ನಿಮ್ಮ ಪ್ರಶ್ನೆ : ನಾನು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ 1997 ರಿಂದ 2022ರ ವರೆಗೆ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದೇನೆ. ಆದರೆ ನನಗೆ 25 ವರ್ಷದ ಒಂದು ಹೆಚ್ಚುವರಿ ವೇತನ ಬಡ್ತಿ ಲಭ್ಯವಾಗಿಲ್ಲ. ಇದಕ್ಕೆ ಏನು ಮಾಡಬೇಕು? ಯಾವ ರೀತಿ ಕ್ರಮ ಕೈಗೊಳ್ಳಬೇಕು? ದಯವಿಟ್ಟು ತಿಳಿಸಿ.
ಅಶ್ವಿನಿರಾವ್ ಜಿ. | ಶಿವಮೊಗ್ಗ
ತಜ್ಞರು ನೀಡಿದ ಉತ್ತರ: ದಿನಾಂಕ 14-೦6-2102ರ ಸರ್ಕಾರಿ ಆದೇಶ ಸಂಖ್ಯೆ ಎಫ್ ಡಿ 12, ಎಸ್ ಆರ್ ಪಿ 2012, (4)ರ ರೀತ್ಯ ದಿನಾಂಕ 1-೦4-2012ಕ್ಕೆ 25 ವರ್ಷಗಳ ಸೇವೆ ಪೂರೈಸಿರುವ ಸರ್ಕಾರಿ ನೌಕರರು ಹೆಚ್ಚುವರಿ ವೇತನ ಬಡ್ತಿಗೆ ಅರ್ಹರಾಗುತ್ತಾರೆ. ಆದ ಕಾರಣ ನೀವು ಸಕ್ಷಮ ಪ್ರಾಧಿಕಾರಕ್ಕೆ ಮನವಿಯನ್ನು ಸಲ್ಲಿಸಿ ಈ ಹೆಚ್ಚುವರಿ ವೇತನ ಬಡ್ತಿಯನ್ನು ಪಡೆಯಬಹುದು.
ನಿಮ್ಮ ಪ್ರಶ್ನೆ/ಸಮಸ್ಯೆಯನ್ನು ಕಳುಹಿಸಬೇಕಾದ ಇ-ಮೇಲ್ ವಿಳಾಸ: janasamparka@vistaranews.com
ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಇದನ್ನೂ ಓದಿ | ನೌಕರ ಮಿತ್ರ | ಸ್ವಯಂ ಚಾಲಿತ ಬಡ್ತಿಗೆ ಎಷ್ಟು ವರ್ಷ ಸೇವೆ ಸಲ್ಲಿಸಿರಬೇಕು?