Site icon Vistara News

Astrology Answers : ಮನೆ ಕಟ್ಟುವ ಯೋಗ ಇದೆಯೇ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನಗೆ ಸ್ವಂತ ಮನೆ ಕಟ್ಟಬೇಕೆಂಬ ಕನಸಿದೆ. ಮನೆ ಕಟ್ಟುವ ಯೋಗ ಇದೆಯೇ ಗುರೂಜಿ?
ರಾಶಿ: ಮಿಥುನ ನಕ್ಷತ್ರ: ಮೃಗಶಿರಾ

ಪರಿಹಾರ: ಪುನರ್ವಸು, ಆರಿದ್ರಾ, ಮೃಗಶಿರ ನಕ್ಷತ್ರದವರಿಗೆ ಶನಿಯು ಅಷ್ಟಮದಲ್ಲಿದ್ದು, ಒಂಬತ್ತರ ಗುರುವಿನಿಂದಾಗಿ ನಿಮ್ಮ ಮನೆ ಕಟ್ಟುವ ಆಸೆಯು ಈಗ ಈಡೇರುವ ಸಾಧ್ಯತೆಗಳಿವೆ. ಆದರೆ ಕುಲದೇವರನ್ನು ಅನನ್ಯವಾಗಿ ಪ್ರಾರ್ಥಿಸಬೇಕು. ಸುಬ್ರಹ್ಮಣ್ಯನನ್ನು ಆರಾಧಿಸಿ. ನಿತ್ಯ ಸುಬ್ರಹ್ಮಣ್ಯ ಅಷ್ಟೋತ್ತರ ಪಠಿಸಿ. ನಿಮ್ಮ ಮನೋಭಿಲಾಷೆ ಪೂರ್ಣಗೊಂಡು ನಿಮ್ಮ ಕನಸಿನಂತೆಯೇ ನೀವು ಕಟ್ಟುವ ನೂತನ ಗೃಹದಲ್ಲಿ ಸುಖ-ಸಂತೋಷದಿಂದ ಬಾಳುವಿರಿ. ಒಟ್ಟು 11 ಮಂಗಳವಾರ ಸುಬ್ರಹ್ಮಣ್ಯನಿಗೆ ಕ್ಷೀರಾಭಿಷೇಕವನ್ನು ಮಾಡಿಸಿ. ಒಳ್ಳೆಯದಾಗುತ್ತದೆ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version