Astrology Answers | ನನಗೆ ಕಾಯಂ ಆಗಿ ಒಂದೆಡೆ ಕೆಲಸ ಸಿಗುತ್ತದೆಯೇ ಗುರೂಜಿ? - Vistara News

ಪ್ರಮುಖ ಸುದ್ದಿ

Astrology Answers | ನನಗೆ ಕಾಯಂ ಆಗಿ ಒಂದೆಡೆ ಕೆಲಸ ಸಿಗುತ್ತದೆಯೇ ಗುರೂಜಿ?

ಇದು ಜ್ಯೋತಿಷ್ಯದ ಹೊಸ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್‌. ದ್ವಾರಕನಾಥ್‌ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ಇಲ್ಲಿ ನೀವೂ ಪ್ರಶ್ನೆ ಕೇಳಬಹುದು.

VISTARANEWS.COM


on

ಭವಿಷ್ಯ ಪ್ರಶ್ನೋತ್ತರ rajaguru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಶ್ನೆ: ನಾನು ಬಿಇ ಮೆಕಾನಿಕಲ್‌ ಓದಿದ್ದೇನೆ. ಒಂದು ಕೆಲಸ ಮಾಡುತ್ತಿದ್ದೆ, ಅದನ್ನು ಬಿಟ್ಟು ಈಗ ತಾತ್ಕಾಲಿಕವಾಗಿ ಮತ್ತೊಂದು ಕಡೆ ಕೆಲಸ ಮಾಡುತ್ತಿರುವೆ. ನನಗೆ ಕಾಯಂ ಆಗಿ ಒಂದೆಡೆ ಕೆಲಸ ಸಿಗುತ್ತದೆಯೇ ಗುರೂಜಿ?
ಜನ್ಮದಿನಾಂಕ : 25-7-1995 ನಕ್ಷತ್ರ: ಆರಿದ್ರಾ

ಪರಿಹಾರ: ದಶಮದಲ್ಲಿ ಗುರು, ಅಷ್ಟಮದಲ್ಲಿ ಶನಿ ಇದ್ದಾಗ ಯಾವ ಕೆಲಸವನ್ನಾದರೂ ಯೋಚನೆ ಮಾಡಿ ಮಾಡಬೇಕು. ಯಾವುದೇ ಕೆಲಸ ಮಾಡುವಾಗಲಾದರೂ ಬಹಳ ಎಚ್ಚರಿಕೆಯಿಂದ ಮಾಡಬೇಕು. ಸದ್ಯ ನೀವು ಎಲ್ಲಿ ಕೆಲಸ ಮಾಡುತ್ತಿದ್ದೀರೋ ಅಲ್ಲಿಯೇ ಪ್ರಮಾಣಿಕವಾಗಿ ಕೆಲಸ ಮಾಡಿ. ನಿಮ್ಮ ಬಾಸ್‌ನ ಮನಗೆದ್ದು, “ಒಳ್ಳೆಯ ಕೆಲಸಗಾರʼʼ ಎಂಬ ಹೆಸರು ಪಡೆದುಕೊಳ್ಳಿ. ಮುಂದೆ ನಿಮ್ಮ ಗ್ರಹಗತಿ ಬದಲಾದಾಗ ಅದರಲ್ಲೂ ಶನಿ-ಗುರು ಬದಲಾದಾಗ ನೀವಂದುಕೊಂಡಂತಹ ಕೆಲಸ ಸಿಗುತ್ತದೆ. ಇದಕ್ಕಾಗಿ ನೀವು ಅನನ್ಯವಾಗಿ ಇಡಗುಂಜಿ ಗಣಪತಿಯನ್ನು ಪೂಜಿಸಿ, ಪ್ರಾರ್ಥಿಸಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಇದನ್ನೂ ಓದಿ | Finance Horoscope 2023 | ಜನವರಿಯಲ್ಲಿ ಯಾವೆಲ್ಲಾ ರಾಶಿಯವರಿಗೆ ಆರ್ಥಿಕವಾಗಿ ಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Raichur Lok Sabha Constituency: ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ರಾಜಾ ಅಮರೇಶ್ವರ್‌ ನಾಯಕ್‌ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಅವರು ಖಾತೆ ತೆರೆಯುವ ಉತ್ಸಾಹದಲ್ಲಿದ್ದಾರೆ. ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮದ ಬಲ ಇದ್ದರೆ, ಕುಮಾರ್‌ ನಾಯಕ್‌ ಪರ ಯುವಕರ ಒಲವಿದೆ ಎನ್ನಲಾಗುತ್ತಿದೆ.

