Site icon Vistara News

Astrology Answers : ಮಗಳಿಗೆ ಸೂಕ್ತ ವರ ಸಿಗುತ್ತಿಲ್ಲ, ಏಕೆ ಹೀಗಾಗುತ್ತಿದೆ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನ್ನ ಮಗಳಿಗೆ ಸೂಕ್ತ ವರನನ್ನು ಹುಡುಕೀ ಹುಡುಕಿ ಸಾಕಾಗಿದೆ. ಎಲ್ಲಿಯೂ ಸಂಬಂಧ ಕೂಡಿ ಬರುತ್ತಿಲ್ಲ. ಏಕೆ ಹೀಗಾಗುತ್ತಿದೆ ಗುರೂಜಿ?
ರಾಶಿ: ವೃಷಭ ನಕ್ಷತ್ರ: ರೋಹಿಣಿ

ಪರಿಹಾರ: ರೋಹಿಣಿ ನಕ್ಷತ್ರ ವೃಷಭ ರಾಶಿಯವರಿಗೆ ಗುರುವು ಏಕಾದಶಕೆ ಬಂದಿದ್ದು, ಲಗ್ನಾತ್ ಗುರುವೂ ಸಪ್ತಮದಲ್ಲಿ ಇದ್ದು, ಈಗ ಮಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನದಿಂದ ಮಗಳಿಗೆ ಉತ್ತಮವಾದ ವರನು ಸಿಕ್ಕಿ ಮದುವೆ ನಿಶ್ಚಯ ಆಗುವುದು. ಚಿಂತೆ ಮಾಡುವ ಅಗತ್ಯವಿಲ್ಲ. ಸಾಧ್ಯವಾದಲ್ಲಿ ಶೃಂಗೇರಿ ಶಾರದೆಯ ದರ್ಶನ ಮಾಡಿ, ಗುರುದ್ವಯರ ಆಶಿರ್ವಾದ ಪಡೆದು ಬನ್ನಿ. ಮದುವೆಯ ನಂತರ ಗಿರಿಜಾ ಕಲ್ಯಾಣ ಮಾಡಿಸುವೇವೆಂಬ ಹರಕೆ ಇರಿಸಿ. ಮಗನಂತಹ ಅಳಿಯನೇ ಬರಲೆಂದು ಹಾರೈಸುವೆ. ಕಲ್ಯಾಣವಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

Exit mobile version