Site icon Vistara News

ನೌಕರ ಮಿತ್ರ | ಸರ್ಕಾರಿ ಸಾಕ್ಷಿಯಾಗಿ ಕೋರ್ಟ್‌ಗೆ ಹಾಜರಾಗಲು ಯಾವ ರಜೆ ಪಡೆಯಬೇಕು?

ನೌಕರ ಮಿತ್ರ

ನಿಮ್ಮ ಪ್ರಶ್ನೆ : ನಾನು ಸರ್ಕಾರಿ ದಾವೆಯಲ್ಲಿ ಸರ್ಕಾರಿ ಸಾಕ್ಷಿಯಾಗಿ ನ್ಯಾಯಾಲಯದಲ್ಲಿ ಸಾಕ್ಷಿಯನ್ನು ನುಡಿದಿರುತ್ತೇನೆ. ಹಾಜರಾತಿ ಪ್ರಮಾಣ ಪತ್ರವನ್ನು ಕಚೇರಿ ಮುಖ್ಯಸ್ಥರಿಗೆ ನೀಡಿದರೂ, ಆ ದಿನದಂದು ಆಕಸ್ಮಿಕ ರಜೆಯೆಂದು ಪರಿಗಣಿಸಿ ಪ್ರಮಾಣ ಪತ್ರವನ್ನು ತಿರಸ್ಕರಿಸಿರುತ್ತಾರೆ. ಇದು ಸರಿಯೇ ?
ಶಶಿಕುಮಾರ್, ತುಮಕೂರು

ತಜ್ಞರು ನೀಡಿದ ಉತ್ತರ: 2021 ರ ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಾವಳಿಯ ನಿಯಮ 12(3) ರಂತೆ ಸರ್ಕಾರಿ ನೌಕರನು ನಿಯಮಿಸಿದ ಪ್ರಾಧಿಕಾರದ ಪೂರ್ವ ಮಂಜೂರಾತಿ ಪಡೆಯದೆ ಯಾವುದೇ ನ್ಯಾಯಿಕ ವಿಚಾರಣೆಯಲ್ಲಿ ಸರ್ಕಾರದ ಪರವಾಗಿ ನೀಡುವುದಕ್ಕೆ ಅವಕಾಶವಿರುತ್ತದೆ. ಆದ್ದರಿಂದ ನೀವು ಕಚೇರಿ ಮುಖ್ಯಸ್ಥರಿಗೆ ನೀಡಿದ ಹಾಜರಾತಿ ಪ್ರಮಾಣ ಪತ್ರವನ್ನು ಪರಿಗಣಿಸಿ ಅನ್ಯ ಕಾರ್ಯ ನಿಮಿತ್ತವೆಂದು ನಮೂದಿಸಬೇಕು. ಸಾಂದರ್ಭಿಕ ರಜೆಯೆಂದು ಪರಿಗಣಿಸಿರುವುದು ಸರಿಯಾದ ಕ್ರಮವಲ್ಲ.

ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್‌ ವಿಳಾಸ: janasamparka@vistaranews.com

ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಇದನ್ನೂ ಓದಿ | Naukra Mitra | ಕಾಲಮಿತಿ ವೇತನ ಬಡ್ತಿಯನ್ನು 2ನೇ ಬಾರಿಗೆ ಪಡೆಯಬಹುದೇ?

Exit mobile version