VISTARANEWS.COM


on

Raichur Lok Sabha Constituency
Koo

ರಾಯಚೂರು: ಭತ್ತದ ಜಿಲ್ಲೆಯಾದ ರಾಯಚೂರಿನಲ್ಲಿ ಲೋಕಸಭೆ ಚುನಾವಣೆ (Raichur Lok Sabha Constituency) ಸಮರವು ಮಹತ್ವ ಪಡೆದಿದ್ದು, ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್‌ (Raja Amareshwara Naik) ಹಾಗೂ ಕಾಂಗ್ರೆಸ್‌ನ ಜಿ. ಕುಮಾರ್‌ ನಾಯಕ್‌ (G Kumar Nayak) ಮಧ್ಯೆ ತೀವ್ರ ಪೈಪೋಟಿ ನಡೆದಿದೆ. ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ರಾಜಾ ಅಮರೇಶ್ವರ್‌ ನಾಯಕ್‌ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಅವರು ಖಾತೆ ತೆರೆಯುವ ಉತ್ಸಾಹದಲ್ಲಿದ್ದಾರೆ.

ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮದ ಬಲವಿದೆ. ಹಲವು ಅಭಿವೃದ್ಧಿ ಕಾಮಗಾರಿಗಳ ಬಲ ಇದ್ದರೂ, ಮೂಲ ಸೌಕರ್ಯ ಒದಗಿಸುವ ವಿಚಾರದಲ್ಲಿ ಸಂಸದ ಹಿಂದೆ ಬಿದ್ದಂತೆ ಕಾಣಿಸುತ್ತಿದೆ. ರೈತರ ಆಕ್ರೋಶವೂ ಅವರ ವಿರುದ್ಧ ಇದೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಮತದಾರರು ರಾಷ್ಟ್ರ ಮಟ್ಟದ ಚಿಂತನೆಯೊಂದಿಗೆ ವೋಟು ಹಾಕುವುದರಿಂದ ಅಮರೇಶ್ವರ ನಾಯಕ್‌ ಅವರಿಗೆ ವರದಾನವಾಗುವ ಸಾಧ್ಯತೆ ಇದೆ.

ರಾಜಾ ಅಮರೇಶ್ವರ ನಾಯಕ್

ಇನ್ನು, 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಜಿ. ಕುಮಾರ್‌ ನಾಯಕ್‌ ಅವರು ನಿವೃತ್ತಿ ಹೊಂದಿದ್ದು, ಈಗ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್‌ ಆರಂಭಿಸುವ ತವಕದಲ್ಲಿದ್ದಾರೆ. 1999ರಿಂದ 2002 ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಕುಮಾರ್‌ ನಾಯಕ್‌ ಅವರಿಗೆ ಜಿಲ್ಲೆಯ ಜತೆ ಒಡನಾಟವಿದೆ. ಐಎಎಸ್‌ ಅಧಿಕಾರಿಯಾಗಿದ್ದರು ಎಂಬ ಸಾಫ್ಟ್‌ ಕಾರ್ನರ್‌, ಯುವಕರ ಬೆಂಬಲವು ಅವರ ಜತೆಗಿದೆ. ಹಾಗಾಗಿ, ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕ್‌ ಹಾಗೂ ಕುಮಾರ್‌ ನಾಯಕ್‌ ಮಧ್ಯೆ ಪೈಪೋಟಿ ಅಂತೂ ಇದೆ. ‌

ಜಿ ಕುಮಾರ್‌ ನಾಯಕ್

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಜಾ ಅಮರೇಶ್ವರ್‌ ನಾಯಕ್‌ ಅವರು ಕಾಂಗ್ರೆಸ್‌ನ ಬಿ.ವಿ. ನಾಯಕ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ರಾಜಾ ಅಮರೇಶ್ವರ್‌ ನಾಯಕ್‌ ಅವರು 1.17 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ.ವಿ. ನಾಯಕ್‌ ಅವರು ಬಿಜೆಪಿಯ ಶಿವನಗೌಡ ನಾಯಕ್‌ ವಿರುದ್ಧ ಕೇವಲ 1,499 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2019ರಲ್ಲಿ ರಾಜಾ ಅಮರೇಶ್ವರ್‌ ನಾಯಕ್‌ ಅವರಿಗೆ ಮೋದಿ ಅಲೆಯು ವರದಾನವಾಗಿತ್ತು.

