horoscope question and answer column by rajaguru Astrology Answers : ಮಗನ ವರ್ತನೆ ಸರಿಯಾಗಿಲ್ಲ, ಏನು ಮಾಡುವುದು ಗುರೂಜಿ? - Vistara News

ಪ್ರಮುಖ ಸುದ್ದಿ

Astrology Answers : ಮಗನ ವರ್ತನೆ ಸರಿಯಾಗಿಲ್ಲ, ಏನು ಮಾಡುವುದು ಗುರೂಜಿ?

ಇದು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್‌. ದ್ವಾರಕನಾಥ್‌ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ನೀವೂ ಪ್ರಶ್ನೆ ಕೇಳಬಹುದು.

VISTARANEWS.COM


on

ಭವಿಷ್ಯ ಪ್ರಶ್ನೋತ್ತರ rajaguru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಶ್ನೆ: ನನ್ನ ಮಗ ನನಗೆ ದೊಡ್ಡ ತಲೆನೋವಾಗಿದ್ದಾನೆ. ಹೇಳಿದ ಮಾತು ಕೇಳುವುದೇ ಇಲ್ಲ. ಯಾವ ಕೆಲಸವನ್ನೂ ಸರಿಯಾಗಿ ಮಾಡುವುದಿಲ್ಲ. ಏನು ಮಾಡುವುದು ಗುರೂಜಿ? ನೀವೇ ದಾರಿ ತೋರಿಸಿ.
ರಾಶಿ: ಸಿಂಹ ನಕ್ಷತ್ರ: ಮಖ

ಪರಿಹಾರ: ನೀವು ನಿಮ್ಮ ಮಗನ ಬಗ್ಗೆ ಹೊಂದಿರುವ ಕಾಳಜಿ ಅರ್ಥವಾಗುತ್ತದೆ. ಆದರೆ ಆತನ ಸಮಯ ಈಗ ಸರಿಯಾಗಿಲ್ಲ. ಸಪ್ತಮ ಶನಿ, ಅಷ್ಟಮ ಗುರು ಕಷ್ಟವನ್ನು, ಅಸ್ಥಿರವಾದ ಬುದ್ಧಿಯನ್ನು, ಚಂಚಲವಾದ ಮನಸ್ಸನ್ನು ಸೂಚಿಸುತ್ತಿದ್ದಾರೆ. ಗುರುವು ಏಪ್ರಿಲ್ 21ರ ನಂತರ ಸಪ್ತಮಕ್ಕೆ ಹೋದಮೇಲೆ ಸಮಯವು ತಕ್ಕ ಮಟ್ಟಿಗೆ ಸರಿ ಹೋಗುತ್ತದೆ. ಮಗನ ವಿಚಾರದಲ್ಲಿ ಜಾಗ್ರತೆಯಿಂದ ಹೆಜ್ಜೆ ಇಟ್ಟು, ಆತನನ್ನು ಪ್ರೀತಿಯಿಂದ ಸೆಳೆದುಕೊಳ್ಳಬೇಕು. ಬೇರೆ ಯಾವುದೇ ರೀತಿಯಲ್ಲೂ ನಿಮಗೆ ಆತನನ್ನು ತಿದ್ದಲು ಸಾಧ್ಯವಾಗದು. ಕುರುವಪುರ ಕ್ಷೇತ್ರದ ಶ್ರೀ ದತ್ತಾತ್ರೇಯನನ್ನು ಸಂದರ್ಶಿಸಿ, ಪ್ರಾರ್ಥನೆ ಮಾಡಿಕೊಂಡು ಬನ್ನಿ. ಸಪ್ತಮ ಶನಿಗೆ ರಾಮಾಯಣದ ಸುಂದರಕಾಂಡ ಪಾರಾಯಣ ಮಾಡಿ. ನಿಮ್ಮ ಕಷ್ಟಗಳು ದೂರವಾಗಿ ದೇವರು ನಿಮ್ಮನ್ನು ರಕ್ಷಿಸುತ್ತಾನೆ. ನಿಮ್ಮ ಮಗನನ್ನು ಸರಿದಾರಿಯಲ್ಲಿ ಮುನ್ನೆಡೆಸುತ್ತಾನೆ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

