ಪ್ರಶ್ನೆ: ನನಗೆ ಬಹಳ ದಿನಗಳಿಂದ ಸರಿಯಾದ ಕೆಲಸವಿಲ್ಲ. ಸರ್ಕಾರಿ ಅಥವಾ ಖಾಸಗಿ ಉದ್ಯೋಗ ದೊರೆಯುವುದೇ ಗುರೂಜಿ?
ರಾಶಿ: ತುಲಾ ನಕ್ಷತ್ರ: ವಿಶಾಖ
ಪರಿಹಾರ: ನಿಮ್ಮ ಜಾತಕದ ಪ್ರಕಾರ ಗುರುವು ಏಪ್ರಿಲ್ 21ರ ನಂತರ ಪಂಚಮ ಸ್ಥಾನಕ್ಕೆ ಬರಲಿದ್ದು, ʻಪಂಚಮಂ ಕಾರ್ಯ ಸಿದ್ದಿಃʼ ಎಂಬಂತೆ ನೀವು ಪ್ರಯತ್ನ ಮಾಡುವ ಕಾರ್ಯಗಳಲ್ಲಿ ಯಶಸ್ಸು ಕಂಡುಕೊಳ್ಳುವ ಸಮಯ ಬಂದಿದೆ. ಸರ್ಕಾರಿ ಅಥವಾ ಖಾಸಗಿ ಯಾವುದೇ ಕೆಲಸವಾಗಲಿ, ನೀವು ಶ್ರದ್ಧೆ ಮತ್ತು ನಿಷ್ಠೆಯಿಂದ ಸಿಕ್ಕ ಕೆಲಸದಲ್ಲೀ ನಿಮ್ಮ ಚಾಣಾಕ್ಷತೆ ತೋರಿ ನಡೆದರೆ ಯಾವ ವಿಘ್ನಗಳು ಮುಂದೆ ಬಾರದ ಹಾಗೆ ಗುರುವೇ ರಕ್ಷಿಸುತ್ತಾನೆ. ನಿತ್ಯ ಗಣಪತಿಗೆ 21 ಗರಿಕೆಗಳನ್ನು ಇರಿಸಿ ಪೂಜೆ ಮಾಡಿ. ಇಡಗುಂಜಿ ರಾಜ ಗಣಪತಿಯನ್ನು ದರ್ಶಿಸಿ, ಪ್ರಾರ್ಥಿಸಿಕೊಂಡು ಬನ್ನಿ. ಒಳ್ಳೆಯದಾಗುತ್ತದೆ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್ ವಿಳಾಸ: janasamparka@vistaranews.com
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?