ಮತದಾರರ ಸಂಖ್ಯೆ

ಪುರುಷರು9.55 ಲಕ್ಷ
ಮಹಿಳೆಯರು9.71 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು367
ಒಟ್ಟು19.28 ಲಕ್ಷ

1957ರಿಂದ 2019ರ ಅವಧಿಯಲ್ಲಿ ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ 17 ಬಾರಿ ಚುನಾವಣೆ ನಡೆದಿದೆ. 17ರಲ್ಲಿ 13 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ, ಎರಡು ಬಾರಿ ಬಿಜೆಪಿ, ಒಮ್ಮೆ ಸ್ವತಂತ್ರ ಪಕ್ಷ ಹಾಗೂ ಒಮ್ಮೆ ಜೆಡಿಎಸ್‌ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ರಾಯಚೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಯಾದಗಿರಿಯ ಮೂರು, ರಾಯಚೂರು ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಐದರಲ್ಲಿ ಕಾಂಗ್ರೆಸ್‌, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಭಾವವೂ ಇರುವುದು ಮೈತ್ರಿ ಪಕ್ಷವಾದ ಬಿಜೆಪಿಗೆ ಹೆಚ್ಚಿನ ಅನುಕೂಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Continue Reading

ದೇಶ

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

Arvind Kejriwal: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು (ಜೂ. 2) ಅವರು ತಿಹಾರ್‌ ಜೈಲಿಗೆ ಮರಳಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು (ಜೂ. 2) ಅವರು ತಿಹಾರ್‌ ಜೈಲಿಗೆ ಮರಳಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕೋರ್ಟ್‌ ಈ ಹಿಂದೆ ಮೇ 10ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಚುನಾವಣೆ ಪೂರ್ಣಗೊಂಡ ಮರುದಿನವೇ ಜೈಲಿಗೆ ಮರಳುವಂತೆ ಕೋರ್ಟ್‌ ಹೇಳಿತ್ತು. ಅದರಂತೆ ಅವರು 21 ದಿನಗಳ ಬಳಿಕ ಶರಣಾಗಿದ್ದಾರೆ.

ಕೇಜ್ರಿವಾಲ್‌ ಜೈಲಿಗೆ ತೆರಳುವ ಮುನ್ನ ರಾಜ್‌ ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದರು. ಬಳಿಕ ಪತ್ನಿ ಸುನೀತಾ ಅವರೊಂದಿಗೆ ಹನುಮಾನ್‌ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ಆಮ್‌ ಆದ್ಮಿ ಪಾರ್ಟಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಇನ್ನು ಅರವಿಂದ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿ ವಿಚಾರಣೆ ಜೂ. 5ರಂದು ದಿಲ್ಲಿ ಕೋರ್ಟ್‌ನಲ್ಲಿ ನಡೆಯಲಿದೆ. ಶನಿವಾರ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ʼʼಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದ್ದರು. ಜತೆಗೆ ʼʼದೆಹಲಿಯ ಜನರಿಗೆ ಲಭ್ಯವಿರುವ ಎಲ್ಲ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆʼʼ ಎಂದು ಭರವಸೆ ನೀಡಿದ್ದರು.

ʼʼನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಜೈಲಿನಲ್ಲಿ ನಿಮ್ಮ ಬಗ್ಗೆ ನಾನು ತುಂಬಾ ಚಿಂತೆ ಮಾಡುತ್ತೇನೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ನಡುವೆ ಇರುವುದಿಲ್ಲ, ಆದರೆ ನಿಮ್ಮ ಎಲ್ಲ ಕೆಲಸಗಳು ಮುಂದುವರಿಯುತ್ತವೆ. ಹಿಂದಿರುಗಿದ ನಂತರ ನಾನು ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1,000 ರೂ.ಗಳನ್ನು ನೀಡಲು ಪ್ರಾರಂಭಿಸುತ್ತೇನೆ” ಎಂದು ಕೇಜ್ರಿವಾಲ್‌ ಭಾವುಕರಾಗಿ ಹೇಳಿದ್ದರು.

