ನಿಮ್ಮ ಪ್ರಶ್ನೆ : ನಾನು ‘ಡಿ’ ದರ್ಜೆ ಹುದ್ದೆಯಲ್ಲಿ ಕೆಲಸಮಾಡುತ್ತಿದ್ದೇನೆ. ನೇಮಕವಾಗಿ, ೧೦, ೧೫ ವರ್ಷಗಳ ಕಾಲಮಿತಿ ವೇತನ ಬಡ್ತಿ ಹಾಗೂ ೨೦ ವರ್ಷದ ವಿಶೇಷ ಬಡ್ತಿ ಪಡೆದಿದ್ದೇನೆ. ಈಗ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಪದೋನ್ನತಿ ಪಡೆದು, ೧೦ ವರ್ಷಗಳು ಆಗಿದ್ದು, ಮತ್ತೊಮ್ಮೆ ಕಾಲಮಿತಿ ವೇತನ ಬಡ್ತಿಯನ್ನು ಪಡೆಯಲು ಅವಕಾಶವಿದೆಯೇ ?
– ರಾಜೇಂದ್ರ ಕುಮಾರ್, ಹಾಸನ
ತಜ್ಞರು ನೀಡಿದ ಉತ್ತರ: ೧೯೮೩ರ ಕರ್ನಾಟಕ ಸರ್ಕಾರಿ ಸೇವಾ (ಕಾಲಬದ್ಧ ಮುಂಬಡ್ತಿ) ನಿಯಮಾವಳಿಯ ನಿಯಮ ೩ರ ರೀತ್ಯಾ ಸರ್ಕಾರಿ ನೌಕರನಿಗೆ ಆತನ ಪೂರ್ಣ ಸರ್ಕಾರಿ ಸೇವಾವಧಿಯಲ್ಲಿ ಒಂದಕ್ಕಿಂತ ಹೆಚ್ಚು ಸಲ ಈ ಕಾಲಮಿತಿ ವೇತನ ಬಡ್ತಿಯನ್ನು ಪಡೆಯಲು ಅವಕಾಶವಿರುವುದಿಲ್ಲ. ಆದ್ದರಿಂದ ನಿಮಗೆ ದ್ವಿತೀಯ ದರ್ಜೆ ಸಹಾಯಕರ ಹುದ್ದೆಯಲ್ಲಿ ಹತ್ತು ವರ್ಷದ ಕಾಲಮಿತಿ ವೇತನ ಬಡ್ತಿ ಲಭ್ಯವಾಗುವುದಿಲ್ಲ.
ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಇದನ್ನೂ ಓದಿ | Naukra Mitra | ಶಿಶುಪಾಲನಾ ರಜೆಯ ಸೌಲಭ್ಯ ಯಾರೆಲ್ಲಾ ಪಡೆಯಬಹುದು?