂ ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್ ಮರುಸ್ಥಾಪಿಸುವಲ್ಲಿ ರಾಷ್ಟ್ರಮಟ್ಟದ ಬೆಳವಣಿಗೆ ಕುರಿತು ಬಿ.ಪಿ.ರಾವತ್ ಅವರು ಉಪನ್ಯಾಸ ನೀಡಲಿದ್ದಾರೆ. ಪಿಎಸ್‌ಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಿ&ಆರ್ ನಿಯಮಗಳಲ್ಲಿನ ಸಮಸ್ಯೆಗಳ ಕುರಿತು ಸರ್ಕಾರದ ಉಪಕಾರ್ಯದರ್ಶಿ ದೇವರಾಜು ಅವರಿಂದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಖಜಾಂಚಿ ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಂ.ವಿ.ರುದ್ರಪ್ಪ, ಎಸ್.ಬಸವರಾಜ್, ಉಪಾಧ್ಯಕ್ಷ ಸಿದ್ದೇಶ್, ಮಾಲತೇಶ್, ಕಾರ್ಯದರ್ಶಿ ಸದಾನಂದ, ಕ್ರೀಡಾ ಕಾರ್ಯದರ್ಶಿ ಚೇತನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

ಆ.17ರಂದು ವಿಶೇಷ ಸಾಂದರ್ಭಿಕ ರಜೆ

ರಾಜ್ಯ ಸರ್ಕಾರಿ ನೌಕರರಿಗೆ (Government Employees) ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು (Special casual leave) ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಆ.17ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Sexual Assault
ದೇಶ15 mins ago

Sexual Assault: ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ; ರಾಜಕಾರಣಿ ಸೇರಿ 8 ಮಂದಿ ಅರೆಸ್ಟ್‌

Rayara Aradhane 2024
ಧಾರ್ಮಿಕ27 mins ago

Rayara Aradhane 2024 : ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

ಪ್ರಮುಖ ಸುದ್ದಿ54 mins ago

Bengaluru Rape Attempt Case : ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಹೊಸ ತಿರುವು, ಸಂತ್ರಸ್ತೆಯ ವಿರುದ್ಧವೇ ಕೇಸ್‌ ದಾಖಲು!

Student Death
ಪ್ರಮುಖ ಸುದ್ದಿ1 hour ago

Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

Electricity theft
ಪ್ರಮುಖ ಸುದ್ದಿ2 hours ago

Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್‌ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್‌ ನಾಯಕಿ!

Earthquake
ದೇಶ2 hours ago

Earthquake: ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಬ್ಯಾಕ್‌ ಟು ಬ್ಯಾಕ್‌ ಭೂಕಂಪ

Hyderabad Tour
ಪ್ರವಾಸ2 hours ago

Hyderabad Tour: ಹೈದರಾಬಾದ್‌ನ ಈ 10 ಅದ್ಭುತ ತಾಣಗಳು ಫೋಟೋಶೂಟ್‌ಗೆ ಹೇಳಿಮಾಡಿಸಿದಂತಿವೆ!

Murder case
ಕ್ರೈಂ2 hours ago

Murder Case : ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

Kolkata Doctor murder case
ದೇಶ2 hours ago

Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Tungabhadra dam
ಪ್ರಮುಖ ಸುದ್ದಿ2 hours ago

Tungabhadra Dam : ತುಂಗಭದ್ರಾ ಜಲಾಶಯದ ಬಳಿ ವಿಧಿಸಿದ್ದ ಸೆಕ್ಷನ್‌ 144 ವಾಪಸ್‌‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