UPSC Results 2023: ಪಿಯುಸಿಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದ ಬಳ್ಳಾರಿಯ ಶಾಂತಪ್ಪ ಕುರುಬರ್ ಅವರು, ಇದೀಗ ಯುಪಿಎಸ್‌ಸಿ ಫಲಿತಾಂಶದಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ. ಸದ್ಯ ಇವರು ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗಳ ಅಂತಿಮ ಪರೀಕ್ಷೆ 2023ರ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಳ್ಳಾರಿಯ ಶಾಂತಪ್ಪ ಕುರುಬರ್ (ಶಾಂತಪ್ಪ ಜಡೆಮ್ಮನವರ್‌) ಅವರು ನಾಗರಿಕ ಸೇವೆಗೆ (UPSC Results 2023) ಆಯ್ಕೆಯಾಗಿದ್ದು, ಇವರು ಕನ್ನಡದಲ್ಲೇ ಪರೀಕ್ಷೆ ಬರೆದು ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ್ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಪಿಯುಸಿ ಅನುತ್ತೀರ್ಣವಾಗಿದ್ದ ಶಾಂತಪ್ಪ ಕುರುಬರ್

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ಎಂದರೆ ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿದೆ. ಈಗ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ 3 ವಿದ್ಯಾರ್ಥಿಗಳು ಪಾಸ್‌

ಶಾಂತಪ್ಪ ಕುರುಬರ್, ಭರತ್ ಸಿ ಯಾರಮ್ ಹಾಗೂ ಭಾನು ಪ್ರಕಾಶ್

ಯೂಪಿಎಸ್‌ಸಿ ಪರೀಕ್ಷೆಯಲ್ಲಿ ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ ಮೂವರು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಳ್ಳಾರಿಯ ಶಾಂತಪ್ಪ ಕುರುಬರ್ (644 ರ‍್ಯಾಂಕ್‌), ಮೈಸೂರಿನ ಭಾನು ಪ್ರಕಾಶ್ (600 ರ‍್ಯಾಂಕ್‌), ಶಿವಮೊಗ್ಗ ಭರತ್ ಸಿ ಯಾರಮ್ (667 ರ‍್ಯಾಂಕ್‌) ಉತ್ತೀರ್ಣರಾದವರು.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಭಾನು ಪ್ರಕಾಶ್ ಅವರು ಮೂಲತಃ ಮೈಸೂರಿನವರಾಗಿದ್ದು, ಕಳೆದ ಬಾರಿ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು.
ಮತ್ತೆ ಐಎಎಸ್ ಮಾಡುವ ಕನಸಿನೊಂದಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಈ ಬಾರಿ 600ನೇ ರ‍್ಯಾಂಕ್‌ ಪಡೆದಿದ್ದಾರೆ.

ಭರತ್ ಸಿ ಯಾರಮ್ ಅವರು ಶಿವಮೊಗ್ಗ ಮೂಲದವರಾಗಿದ್ದು, ನಾಲ್ಕನೇ ಬಾರಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇವರು 667 ರ‍್ಯಾಂಕ್‌ ಪಡೆದಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

ಇದನ್ನೂ ಓದಿ | UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

Continue Reading

Lok Sabha Election 2024

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

Lok Sabha Election 2024: ಎಚ್.ಡಿ. ದೇವೇಗೌಡರು ನಡೆಸುತ್ತಿದ್ದ ಪ್ರಚಾರ ಸಭೆಗೆ ಏಕಾಏಕಿ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ಕೊಡಿಸಬೇಕು. ಅವರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲು ಮಾಡಬೇಕು, ಕಾರ್ಯಕ್ರಮ ನಡೆಯುವ ಜಾಗದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

