Site icon Vistara News

Astrology Answers : ನಾನು ಸ್ವಂತ ಉದ್ಯೋಗ ಮಾಡಬಹುದಾ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನಗೆ ಸ್ವಂತ ಉದ್ಯೋಗ ಮಾಡಬೇಕೆಂಬ ಬಹಳ ಆಸೆ ಇದೆ. ಬಿಸ್ನೆಸ್‌ ಮಾಡಬೇಕೆಂದುಕೊಂಡಿದ್ದೇನೆ. ಮಾಡಬಹುದಾ ಗುರೂಜಿ?.
ರಾಶಿ: ಕುಂಭ ನಕ್ಷತ್ರ: ಶತಭಿಷ

ಪರಿಹಾರ: ತುಲಾ ರಾಶಿಯಲ್ಲಿ ಜನಿಸಿದ ನಿಮಗೆ ಲಗ್ನದಲ್ಲೇ ಕೇತುವಿರುವುದರಿಂದ ಮನಸ್ಸು ಹಲವಾರು ವಿಚಾರಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ಆದ್ದರಿಂದ ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ನಿಧಾನವಾಗಿ ಯೋಚಿಸಿ. ಸ್ವಂತ ವ್ಯಾಪಾರ ಆರಂಭಿಸುವುದಕ್ಕೂ ಮೊದಲು ನಿಮ್ಮ ಜಾತಕವನ್ನು ಕೂಲಂಕಷವಾಗಿ ನಿಮ್ಮ ಕುಲಗುರುಗಳ ಬಳಿ ಪರಿಶೀಲಿಸಿ, ನಂತರ ಪ್ರಾರಂಭಿಸುವುದು ಒಳ್ಳೆಯದು. ಶನಿಯು ಈಗ ಪಂಚಮಕ್ಕೆ ಬಂದಿರುವುದರಿಂದ ಬಹಳ ಎಚ್ಚರಿಕೆಯಿಂದ ಮುಂದೆ ಸಾಗಿರಿ. ಗಣಪತಿಗೆ ಪ್ರತಿನಿತ್ಯ 21 ಗರಿಕೆಗಳಿಂದ ಪೂಜೆ ಮಾಡಿ. ಗಣಪತಿ ಅಷ್ಟೋತ್ತರ ಪಠಿಸಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ : Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?

Exit mobile version