Site icon Vistara News

Astrology Answers : ಜೀವನದಲ್ಲಿ ಬರೀ ಕಷ್ಟಗಳನ್ನೇ ಎದುರಿಸುತ್ತಿದ್ದೇನೆ, ಪರಿಹಾರ ತಿಳಿಸಿ ಗುರೂಜಿ

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನ್ನ ಜೀವನದಲ್ಲಿ ಬರೀ ಕಷ್ಟಗಳನ್ನೇ ಎದುರಿಸುತಿದ್ದೇನೆ, ಸರಿಯಾದ ಕೆಲಸವಿಲ್ಲ, ದಯವಿಟ್ಟು ಪರಿಹಾರ ತಿಳಿಸಿ ಗುರೂಜಿ.
ರಾಶಿ: ತುಲಾ ನಕ್ಷತ್ರ: ಸ್ವಾತಿ

ಪರಿಹಾರ: ತುಲಾ ರಾಶಿಯವರಿಗೆ ಸದ್ಯ ಗುರುವು ಷಷ್ಟದಲ್ಲಿ ಇದ್ದು, ಪಂಚಮ ಶನಿಯ ಸಂಚಾರ ಆರಂಭವಾಗಿದೆ. ಏಪ್ರಿಲ್ 21ರ ನಂತರ ಗುರುವು ಸಪ್ತಮಕ್ಕೆ ಬರುವುದರಿಂದ ಕೆಲಸ ಕಾರ್ಯಗಳಲ್ಲಿ ಜಯವನ್ನು ತರುತ್ತಾನೆ. ಇದರಿಂದ ನಿಮ್ಮ ಕಷ್ಟಗಳು ದೂರವಾಗಿ ಜೀವನದಲ್ಲಿ ನೆಮ್ಮದಿ, ಶಾಂತಿಯನ್ನು ಪಡೆಯಬಹುದು. ಪ್ರತಿನಿತ್ಯ ಗಣಪತಿಗೆ 21ಗರಿಕೆಗಳನ್ನ ಇರಿಸಿ ಪೂಜೆ ಮಾಡಿ. ಸಾಧ್ಯವಾದಲ್ಲಿ ಶೃಂಗೇರಿ ಶ್ರೀ ಶಾರದೆಯನ್ನು ದರ್ಶಿಸಿ, ಗುರುದ್ವಯರ ಆಶೀರ್ವಾದ ಪಡೆದು ಬನ್ನಿ. ಶುಭವಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version