Site icon Vistara News

Sarvotthama Seva Prashasthi : ಸರ್ಕಾರಿ ಅಧಿಕಾರಿ, ನೌಕರರಿಂದ ನಾಮ ನಿರ್ದೇಶನ ಆಹ್ವಾನ

proposals invited for sarvothama seva prashasti

govt

ಬೆಂಗಳೂರು: ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ /ಸಾಧನೆಗೈದ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ʻʻಸರ್ವೋತ್ತಮ ಸೇವಾ ಪ್ರಶಸ್ತಿ” (Sarvotthama Seva Prashasthi)ನೀಡುತ್ತಿದ್ದು, ಅರ್ಹ ಅಧಿಕಾರಿ/ ನೌಕರರು ತಮ್ಮ ನಾಮ ನಿರ್ದೇಶನಗಳನ್ನು ಸಲ್ಲಿಸಲು ಈಗ ಅವಕಾಶ ನೀಡಲಾಗಿದೆ. ಇದಕ್ಕೆ ಮಾ. 31 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ನಾಮ ನಿರ್ದೇಶನ ಮಾಡಬಹುದಾಗಿದೆ.

ಗ್ರೂಪ್ -ಎ, ಗ್ರೂಪ್‌-ಬಿ, ಗ್ರೂಪ್‌-ಸಿ ಮತ್ತು ಗ್ರೂಪ್-ಡಿ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ಜಿಲ್ಲೆಗೆ ಹತ್ತರಂತೆ ಒಟ್ಟು 310 ಪ್ರಶಸ್ತಿಗಳನ್ನು ಜಿಲ್ಲಾಮಟ್ಟದಲ್ಲಿ ನೀಡಲಾಗುತ್ತದೆ. ಈ ಪ್ರಶಸ್ತಿಯ ಮೊತ್ತವು 25 ಸಾವಿರ ರೂ.ಗಳಾಗಿರುತ್ತದೆ. ಇದಲ್ಲದೆ ರಾಜ್ಯ ಮಟ್ಟದಲ್ಲಿ 30 ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯ ಮೊತ್ತವು 50 ಸಾವಿರ ರೂ.ಗಳಾಗಿರುತ್ತದೆ. ರಾಜ್ಯ ಸರ್ಕಾರವು ಈ ಪ್ರಶಸ್ತಿ ನೀಡಲು ಒಟ್ಟು 92.50 ಲಕ್ಷ ರೂ. ವಿನಿಯೋಗಿಸಲಿದೆ.

ಸವೋತ್ತಮ ಸೇವಾ ಪ್ರಶಸ್ತಿಯ ಎರಡು ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸ ಬಯಸುವವರು ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನವನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ನಾಮ ನಿರ್ದೇಶನ ಮಾಡಲು ಅವಕಾಶ ನೀಡಲಾಗಿದ್ದು, ಕನ್ನಡದಲ್ಲಿ ಅರ್ಜಿ ಸಲ್ಲಿಸಲು ನುಡಿ 6.0 ಆವೃತ್ತಿಯನ್ನು ಮಾತ್ರ ಬಳಸುವಂತೆ ಈ ಪ್ರಶಸ್ತಿ ನೀಡುತ್ತಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸೂಚಿಸಿದೆ.

ಜಿಲ್ಲಾಮಟ್ಟದ ಪ್ರಶಸ್ತಿಗಳಿಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಅರ್ಹರನ್ನು ಆಯ್ಕೆ ಮಾಡಲಿದೆ. ರಾಜ್ಯ ಮಟ್ಟದ ಪ್ರಶಸ್ತಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಅರ್ಹರನ್ನು ಆಯ್ಕೆ ಮಾಡಲಿದೆ. ಆಯಾ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಜಿಲ್ಲಾ ಸಮಿತಿಗಳಲ್ಲಿ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ರಾಜ್ಯ ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ. ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಂದು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ನಾಮ ನಿರ್ದೇಶನವನ್ನು ಮಾಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಆನ್‌ಲೈನ್‌ನಲ್ಲಿ ನಾಮನಿರ್ದೇಶನ ಮಾಡುವಾಗ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಲ್ಲಿ ಸಹಾಯವಾಣಿ ಸಂಖ್ಯೆ 080-22230060 (ಶರತ್‌) ಯನ್ನು ಸಂಪರ್ಕಿಸಬೇಕೆಂದು ಸೂಚಿಸಲಾಗಿದೆ.

ಯಾರು ಈ ಪ್ರಶಸ್ತಿಗೆ ಅರ್ಹರು?

ಈ ಕೆಳಗಿನ ಅರ್ಹತೆಗಳನ್ನು ಹೊಂದಿದವರನ್ನು ಗುರುತಿಸಿ, ಈ ಪ್ರಶಸ್ತಿ ನೀಡಲಾಗುತ್ತದೆ.
1. ವಿನೂತನ ರೀತಿ ಪದ್ಧತಿ/ಯೋಜನೆಯನ್ನು ಜಾರಿಗೆ ತರುವುದು.
2. ಕಾರ್ಯ ವೃಂದದಲ್ಲಿ ಬದಲಾವಣೆ ಮತ್ತು ಸಂಸ್ಥೆಗಳ ವೃದ್ಧಿ.
3. ನಾಗರೀಕ ಸೇವಾ ವ್ಯವಸ್ಥೆಯಲ್ಲಿ ಗುಣಾತ್ಮಕ, ನಾಗರಿಕ ಸ್ನೇಹಿ ಮತ್ತು ಭ್ರಷ್ಠಾಚಾರವಿಲ್ಲದ ವಾತಾವರಣವನ್ನು ನಿರ್ಮಿಸುವುದು.
4. ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಅತ್ಯುನ್ನತ ಕಾರ್ಯ.
5. ಮೌಲ್ಯವರ್ಧಿತ ಸೇವೆ, ವೃದ್ಧಿ, ಮುಂದಾಳತ್ವ ಮತ್ತು ಚಲನಶೀಲಗಳ ರಚನೆ.
6. ಸರ್ಕಾರದ/ಸಾರ್ವಜನಿಕ ಹಣದ ಉಳಿತಾಯ.

ಪ್ರಶಸ್ತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಇದನ್ನೂ ಓದಿ : Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

Exit mobile version