VISTARANEWS.COM


on

Lok Sabha Election 2024 HD DeveGowda Congress cries out at HD DeveGowda Complaint to Election Commission
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಕೆಲವು ಪಕ್ಷಗಳ ಕಾರ್ಯಕರ್ತರು ಇನ್ನೊಂದು ಪಕ್ಷದ ಪ್ರಚಾರ ಸಭೆಗಳಿಗೆ ಹೋಗಿ ಗಲಾಟೆ ಮಾಡುತ್ತಿರುವ ಪ್ರಕರಣಗಳೂ ವರದಿಯಾಗುತ್ತಿವೆ. ಈ ನಡುವೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರು ಪ್ರಚಾರ ಮಾಡುವ ವೇಳೆ ಸ್ಥಳಕ್ಕೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ನುಗ್ಗಿ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಈಗ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್‌ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಕೆ.ಎನ್.‌ ರಾಜಣ್ಣ ಅವರು ಕುಮ್ಮಕ್ಕು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂದು ಗಲಾಟೆ ಮಾಡಿದ್ದಾರೆ. ಇದರಿಂದ ಮಾಜಿ ಪ್ರಧಾನಿಗೆ ನೀಡಬೇಕಿದ್ದ ಭದ್ರತೆಯಲ್ಲಿ ಲೋಪವಾಗಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ರಿಟರ್ನಿಂಗ್ ಆಫೀಸರ್​​ಗೆ ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ನೀಡಿದ್ದಾರೆ

ತಕ್ಕ ಶಿಕ್ಷೆಯಾಗಬೇಕು

ಎಚ್.ಡಿ. ದೇವೇಗೌಡರು ನಡೆಸುತ್ತಿದ್ದ ಪ್ರಚಾರ ಸಭೆಗೆ ಏಕಾಏಕಿ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ಕೊಡಿಸಬೇಕು. ಅವರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲು ಮಾಡಬೇಕು, ಕಾರ್ಯಕ್ರಮ ನಡೆಯುವ ಜಾಗದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಏನಿದು ಗಲಾಟೆ?

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಅವರ ಪರವಾಗಿ ತುಮಕೂರಿನ ಕುಂಚಿಟಿಗರ ಭವನದಲ್ಲಿ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಆಗ ಒಂದಿಷ್ಟು ಮಂದಿ ಮಹಿಳೆಯರು ದೇವೇಗೌಡರ ಬಳಿ ಬಂದಿದ್ದು, ತಾವು ಬಿಜೆಪಿ ಕಾರ್ಯಕರ್ತೆಯರಾಗಿದ್ದು ಫೋಟೊಗೆ ಪೋಸ್‌ ಕೊಡಿ ಎಂದು ಮನವಿ ಮಾಡಿದ್ದರು. ಜತೆಗೆ ನಿಂತವರು ಏಕಾಏಕಿಯಾಗಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಸಾಕಷ್ಟು ಗದ್ದಲವಾಗಿದೆ.

ಹೊರಗೆ ಕಳಿಸಿದ ಬಿಜೆಪಿ

ತಕ್ಷಣ ಮಧ್ಯ ಪ್ರವೇಶ ಮಾಡಿದ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತೆಯರನ್ನು ಹೊರಗೆ ಕಳಿಸಲು ಮುಂದಾದರು. ಜತೆಗೆ ಬಿಜೆಪಿ ಕಾರ್ಯಕರ್ತರೂ ಒಟ್ಟಾಗಿದ್ದು, ಎಲ್ಲರೂ ಸೇರಿ ಆ ಇಬ್ಬರು ಮಹಿಳೆಯರನ್ನು ಸಭಾಂಗಣದಿಂದ ಹೊರಗೆ ಕಳುಹಿಸಿದರು.

ಈ ಬಗ್ಗೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಕಾಂಗ್ರೆಸ್‌ನವರು ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ. ಯಾರೋ ಹೆಣ್ಣು ಮಕ್ಕಳನ್ನು ಕಳುಹಿಸಿ ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದ್ದರು.

Continue Reading

ಪ್ರಮುಖ ಸುದ್ದಿ

Viral Video: ಮೆರವಣಿಗೆಯಲ್ಲಿ ಸಾಗಿ 200 ಕೋಟಿ ರೂ. ಜನರ ಮೇಲೆ ಸುರಿದ ಜೈನ ದಂಪತಿ; ವಿಡಿಯೊ ವೈರಲ್​

Viral Videoಉದ್ಯಮಿ ಭವೇಶ್ ಅವರ ಮಕ್ಕಳು 2022ರಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದರು. ಈಗ ತಂದೆ ತಾಯಿ ಕೂಡ ತಮ್ಮ ಮಕ್ಕಳ ಹಾದಿಯನ್ನೇ ಹಿಡಿದಿದ್ದಾರೆ.ಭವ ಬಂಧನವ ತೊರೆದು ಮೋಕ್ಷದ ದಾರಿಯತ್ತ ದಂಪತಿಗಳು ಹೆಜ್ಜೆ ಹಾಕುತ್ತಿದ್ದಾರೆ.

VISTARANEWS.COM


on

jain monk
Koo

ಗುಜರಾತ್: ದುಡ್ಡು ಯಾರಿಗೆ ಬೇಡ ಹೇಳಿ….? ದುಡ್ಡು ಇಲ್ಲದಿದ್ದರೆ ಬದುಕು ಕಷ್ಟ ಎಂಬ ಸ್ಥಿತಿ ಇದೆ. ಹೀಗಾಗಿ ದುಡ್ಡಿಗಾಗಿ ಹಗಲು ರಾತ್ರಿ ನಿದ್ದೆ ಬಿಟ್ಟು ದುಡಿಯುವವರನ್ನು ನಾವು ಕಂಡಿರುತ್ತೇವೆ. ಅಂಥವರ ಸಾಲಿನಲ್ಲಿ ನಾವು ಕೂಡ ಇರುತ್ತೇವೆ. ಇಡೀ ಜಗತ್ತಿನಲ್ಲಿ ದುಡ್ಡೇ ಜೀವನ ಎಂದು ಬದುಕುವ ಜನರೇ ತುಂಬಿದ್ದು, ಆಸ್ತಿಗಾಗಿ ಸಂಬಂಧಗಳನ್ನು ಲೆಕ್ಕಿಸದೇ ಜೀವಗಳನ್ನೇ ತೆಗೆಯುವಂತಹ ಕೀಳುಮಟ್ಟಕ್ಕೆ ಇಳಿದಿರುವಂತಹವರನ್ನು ನೋಡಿರುತ್ತೇವೆ. ಅಂಥದ್ದರಲ್ಲಿ ಕಷ್ಟಪಟ್ಟು ಸಂಪಾದಿಸಿದ ಕೋಟಿ ಕೋಟಿ ರೂಪಾಯಿಗಳನ್ನು ಕಳೆದುಕೊಳ್ಳುವುದಕ್ಕೆ ಯಾರೂ ಇಷ್ಟಪಡುವುದಿಲ್ಲ. ಆದರೆ, ಈ ಮನಸ್ಥಿತಿಗೆ ವ್ಯತಿರಿಕ್ತ ಎಂಬಂತೆ ತಮ್ಮಲ್ಲಿದ್ದ 200 ಕೋಟಿ ರೂಪಾಯಿ ಆಸ್ತಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಈ ಜೈನ ದಂಪತಿ ಸುದ್ದಿಯಾಗಿದ್ದಾರೆ. ಅದರಲ್ಲೂ ಅವರು ಸನ್ಯಾಸ ಸ್ವೀಕರಿಸುವ ಮೊದಲು ಮೆರವಣಿಗೆ ಮಾಡಿ ಇದ್ದ ನಗದನ್ನೆಲ್ಲಾ ಜನರ ಮೇಲೆ ಸುರಿದಿದ್ದಾರೆ. ಆ ವಿಡಿಯೊ ವೈರಲ್ ಆಗಿದೆ.

