Site icon Vistara News

Astrology Answers : ಹೊಸ ಕೆಲಸದ ಹುಡುಕಾಟದಲ್ಲಿದ್ದೇನೆ, ಒಳ್ಳೆಯ ಕೆಲಸ ಸಿಗಬಹುದೇ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ಸದ್ಯ ನಾನು ಮಾಡುತ್ತಿರುವ ಕೆಲಸದಲ್ಲಿ ತೃಪ್ತಿ, ನೆಮ್ಮದಿ ಇಲ್ಲವಾಗಿದೆ. ಹೊಸ ಕೆಲಸದ ಹುಡುಕಾಟದಲ್ಲಿದ್ದೇನೆ. ನನಗೆ ಒಳ್ಳೆಯ ಕೆಲಸ ಸಿಗಬಹುದೇ ಗುರೂಜಿ?
ರಾಶಿ: ವೃಷಭ ನಕ್ಷತ್ರ: ರೋಹಿಣಿ

ಪರಿಹಾರ: ನಿಮ್ಮ ಜಾತಕದ ಪ್ರಕಾರ ಸದ್ಯ ಏಕಾದಶದಲ್ಲಿ ಗುರುವಿದ್ದು, ಗುರುವೇ ದಾರಿ ತೋರಿ ಉದ್ಯೋಗವನ್ನು ಕೊಡುತ್ತಾನೆ. ಕೆಲಸ ಸಿಕ್ಕಿದ್ದಕ್ಕೆ ತೃಪ್ತಿ ಪಡದೆ ಜವಾಬ್ದಾರಿಯಿಂದ ಕಷ್ಟಪಟ್ಟು ಕೆಲಸ ಮಾಡಿ, ಮಾಲೀಕರಿಗೆ ಕೀರ್ತಿ, ಲಾಭವನ್ನು ತಂದುಕೊಡುವುದಲ್ಲದೆ, ನಿಮ್ಮ ಸಹೋದ್ಯೋಗಿಗಳೊಂದಿಗೆ ಸನ್ನಡತೆಯಿಂದ ಇದ್ದು, ಎಲ್ಲರನ್ನೂ ಆಕರ್ಷಿಸಿ. ಯಾವುದೇ ಕೆಲಸ ಕೊಟ್ಟರೂ ತೃಪ್ತಿಯಿಂದ ಮಾಡುತ್ತಾನೆಂಬ ಕೀರ್ತಿಗೆ ಪಾತ್ರರಾಗಿ. ಈ ರೀತಿ ನಡೆದುಕೊಂಡಾಗ ಮಾಡಿದ ಕೆಲಸದಲ್ಲಿ ಸಂತೋಷವಿರುತ್ತದೆ. ಸಿಕ್ಕ ಕೆಲಸವನ್ನು ಬಿಡಬೇಡಿ. ನನಗೆ ಈ ರೀತಿಯ ಕೆಲಸವೇ ಬೇಕೆಂಬ ಹಟವೂ ಬೇಡ. ಶ್ರೀ ಗುರು ದತ್ತಾತ್ರೇಯನನ್ನು ಪ್ರಾರ್ಥಿಸಿ. ಕೆಲಸ ಸಿಕ್ಕ ನಂತರ ಕೈಲಾದ ಸೇವೆ ಮಾಡುವುದಾಗಿ ಪ್ರಾರ್ಥನೆ ಮಾಡಿಕೊಳ್ಳಿ. ಇನ್ನು ಮುಂದಿನ ಜೀವನ ಸುಖಮಯವಾಗಿರುತ್ತದೆ. ಒಳ್ಳೆಯದಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version