ವೈದ್ಯಕೀಯ ಪರೀಕ್ಷೆಗಳಿಗಾಗಿ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವ ಮನವಿಯನ್ನು ತುರ್ತಾಗಿ ಪರಿಗಣಿಸಲು ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದ ನಂತರ ಅವರು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯುವ ಆಯ್ಕೆಯನ್ನು ಹೊಂದಿರುವುದರಿಂದ ಅವರ ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು.

ಇದನ್ನೂ ಓದಿ: Arvind Kejriwal: ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್‌ ಫಸ್ಟ್‌ ನೈಟ್‌ ಹೇಗಿತ್ತು?

ಹೆಚ್ಚಿನ ಕೀಟೋನ್ ಮಟ್ಟ ಹೆಚ್ಚಳದಿಂದಾಗಿ ತೂಕ ನಷ್ಟದಿಂದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ್ದರು. ಈ ರೋಗಲಕ್ಷಣಗಳು ಮೂತ್ರಪಿಂಡದ ಸಮಸ್ಯೆಗಳು, ಗಂಭೀರ ಹೃದಯದ ಪರಿಸ್ಥಿತಿಗಳು ಅಥವಾ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಆಪ್​ ವಕೀಲರು ವಾದಿಸಿದ್ದರು.

Continue Reading

ಪ್ರಮುಖ ಸುದ್ದಿ

Bangalore Central Election : ಮನ್ಸೂರ್ ಅಲಿ ಖಾನ್ ವಿರುದ್ಧ ಗೆದ್ದು ಅಜೇಯ ಓಟ ಮುಂದುವರಿಸುವರೇ ಪಿ. ಸಿ ಮೋಹನ್​

Bangalore Central Election : ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಎರಡನೇ ಹಂತದ ಮತದಾನ ನಡೆಯಿತು. ಜೂನ್ 4, 2024 ರಂದು ಮತ ಎಣಿಕೆ ನಡೆಯಲಿದೆ. 2009ರಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪಿ.ಸಿ.ಮೋಹನ್ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

VISTARANEWS.COM


on

Bangalore Central ElectionWill PC Mohan's unbeaten run continue in Bengaluru Central Lok Sabha constituency?
Koo

ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರವೂ (Bangalore Central Election ) ಒಂದು. ಬೆಂಗಳೂರು 2008 ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಾದ ದಕ್ಷಿಣ ಮತ್ತು ಬೆಂಗಳೂರು ಉತ್ತರದಿಂದ ಬೇರ್ಪಟ್ಟು ಈ ಕ್ಷೇತ್ರವು ಅಸ್ತಿತ್ವಕ್ಕೆ ಬಂದಿತು. ಈ ಕ್ಷೇತ್ರವು ಗಮನಾರ್ಹ ಅಲ್ಪಸಂಖ್ಯಾತ ಮತದಾರರನ್ನು ಹೊಂದಿದೆ. ಈ ಕ್ಷೇತ್ರದಲ್ಲಿ ಸುಮಾರು 5.5 ಲಕ್ಷ ತಮಿಳರೇ ಇದ್ದಾರೆ. 4.5 ಲಕ್ಷ ಮುಸ್ಲಿಮರು ಮತ್ತು ಸುಮಾರು 2 ಲಕ್ಷ ಕ್ರಿಶ್ಚಿಯನ್ನರು ಕೂಡ ನೆಲೆಯಾಗಿದ್ದಾರೆ. ಮಾರ್ವಾಡಿಗಳು ಮತ್ತು ಗುಜರಾತ್​ನಿಂದ ಬಂದವರೂ ಇದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ, ಅದರಲ್ಲಿ ಎರಡು ಮೀಸಲು ಕ್ಷೇತ್ರಗಳಾಗಿವೆ. ಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನು ಆರಂಭದಲ್ಲೇ ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. 2019 ಬಳಿಕ ನಡೆದ ಮೂರು ಚುನಾವಣೆಗಗಲ್ಲಿ ಬಿಜೆಪಿಯೇ ಗೆದ್ದಿದೆ.

ಪ್ರಮುಖ ಅಭ್ಯರ್ಥಿಗಳು ಯಾರು?

