Site icon Vistara News

Astrology Answers : ವ್ಯಾಪಾರ, ವ್ಯವಹಾರಗಳಲ್ಲಿ ಬಹಳ ನಷ್ಟ ಅನುಭವಿಸುತ್ತಿದ್ದೇನೆ, ಪರಿಹಾರ ತಿಳಿಸಿ ಗುರೂಜಿ

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ವ್ಯಾಪಾರ, ವ್ಯವಹಾರಗಳಲ್ಲಿ ಬಹಳ ನಷ್ಟ ಅನುಭವಿಸುತ್ತಿದ್ದೇನೆ. ಹೀಗಾಗಿ ಬಹಳ ತೊಂದರೆಯಲ್ಲಿ ಸಿಲುಕಿದ್ದೇನೆ. ದಯವಿಟ್ಟು ಮಾರ್ಗದರ್ಶನ ನೀಡಿ ಗುರೂಜಿ.
ರಾಶಿ: ಕನ್ಯಾ ನಕ್ಷತ್ರ: ಹಸ್ತ

ಪರಿಹಾರ: ನೀವು ನೀಡಿದ ಮಾಹಿತಿಯ ಪ್ರಕಾರ ನಿಮಗೆ ಷಷ್ಠದಲ್ಲಿ ಶನಿಯಿದ್ದಾನೆ. ಹೀಗಿದ್ದರೂ ವ್ಯವಹಾರದಲ್ಲಿ ನಷ್ಟವಾಯಿತೆಂದರೆ ನಿಮ್ಮ ವ್ಯಪಾರದಲ್ಲಿ ನಿಮಗೆ ಚಾಣಾಕ್ಷತೆ ಕಡಿಮೆಯಾಗಿರಬಹುದು ಅಥವಾ ನಿಮಗೆ ಅನುಭವದ ಕೊರತೆ ಇದೆ ಎಂದು ಅರ್ಥೈಸಬಹುದು. ಲಗ್ನಾತ್‌ ಗುರುವು ಮೂರನೇ ಮನೆಯಲ್ಲಿರುವುದರಿಂದ ನಿಮಗೆ ಅದೃಷ್ಟವನ್ನು ಮಾತಾ ಪಿತರ ಮೂಲಕ ತಂದು ಕೊಡುತ್ತಾನೆ. ವ್ಯವಹಾರದಲ್ಲಿ ಸೋಲಾಯಿತೆಂದು ಹೆದರಬೇಡಿ, ಧೈರ್ಯವಾಗಿ ಮುನ್ನೆಡೆಯಿರಿ. ಎಲ್ಲಿ ತಪ್ಪು ಮಾಡಿದ್ದೇನೆ ಎಂದು ನೋಡಿಕೊಂಡು, ಅದನ್ನು ಸರಿಪಡಿಸಿಕೊಳ್ಳಿ. ಜತೆಗೆ ಸೂರ್ಯನಾರಾಯಣನನ್ನು ಪೂಜಿಸಿ, ಪ್ರಾರ್ಥಿಸಿ. ನಿಮಗೆ ಮುಂದೆ ಒಳ್ಳೆಯದಿನಗಳು ಬರಲಿವೆ. ಶುಭವಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

Exit mobile version