ತಮ್ಮ 200ಕೋಟಿ ಮೌಲ್ಯದ ಆಸ್ತಿಯನ್ನು ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಶ್ರೀಮಂತ ಜೈನ ದಂಪತಿಗಳನ್ನು ನೋಡಿದರೆ ನಿಜಕ್ಕೂ ಆಚ್ಚರಿಯಾಗುತ್ತದೆ. ಭವೇಶ್ ಭಂಡಾರಿ ಅವರು ಕಟ್ಟಡ ನಿರ್ಮಾಣ ಉದ್ಯಮಿಯಾಗಿದ್ದು, ಇವರು ಸಬರ್ಕಾಂತ ಮತ್ತು ಅಹಮದಾಬಾದ್ ಎರಡರಲ್ಲೂ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು 2022ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದಾರೆ.

ಇದೀಗ ಭಂಡಾರಿ ಮತ್ತು ಅವರ ಪತ್ನಿ ತನ್ನ ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಅದಕ್ಕಾಗಿ ದಂಪತಿ ಗುಜರಾತ್ ನ ಸಬರ್ ಕಾಂತ ಜಿಲ್ಲೆಯಲ್ಲಿ ಟ್ರಕ್ ಅನ್ನು ರಥದಂತೆ ಅಲಂಕರಿಸಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ವಾಹನದ ಮೇಲೆ ನಿಂತು ಮೆರವಣಿಗೆ ನಡೆಸಿದ್ದಾರೆ. ಕಿರಿದಾದ ರಸ್ತೆಯಲ್ಲಿ ಅವರು ಪ್ರಯಾಣಿಸುವಾಗ ಕುಟುಂಬದವರು ಅವರನ್ನು ಸುತ್ತುವರಿದಿದ್ದಾರೆ. ಭಂಡಾರಿ ಮತ್ತು ಆತನ ಪತ್ನಿ  ನೆರೆದಿದ್ದ ಜನರ ಮೇಲೆ ಬಟ್ಟೆಗಳನ್ನು ಹಾಗೂ ಹಣವನ್ನು ಎಸೆದಿದ್ದಾರೆ. ಹಣವನ್ನು ಪಡೆಯಲು ಜನರು ಮುಗಿಬಿದ್ದಿದ್ದಾರೆ. ಈ ವಿಡಿಯೊ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

ಜೈನ ಧರ್ಮದಲ್ಲಿ ಸನ್ಯಾಸಕ್ಕೆ ಮಹತ್ವವಿದೆ

ಜೈನ ಧರ್ಮದಲ್ಲಿ ಅಹಿಂಸೆ ಮತ್ತು ತ್ಯಾಗಕ್ಕೆ ಗರಿಷ್ಠ ಮೌಲ್ಯವಿದೆ. ಸಂಪಾದಿಸಿದ್ದನ್ನು ದಾನ ಮಾಡುವ ಅಥವಾ ಭೌತಿಕ ಲೋಕ ನಶ್ವರ ಎಂಬಂತೆ ಸನ್ಯಾಸ ಸ್ವೀಕರಿಸುವುದು ಜೈನ ಸಮುದಾಯದಲ್ಲಿ ಸಾಧಾರಣವಾಗಿ ಕಂಡು ಬರುವ ಪ್ರಕ್ರಿಯೆ. ಕೋಟ್ಯಂತರ ರೂಪಾಯಿ ಸಂಪತ್ತನ್ನು ತ್ಯಜಿಸಿ ಸನ್ಯಾಸ ಸ್ವೀಕರಿಸಿದ ಹಲವಾರು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದೆ. ಶ್ರೀಮಂತ ಉದ್ಯಮಿಯ ಸುಂದರಿ ಪುತ್ರಿ ಸನ್ಯಾಸದ ಕಡೆ ಒಲವು ತೋರಿದ ಸಂಗತಿಗಳನ್ನೂ ನೋಡಿದ್ದೇವೆ. ಹೀಗಾಗಿ ಜೈನ ಧರ್ಮದಲ್ಲಿ ಇದು ಸರ್ವೇಸಾಮಾನ್ಯ ಎಂದು ಅಂದುಕೊಳ್ಳಬಹುದು. ಆದಾಗ್ಯೂ ಕೋಟಿಗಟ್ಟಲೆ ಸಂಪತ್ತನ್ನು ತ್ಯಜಿಸುವರಿಗೆ ದೊಡ್ಡ ಪ್ರಮಾಣದ ಧಾರ್ಮಿಕ ಶ್ರದ್ಧೆ ಇರಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

