ನಿಮ್ಮ ಪ್ರಶ್ನೆ : ಸರ್ಕಾರಿ ನೌಕರನಾದ ನಾನು ಸಮಾಜಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತ್ನಿಯು ಸಹ ಇದೇ ಇಲಾಖೆಯ ನಾನು ಕೆಲಸ ಮಾಡುತ್ತಿರುವ ತಾಲೂಕಿನ ವ್ಯಾಪ್ತಿಯಲ್ಲಿಯೇ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಈಗ ನಾವಿಬ್ಬರೂ ಮನೆ ಬಾಡಿಗೆ ಭತ್ಯೆಯನ್ನು ಪಡೆಯಬಹುದೇ?
ಬಿ.ಎಸ್.ಮಹಾದೇವ್ | ಚಿತ್ರದುರ್ಗ
ತಜ್ಞರು ನೀಡಿದ ಉತ್ತರ: 19-10-2012ರ ಸರ್ಕಾರಿ ಆದೇಶ ಸಂಖ್ಯೆ : ಆ.ಇ.18/ಎಸ್‌ಆರ್‌ಪಿ/ 2012ರ ಮೇರೆಗೆ ಒಂದೇ ಸ್ಥಳದಲ್ಲಿ ಸರ್ಕಾರಿ ಉದ್ಯೋಗದಲ್ಲಿರುವ ಪತಿ-ಪತ್ನಿ ಇಬ್ಬರೂ ವಾಸಿಸುತ್ತಿದ್ದರೆ, ಇಬ್ಬರಲ್ಲಿ ಒಬ್ಬರು ಮಾತ್ರ ಮನೆ ಬಾಡಿಗೆ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಈ ಭತ್ಯೆಯನ್ನು ಸರ್ಕಾರಿ ನೌಕರನ ವಾಸಸ್ಥಾನವನ್ನು ಪರಿಗಣಿಸದೇ ಕರ್ತವ್ಯದ ಸ್ಥಳಕ್ಕೆ ಸಂಬಂಧಿಸಿದಂತೆ ಸಂದಾಯ ಮಾಡಲಾಗುತ್ತದೆ.
ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್ ವಿಳಾಸ: janasamparka@vistaranews.com
ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಇದನ್ನೂ ಓದಿ | ನೌಕರ ಮಿತ್ರ | ಮಕ್ಕಳು ಅಪ್ರಾಪ್ತರಾಗಿದ್ದರೆ ಅನುಕಂಪದ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬೇಕು?