ನಿಮ್ಮ ಪ್ರಶ್ನೆ : ನಾನು ಈಗ ಅರೆ ಸರ್ಕಾರಿ ಸಂಸ್ಥೆಯಲ್ಲಿ ಪ್ರೊಬೇಷನರಿ ನೌಕರಾಗಿದ್ದೇನೆ. ಕೆಪಿಎಸ್‌ಸಿಯಿಂದ ಕರೆಯಲಾಗಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಉದ್ದೇಶಿಸಿದ್ದು, ನಿರಾಕ್ಷೇಪಣಾ ಪತ್ರ ಪಡೆಯುವುದು ಖಡ್ಡಾಯವೇ?
ಕೀರ್ತಿ ಕವಿ | ಬೆಳಗಾವಿ
ತಜ್ಞರು ನೀಡಿದ ಉತ್ತರ: 1977ರ ಕರ್ನಾಟಕ ಸರ್ಕಾರಿ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿಯ ನಿಯಮ 19(4)ರಂತೆ ಯಾವುದೇ ಸರ್ಕಾರಿ ನೌಕರ, ಬೇರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಸರ್ಕಾರದ ಇಲಾಖೆ ಅಥವಾ ಸರ್ಕಾರವು ನಿರ್ದಿಷ್ಟ ಪಡಿಸಿದ ಯಾವುದೇ ಪ್ರಾಧಿಕಾರದಲ್ಲಿ ನೌಕರಿಯಲ್ಲಿದ್ದರೆ ಪೂರ್ವಾನುಮತಿ ಪಡೆಯುವುದು ಖಡ್ಡಾಯವೇನಲ್ಲ. ಆದರೆ, ನೀವು ಅರೆ ಸರ್ಕಾರಿ ನೌಕರರಾಗಿದ್ದರಿಂದ ಕೆಪಿಎಸ್‌ಸಿಯಿಂದ ಕರೆಯಲಾಗುವ ಹುದ್ದೆಗಳಿಗೆ ನಿಮ್ಮ ನೇಮಕಾತಿ ಪ್ರಾಧಿಕಾರದಿಂದ ಆಯ್ಕೆಯಾದರೆ ನಿರಾಕ್ಷೇಪಣಾ ಪತ್ರ ಪಡೆಯುವುದು ಅವಶ್ಯಕವಾಗಿರುತ್ತದೆ.
ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್ ವಿಳಾಸ: janasamparka@vistaranews.com
ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಇದನ್ನೂ ಓದಿ | ನೌಕರ ಮಿತ್ರ | ಸರ್ಕಾರಿ ನೌಕರನು ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆ ಮಾಡಬಹುದೇ?