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಎರಡನೇ ಹಂತದ ಮತದಾನ ನಡೆಯಿತು. ಜೂನ್ 4, 2024 ರಂದು ಮತ ಎಣಿಕೆ ನಡೆಯಲಿದೆ. 2009ರಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪಿ.ಸಿ.ಮೋಹನ್ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕರು. ಮೋಹನ್ ಪ್ರತಿ ಬಾರಿಯೂ ಬೆಂಗಳೂರು ಕೇಂದ್ರ ಲೋಕಸಭಾ ಸ್ಥಾನವನ್ನು ಆರಾಮದಾಯಕ ಅಂತರದಿಂದ ಗೆದ್ದಿದ್ದಾರೆ. ಈ ಬಾರಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಪಿ.ಸಿ.ಮೋಹನ್ ಅವರನ್ನು ಉಳಿಸಿಕೊಂಡಿದೆ ಮತ್ತು ಅವರು ಈ ಸ್ಥಾನದಿಂದ ನಾಲ್ಕನೇ ಬಾರಿಗೆ ಮರುಚುನಾವಣೆಯ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ ನಿಂದ ಮನ್ಸೂರ್ ಅಲಿ ಖಾನ್ ಕಣದಲ್ಲಿದ್ದಾರೆ. ಅವರು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಪಕ್ಷದ ಹಿರಿಯ ರೆಹಮಾನ್ ಖಾನ್ ಅವರ ಪುತ್ರ.

ಇದನ್ನೂ ಓದಿ: Lok Sabha Election 2024 : ಸೂರ್ಯನ ತೇಜಸ್ಸು ಕಡಿಮೆ ಮಾಡಲು ಸೌಮ್ಯ ಹೋರಾಟ ಸಾಲುವುದೇ?

2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ, ಸುಮಾರು 2106031 ನಗರ ಮತದಾರರು ಸುಮಾರು 95.5% ಮತದಾರರನ್ನು ಹೊಂದಿದ್ದಾರೆ. ಕ್ಷೇತ್ರದ ಸರಾಸರಿ ಸಾಕ್ಷರತಾ ಪ್ರಮಾಣವು 78.05% ಆಗಿತ್ತು. ಎಸ್ಸಿ ಮತದಾರರು ಸುಮಾರು 16% ರಷ್ಟಿದ್ದರೆ, ಮುಸ್ಲಿಂ ಮತದಾರರು 17.5% ರಷ್ಟಿದ್ದಾರೆ.

ಹಿಂದಿನ ಬಾರಿ ಗೆಲುವು

2019ರ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು 6,02,853 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ 5,31,885 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ 28,906 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರು.

2014ರ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ (4.19 ಲಕ್ಷ) ಅವರನ್ನು 1.37 ಲಕ್ಷ ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ಶೇ.55ರಷ್ಟು ಮತದಾನವಾಗಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಆಮ್ ಆದ್ಮಿ ಪಕ್ಷ ಮೂರನೇ ಸ್ಥಾನದಲ್ಲಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಪಿ.ಸಿ.ಮೋಹನ್ ಅವರು ಕಾಂಗ್ರೆಸ್​​ನ ಎಚ್.ಟಿ.ಸಾಂಗ್ಲಿಯಾನ ಅವರನ್ನು 35,218 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.40.16ರಷ್ಟು ಮತಗಳನ್ನು ಪಡೆದಿತ್ತು.

ಸುತ್ತಲಿನ ಕ್ಷೇತ್ರಗಳು ಯಾವುವು?

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ತನ್ನ ಗಡಿಯನ್ನು ಇತರ ನಾಲ್ಕು ಲೋಕಸಭಾ ಕ್ಷೇತ್ರಗಳೊಂದಿಗೆ ಹಂಚಿಕೊಂಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ. ಈ ಕ್ಷೇತ್ರವು ಅಂತರರಾಜ್ಯ ಗಡಿಯನ್ನು ಹಂಚಿಕೊಂಡಿದೆ.