Continue Reading

ಕ್ರೀಡೆ

T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

T20 World Cup: ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಆಲ್​ರೌಂಡರ್ ಐಸಿಸಿ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಅವರು ನಿಯಮಿತವಾಗಿ ಬೌಲಿಂಗ್ ಮಾಡಿದರೂ ಪ್ರತಿಫಲ ಸಿಗುತ್ತಿಲ್ಲ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್​ನ ಹೊಸ ನಾಯಕ ಒಂದೆರಡು ಪಂದ್ಯಗಳಿಗೆ ಬೌಲಿಂಗ್ ಮಾಡಲಿಲ್ಲ. ಇದು ಪಂಡಿತರು ಅವರ ಫಿಟ್ನೆಸ್ ಅನ್ನು ಪ್ರಶ್ನಿಸುವಂತೆ ಮಾಡಿತ್ತು

VISTARANEWS.COM


on

t20 World Cup
Koo

ಮುಂಬಯಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (T20 World Cup) ಟೀಂ ಇಂಡಿಯಾ ಭರ್ಜರಿ ತಯಾರಿ ಆರಂಭಿಸಿದೆ. ಇದರ ಪರಿಣಾಮವಾಗಿ ರೋಹಿತ್ ಶರ್ಮಾ ಅವರು ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರನ್ನು ಭೇಟಿಯಾಗಿ ಐಸಿಸಿ ಪಂದ್ಯಾವಳಿಗೆ ತಂಡದ ಆಯ್ಕೆಯ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಪ್ರಮುಖ ಕಾರ್ಯಸೂಚಿಗಳಲ್ಲಿ ಒಂದಾಗಿತ್ತು. ಆದರೆ, ಫಾರ್ಮ್ ಕಳೆದುಕೊಂಡಿರುವ ಹಾಗೂ ಗಾಯದ ಆತಂಕ ಎದುರಿಸುತ್ತಿರುವ ಅವರು ತಂಡದಲ್ಲಿ ಚಾನ್ಸ್ ಪಡೆಯುವುದು ಬಹುತೇಕ ಕಷ್ಟ ಎನ್ನಲಾಗಿದೆ.

ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಆಲ್​ರೌಂಡರ್ ಐಸಿಸಿ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಅವರು ನಿಯಮಿತವಾಗಿ ಬೌಲಿಂಗ್ ಮಾಡಿದರೂ ಪ್ರತಿಫಲ ಸಿಗುತ್ತಿಲ್ಲ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್​ನ ಹೊಸ ನಾಯಕ ಒಂದೆರಡು ಪಂದ್ಯಗಳಿಗೆ ಬೌಲಿಂಗ್ ಮಾಡಲಿಲ್ಲ. ಇದು ಪಂಡಿತರು ಅವರ ಫಿಟ್ನೆಸ್ ಅನ್ನು ಪ್ರಶ್ನಿಸುವಂತೆ ಮಾಡಿತ್ತು. ಕೆಲವು ಕ್ರಿಕೆಟ್​ ಪಂಡಿತರು ಪಾಂಡ್ಯ ಗಾಯಗೊಂಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದರು.

ಐಪಿಎಲ್ 2024 ರಲ್ಲಿ, ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ 6 ಪಂದ್ಯಗಳಲ್ಲಿ 4ರಲ್ಲಿ ಬೌಲಿಂಗ್ ಮಾಡಿದ್ದಾರೆ. ಅವರ ಇತ್ತೀಚಿನ ಬೌಲಿಂಗ್ ಪ್ರದರ್ಶನವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬಂದಿತು. ಅವರು ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ. ಸಿಎಸ್ಕೆ ವಿರುದ್ಧ ಅವರು ಕೇವಲ 3 ಓವರ್​ಗಲನ್ನು ಎಸೆಯುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ 43 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಆದರೆ, 2 ವಿಕೆಟ್​ಗಳನ್ನು ಪಡೆದಿದ್ದರು.

