ನಿಮ್ಮ ಪ್ರಶ್ನೆ : ನನ್ನ ಗೆಳತಿಯೊಬ್ಬಳು ಸರ್ಕಾರಿ ನೌಕರಿಯಲ್ಲಿದ್ದ ತಮ್ಮ ತಂದೆ ತೀರಿಕೊಂಡಿದ್ದರಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಯನ್ನು ಸಲ್ಲಿಸಿದ್ದರು. 6 ತಿಂಗಳ ನಂತರ ಮದುವೆಯಾದರು. ಈಗ ಆ ಕೆಲಸವನ್ನು ಮದುವೆಯಾದ ನಂತರವೂ ಪಡೆಯಬಹುದೇ?.
ರಾಜೇಶ್ವರಿ ಕೆ.ಎಲ್. | ಚಿತ್ರದುರ್ಗ
ತಜ್ಞರು ನೀಡಿದ ಉತ್ತರ: ನಿಮ್ಮ ಗೆಳತಿಯು ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕ ) ನಿಯಮಗಳು 1996ರ ನಿಯಮ 3ರ ರೀತ್ಯ ಅನುಕಂಪದ ಮೇರೆಗೆ ನೇಮಕ ಮಾಡಿಕೊಳ್ಳಲು ಮದುವೆಗೆ ಮುಂಚೆಯೇ ಅರ್ಜಿ ಸಲ್ಲಿಸಿರುವುದರಿಂದ ಪ್ರಸ್ತುತ ಅವರು ಅನುಕಂಪದ ಆಧಾರದ ಮೇಲೆ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ಆದ ಕಾರಣ ಅವರು ಕರ್ತವ್ಯಕ್ಕೆ ಹಾಜರಾದ ನಂತರ ವೈವಾಹಿಕ ಸ್ಥಿತಿಯನ್ನು ತನ್ನ ಸೇವಾ ಪುಸ್ತಕದಲ್ಲಿ ನಮೂದಿಸಬೇಕು.
ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್ ವಿಳಾಸ: janasamparka@vistaranews.com
ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಇದನ್ನೂ ಓದಿ | ನೌಕರ ಮಿತ್ರ | ಸ್ವಯಂ ಚಾಲಿತ ಬಡ್ತಿಗೆ ಎಷ್ಟು ವರ್ಷ ಸೇವೆ ಸಲ್ಲಿಸಿರಬೇಕು?