Site icon Vistara News

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

Old Pension Scheme Madhu Bangarappa

ಮೈಸೂರು: ರಾಜ್ಯದಲ್ಲಿ ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿಯಾಗಲಿದೆ. ಈ ಮೂಲಕ ಸದ್ಯವೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ (Good News for Govt Employees) ಸಿಗಲಿದೆ ಎಂದು ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ (Congress manifesto) ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡುವುದಾಗಿ ಹೇಳಿತ್ತು. ಅದರಂತೆ ನಡೆದುಕೊಳ್ಳಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯ (New Pension Scheme) ವಿರುದ್ಧ ದೊಡ್ಡ ಮಟ್ಟದ ಆಕ್ರೋಶವಿದೆ. ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಆಗಾಗ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲೇ ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ ಮಂಡಿಸಿದ್ದರು. ಬಿಜೆಪಿ ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವನ್ನು ತಳೆದಿರಲಿಲ್ಲ. ಆದರೆ, ಕಾಂಗ್ರೆಸ್‌ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಪ್ರಕಟಿಸಿತ್ತು. ಇದೀಗ ಪಕ್ಷ ಗೆಲುವು ಸಾಧಿಸಿದ್ದರಿಂದ ಅದು ಆ ಬೇಡಿಕೆಯನ್ನು ಈಡೇರಿಸಲಿದೆ ಎಂದು ಮಧು ಬಂಗಾರಪ್ಪ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.

ಮುಂದಿನ ವರ್ಷದಿಂದ 600 ಕರ್ನಾಟಕ ಪಬ್ಲಿಕ್‌ ಸ್ಕೂಲ್

‌ರಾಜ್ಯದಲ್ಲಿ ಮುಂದಿನ ವರ್ಷದಿಂದ 600 ಹೊಸ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಸೋಮವಾರ ವಿಶ್ವನಾಥಪುರದಲ್ಲಿ ಹೇಳಿದರು. ಜಿಲ್ಲಾಡಳಿತ ಮತ್ತು ಜಿಪಂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೆಪಿಎಸ್‌ ಶಾಲೆಯ ಆವರಣದಲ್ಲಿ ʻನನ್ನ ಶಾಲೆ ನನ್ನ ಕೊಡುಗೆʼಯಡಿಯಲ್ಲಿ ಸಿಎಸ್‌ಆರ್‌ ಅನುದಾನದಲ್ಲಿ ಮಾದರಿ ಸರಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಸ್‌ಆರ್‌ ಅನುದಾನದಡಿಯಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರದ ಪ್ರಯತ್ನಗಳು ಕಾರ್ಯರೂಪದಲ್ಲಿದೆ. 1 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್‌ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್‌ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: Shivamogga Violence : ನಾವು ತ್ರಿಶೂಲ ಹಿಡ್ಕೊಳಲ್ವಾ? ಹಾಗೆ ಅವರು ತಲ್ವಾರ್‌ ಹಿಡಿದಿದ್ದಾರೆ ಅಷ್ಟೆ; ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿಮೂಲಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ . ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ ಎಂದು ವಿವರಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Exit mobile version