ತಲೆ ನೋವಾಗಿರುವ ಪಾಂಡ್ಯ ಪತನ

ಅವರು ತಮ್ಮ ಮೊದಲ ಓವರ್​ನಲ್ಲಿ 15 ರನ್ ಬಿಟ್ಟುಕೊಟ್ಟಿದ್ದರು. ಆದರೆ ಎಂಎಸ್ ಧೋನಿ ಪಂದ್ಯದ ಕೊನೆಯ ಓವರ್​ನಲ್ಲಿ ಸತತ 3 ಸಿಕ್ಸರ್ಗಳನ್ನು ಬಾರಿಸಿದಾಗ ಅವರ ಬೌಲಿಂಗ್​​ ಚರ್ಚೆಯ ವಿಷಯವಾಯಿತು ಪಾಂಡ್ಯ 12 ಎಕಾನಮಿ ಹೊಂದಿದ್ದು, ಟೂರ್ನಿಯಲ್ಲಿ ಈವರೆಗೆ ಕೇವಲ 3 ವಿಕೆಟ್ ಮಾತ್ರ ಕಬಳಿಸಿದ್ದಾರೆ.

ಇದನ್ನೂ ಓದಿ: IPL 2024 : ನಾವು ಪುಟಿದೆದ್ದು ತಿರುಗೇಟು ನೀಡ್ತೇವೆ; ಆರ್​ಸಿಬಿ ಕೋಚ್​ ಭರವಸೆಯ ನುಡಿ

ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಏಕೈಕ ಹಿರಿಯ ವೇಗಿಯಾಗಿದ್ದಾರೆ. ಮೊಹಮ್ಮದ್ ಸಿರಾಜ್ ಟಿ 20 ಪಂದ್ಯಗಳಲ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ವಿಶ್ವಕಪ್​​ಗಾಗಿ ಟೀ ಮ್ ಇಂಡಿಯಾ ತಂಡದಲ್ಲಿ ಅವಕಾಶ ಪಡೆಯಲು ಹಾರ್ದಿಕ್ ನಿಯಮಿತವಾಗಿ ಬೌಲಿಂಗ್ ಮಾಡಬೇಕು. ನಿಯಮಿತವಾಗಿ ವಿಕೆಟ್​ಗಳನ್ನು ಪಡೆಯಬೇಕು ಎಂಬುದು ಅತ್ಯಂತ ಮಹತ್ವದ್ದಾಗಿದೆ.

Continue Reading
Advertisement
Karnataka weather Forecast
ಮಳೆ6 mins ago

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Oil Pulling
ಆರೋಗ್ಯ8 mins ago

Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

UPSC Results 2023
ಪ್ರಮುಖ ಸುದ್ದಿ12 mins ago

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

Take action to close failed borewell says Vijayanagara DC MS Diwakar
ವಿಜಯನಗರ20 mins ago

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Job Alert
ಉದ್ಯೋಗ21 mins ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Kalaburagi MP Dr. Umesh Jadav spoke in booth level workers meeting Chittapur assembly constituency
ಕಲಬುರಗಿ23 mins ago

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Maddur MLA Uday election campaign in various places of Maddur taluk
ಮಂಡ್ಯ27 mins ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024 HD DeveGowda Congress cries out at HD DeveGowda Complaint to Election Commission
Lok Sabha Election 202431 mins ago

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

jain monk
ಪ್ರಮುಖ ಸುದ್ದಿ38 mins ago

Viral Video: ಮೆರವಣಿಗೆಯಲ್ಲಿ ಸಾಗಿ 200 ಕೋಟಿ ರೂ. ಜನರ ಮೇಲೆ ಸುರಿದ ಜೈನ ದಂಪತಿ; ವಿಡಿಯೊ ವೈರಲ್​

Summer Fashion
ಫ್ಯಾಷನ್38 mins ago

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ14 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