ನಿಮ್ಮ ಪ್ರಶ್ನೆ : ನಾನು 1995ರಲ್ಲಿ ಉಪನ್ಯಾಸಕನಾಗಿ ಸರ್ಕಾರಿ ಸೇವೆಗೆ ಸೇರಿದ್ದು, 2005ರಲ್ಲಿ ಕಾಲಮಿತಿ ವೇತನ ಬಡ್ತಿಯನ್ನು ಪಡೆದಿದ್ದೇನೆ. 2006ರಲ್ಲಿ ನಾನು ಪ್ರಾಂಶುಪಾಲನಾಗಿ ಪದೋನ್ನತಿ ಹೊಂದಿದ್ದು 2022ರವರೆಗೆ ಒಂದೇ ಹುದ್ದೆಯಲ್ಲಿ 16 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದೇನೆ. ನಾನು 15 ವರ್ಷಗಳ ಹೆಚ್ಚುವರಿ ವೇತನ ಸ್ವಯಂಚಾಲಿತ ವಿಶೇಷ ಮುಂಬಡ್ತಿ ಪಡೆಯಲು ಅವಕಾಶವಿದೆಯೇ?
ರೇಖಾದೇವಿ | ಮೈಸೂರು
ತಜ್ಞರು ನೀಡಿದ ಉತ್ತರ: 1991ರ ಕರ್ನಾಟಕ ಸಿವಿಲ್‌ಸೇವಾ (ಹಿರಿಯ ವೇತನ ಶ್ರೇಣಿಗೆ ಸ್ವಯಂಚಾಲಿತ ಬಡ್ತಿ) ನಿಯಮಾವಳಿಯ ನಿಯಮ 3ರಂತೆ ಒಂದೇ ಹುದ್ದೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರೆ ಅಂಥ ಸರ್ಕಾರಿ ನೌಕರರು ಸ್ವಯಂ ಚಾಲಿತ ಬಡ್ತಿಗೆ ಅರ್ಹರಾಗುತ್ತಾರೆ. ಆದ ಕಾರಣ ನೀವು ಪ್ರಾಂಶುಪಾಲರಾಗಿ ಒಂದೇ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವುದರಿಂದ ಸ್ವಯಂಚಾಲಿತ ವಿಶೇಷ ಮುಂಬಡ್ತಿಯನ್ನು ಪಡೆಯಲು ಅರ್ಹರಾಗಿರುತ್ತೀರಿ.
ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್ ವಿಳಾಸ: janasamparka@vistaranews.com
ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಇದನ್ನೂ ಓದಿ | ನೌಕರ ಮಿತ್ರ | ಸರ್ಕಾರಿ ನೌಕರರು ಜಮೀನು ಖರೀದಿಸಬಹುದೇ?