Continue Reading

ಬೀದರ್‌

Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Bidar Lok Sabha Constituency: ಭಗವಂತ ಖೂಬಾ ಅವರು ಕಳೆದ ಎರಡು ಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸಿದ್ದಾರೆ. ಎರಡನೇ ಅವಧಿಯಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಅವರ ಅಭಿವೃದ್ಧಿ ಕೆಲಸಗಳ ಕುರಿತು ಜನರಲ್ಲಿ ಸಕಾರಾತ್ಮಕ ಮನೋಭಾವವೂ ಇದೆ. ಮತ್ತೊಂದೆಡೆ, ಸಾಗರ್‌ ಖಂಡ್ರೆ ಅವರಿಗೆ ತಂದೆ ಈಶ್ವರ್‌ ಖಂಡ್ರೆ ಬಲ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬೆಂಬಲವಿದೆ. ಹಾಗಾಗಿ, ಕ್ಷೇತ್ರದ ಚುನಾವಣಾ ಫಲಿತಾಂಶವು ಕುತೂಹಲ ಕೆರಳಿಸಿದೆ.

VISTARANEWS.COM


on

Bidar Lok Sabha Constituency
Koo

ಬೀದರ್:‌ ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಭದ್ರಕೋಟೆ ಎನಿಸಿರುವ ಕ್ಷೇತ್ರಗಳಲ್ಲಿ ಬೀದರ್‌ ಲೋಕಸಭೆ ಕ್ಷೇತ್ರವೂ ಒಂದಾಗಿದೆ. ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ (Lok Sabha Election) ಬಿಜೆಪಿ ಪರ ಅಲೆ ಇದ್ದರೂ, ಭಗವಂತ್‌ ಖೂಬಾ (Bhagwanth Khuba) ವಿರುದ್ಧ ಕಾಂಗ್ರೆಸ್‌ನ ಯುವ ನಾಯಕ, ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ (Sagar Khandre) ಅವರು ಚುನಾವಣೆ ಅಖಾಡಕ್ಕಿಳಿದಿರುವುದು ಸ್ಪರ್ಧೆಯ ಪೈಪೋಟಿಯನ್ನು ಹೆಚ್ಚಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಇರುವ ಕ್ಷೇತ್ರದಲ್ಲಿ (Bidar Lok Sabha Constituency) ಯಾರಿಗೆ ಜಯದ ಮಾಲೆ ಸಿಗಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಭಗವಂತ ಖೂಬಾ ಅವರು ಕಳೆದ ಎರಡು ಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸಿದ್ದಾರೆ. ಎರಡನೇ ಅವಧಿಯಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಅವರ ಅಭಿವೃದ್ಧಿ ಕೆಲಸಗಳ ಕುರಿತು ಜನರಲ್ಲಿ ಸಕಾರಾತ್ಮಕ ಮನೋಭಾವವೂ ಇದೆ. ಇನ್ನು, ಬಹುತೇಕ ಕ್ಷೇತ್ರಗಳಂತೆ ಇಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇದೆ. ಭಗವಂತ ಖೂಬಾ ಅವರು ಲಿಂಗಾಯತರ ಮತಗಳನ್ನು ಹಿಡಿದಿಟ್ಟುಕೊಂಡಿದ್ದಾರೆ. ಹಾಗಾಗಿ, ಅವರಿಗೆ ಗೆಲುವಿನ ವಿಶ್ವಾಸ ಇದೆ.

Bidar Lok Sabha constituency BJP candidate Bhagwanth Khooba voting in Aurad

ಬಿದರಿ ಕಲೆಗೆ ಹೆಸರುವಾಸಿಯಾಗಿರುವ ಬೀದರ್‌ ಲೋಕಸಭೆ ಕ್ಷೇತ್ರದಲ್ಲಿ 26 ವರ್ಷದ ಸಾಗರ್‌ ಖಂಡ್ರೆ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದು, ಮಗನನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಈಶ್ವರ್‌ ಖಂಡ್ರೆ ಅವರದ್ದಾಗಿದೆ. ಭಗವಂತ ಖೂಬಾ ಅವರ ಅನುಭವದ ಮುಂದೆ ಸಾಗರ್‌ ಖಂಡ್ರೆ ವರ್ಚಸ್ಸು ಕಡಿಮೆ ಇದ್ದರೂ, ಅಪ್ಪನ ಬೆಂಬಲ, ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು, ಲಿಂಗಾಯತರ ಜತೆಗೆ ಮುಸ್ಲಿಮರು ಹಾಗೂ ದಲಿತರ ಮತಗಳು ಇವರಿಗೆ ವರದಾನವಾಗಲಿವೆ.

