ಪ್ರಶ್ನೆ: ಮದುವೆಗೆ ಹುಡುಗಿಯನ್ನು ಹುಡುಕುತ್ತಿದ್ದೇನೆ. ಎಲ್ಲಿಯೂ ಸಂಬಂಧ ಕೂಡಿ ಬರುತ್ತಿಲ್ಲ. ನನಗೆ ಮದುವೆಯ ಯೋಗ ಇದೆಯೇ ಗುರೂಜಿ?
ರಾಶಿ: ವೃಷಭ ನಕ್ಷತ್ರ: ರೋಹಿಣಿ
ಪರಿಹಾರ: ವೃಷಭ ರಾಶಿಯವರಿಗೆ ಗುರುವು ಏಕಾದಶಕ್ಕೆ ಬಂದಿದ್ದು, ನಿಮಗಿದು ಸುವರ್ಣ ಸಮಯ. ನೀವು ಅಂದುಕೊಂಡ ಕಾರ್ಯಗಳಲ್ಲಿ ಜಯ, ಯಶಸ್ಸು ಪಡೆಯಬಹುದು. ನಿಮಗೆ ಒಳ್ಳೆಯ ವಧು ಸಿಕ್ಕಿ ಮದುವೆಯ ಯೋಗವೂ ಕೂಡಿ ಬರುವುದು. ಶ್ರೀ ಗುರು ದತ್ತಾತ್ರೇಯನ ಪ್ರಾರ್ಥನೆ ಇರಲಿ. ಸಾಧ್ಯವಾದಲ್ಲಿ ಗಾಣಗಾಪುರ ಕ್ಷೇತ್ರಕ್ಕೆ ತೆರಳಿ ಶ್ರೀ ಗುರು ದತ್ತನನ್ನು ದರ್ಶಿಸಿ ಬನ್ನಿ. ಶುಭವಾಗುವುದು.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, ಇ-ಮೇಲ್ ವಿಳಾಸ: janasamparka@abhilashbc
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?