ಪ್ರಶ್ನೆ: ಸರ್ಕಾರಿ ಉದ್ಯೋಗ ಪಡೆಯಬೇಕೆಂದು ಬಹಳ ಕಷ್ಟಪಡುತ್ತಿದ್ದೇನೆ. ನೇಮಕಾತಿ ಪರೀಕ್ಷೆಗಳನ್ನು ಬರೆಯುತ್ತಿದ್ದೇನೆ. ಇದರಲ್ಲಿ ಉತ್ತೀರ್ಣನಾಗುತ್ತೇನೆಯೇ ಗುರೂಜಿ?
ರಾಶಿ: ಮೇಷ ನಕ್ಷತ್ರ: ಭರಣಿ
ಪರಿಹಾರ: ಭರಣಿ ನಕ್ಷತ್ರದಲ್ಲಿ ಹುಟ್ಟಿದವರು ಧರಣಿ ಆಳುತ್ತಾರೆ ಎಂಬ ಮಾತಿದೆ. ಮೇಷ ರಾಶಿಯಲ್ಲಿ ಹುಟ್ಟಿದ ನಿಮಗೆ ಏಪ್ರಿಲ್ ನಂತರ ಸಮಯವು ಚೆನ್ನಾಗಿದ್ದು, ಗುರುವೂ ಲಗ್ನಕ್ಕೆ ಬರುವುದರಿಂದ ಕಾರ್ಯ ಸಿದ್ದಿ, ಮಾಡುವ ಕೆಲಸದಲ್ಲಿ ಜಯವು ದೊರೆಯಲಿದೆ. ಹೆಚ್ಚಿನ ಅವಕಾಶಗಳನ್ನು ಗುರುವೇ ನಿಮಗೆ ಒದಗಿಸುತ್ತಾನೆ. ಸರ್ಕಾರದ ಹುದ್ದೆಗಳ ನೇಮಕಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶ್ರಮವಹಿಸಿ ಓದಿ, ಆಗ ನಿಮಗೆ ಸಫಲತೆ ಖಂಡಿತಾ ದೊರೆಯುತ್ತದೆ. ಗುರು ಒಬ್ಬನೇ ಸಾಕು ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಲು. ಗುರು ಗಣೇಶನನ್ನು ಪೂಜಿಸಿ, ಪ್ರಾರ್ಥಿಸಿ. ಒಳ್ಳೆಯದಾಗಲಿ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್ ವಿಳಾಸ: janasamparka@vistaranews.com
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ : Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?