ಬಿಜೆಪಿ ಭದ್ರಕೋಟೆ

1991ರವರೆಗೂ ಬೀದರ್‌ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಆದರೆ, 1991ರ ಬಳಿಕ ಕ್ಷೇತ್ರವು ಬಿಜೆಪಿ ವಶವಾಯಿತು. 2004ರಲ್ಲಿ ನರಸಿಂಗರಾವ್‌ ಸೂರ್ಯವಂಶಿ ಹಾಗೂ 2009ರಲ್ಲಿ ಧರಂ ಸಿಂಗ್‌ ಅವರು ಬಿಟ್ಟರೆ 1991ರ ಬಳಿಕ ನಡೆದ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಹಾಗಾಗಿ, ಬೀದರ್‌ ಲೋಕಸಭೆ ಕ್ಷೇತ್ರವು ಬಿಜೆಪಿಯ ಭದ್ರಕೋಟೆ ಎನಿಸಿದೆ. ಬೀದರ್‌ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಐವರು ಹಾಗೂ ಕಾಂಗ್ರೆಸ್‌ ಮೂವರು ಶಾಸಕರನ್ನು ಹೊಂದಿದೆ.

ಮತದಾರರ ಸಂಖ್ಯೆ

ಪುರುಷರು8.89 ಲಕ್ಷ
ಮಹಿಳೆಯರು8.17 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು50
ಒಟ್ಟು17.08 ಲಕ್ಷ

2014, 2019ರಲ್ಲಿ ಏನಾಗಿತ್ತು?

ಕಳೆದ ಎರಡು ಚುನಾವಣೆಗಳಲ್ಲಿಯೂ ಭಗವಂತ್‌ ಖೂಬಾ ಅವರೇ ಗೆಲುವು ಸಾಧಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಭಗವಂತ್‌ ಖೂಬಾ ಅವರು ಕಾಂಗ್ರೆಸ್‌ನ ಈಶ್ವರ್‌ ಖಂಡ್ರೆ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು 2014ರಲ್ಲಿ ಭಗವಂತ್‌ ಖೂಬಾ ಅವರು ಮೋದಿ ಅಲೆಯ ಪರಿಣಾಮವಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಧರಂ ಸಿಂಗ್‌ ಅವರನ್ನು 92 ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.

ಇದನ್ನೂ ಓದಿ: Lok Sabha Election: ಕಲಬುರಗಿ ಲೋಕಸಭೆ ಕ್ಷೇತ್ರ: ಖರ್ಗೆ ಅಳಿಯ Vs ಜಾಧವ್;‌ ಯಾರಿಗೆ ಗೆಲುವಿನ ಸಿಹಿ?

Continue Reading
Advertisement
Exit Polls
ವಾಣಿಜ್ಯ54 seconds ago

Exit Polls: ಚುನಾವಣೋತ್ತರ ಸಮೀಕ್ಷೆ ಪ್ರಕಟ; ಭಾರತೀಯ ಷೇರು ಮಾರುಕಟ್ಟೆಯಲ್ಲಿ ಜಿಗಿತ ಸಾಧ್ಯತೆ

Raichur Lok Sabha Constituency
ರಾಯಚೂರು16 mins ago

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Accident Case
ಕ್ರೈಂ24 mins ago

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Lok Sabha Election 2024
ಕರ್ನಾಟಕ39 mins ago

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Aam Panna Recipe
ಆಹಾರ/ಅಡುಗೆ45 mins ago

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

Arvind Kejriwal
ದೇಶ1 hour ago

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

GST Collection
ವಾಣಿಜ್ಯ1 hour ago

GST Collection: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ನಂ. 2; ಇಲ್ಲಿ ಸಂಗ್ರಹವಾಗಿದ್ದು ಎಷ್ಟು?

Kamal Haasan gives a fiery speech at Indian 2 event
ಕಾಲಿವುಡ್1 hour ago

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

CET Ranking
ಬೆಂಗಳೂರು1 hour ago

CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

Bangalore Central ElectionWill PC Mohan's unbeaten run continue in Bengaluru Central Lok Sabha constituency?
ಪ್ರಮುಖ ಸುದ್ದಿ1 hour ago

Bangalore Central Election : ಮನ್ಸೂರ್ ಅಲಿ ಖಾನ್ ವಿರುದ್ಧ ಗೆದ್ದು ಅಜೇಯ ಓಟ ಮುಂದುವರಿಸುವರೇ ಪಿ. ಸಿ ಮೋಹನ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