Site icon Vistara News

Astrology Answers : ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದೇನೆ, ಪರಿಹಾರ ತಿಳಿಸಿ

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ತೀವ್ರವಾದ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದೇನೆ. ದಯವಿಟ್ಟು ಪರಿಹಾರ ತಿಳಿಸಿ.
ರಾಶಿ: ಕುಂಭ ನಕ್ಷತ್ರ: ಪೂರ್ವಾಭಾದ್ರ

ಪರಿಹಾರ: ಕುಂಭ ರಾಶಿಯವರು ಏಳೂವರೆ ವರ್ಷದ ಶನಿಯ ಸಂಚಾರದಲ್ಲಿ ಇದ್ದು, ಇದ್ದುದರಲ್ಲಿಯೇ ಈಗ ತೃಪ್ತಿ ಪಡುವ ಸಮಯ. ಗುರುವು ದ್ವಿತೀಯದಲ್ಲಿದ್ದು, ಹಣಕಾಸಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಸುಧಾರಿಸುತ್ತದೆ. ಕೊಲ್ಹಾಪುರದ ಮಹಾಲಕ್ಷ್ಮೀಯನ್ನು ಪ್ರಾರ್ಥಿಸಿ. ಪ್ರತಿ ಶುಕ್ರವಾರದಂದು ಲಕ್ಷ್ಮೀಯನ್ನು ಅಸ್ಟೋತರದಿಂದ ಪೂಜಿಸಿ. ತಾಳ್ಮೆಯಿಂದ ಒಳ್ಳೆಯ ದಿನಕ್ಕಾಗಿ ಕಾಯಿರಿ. ಶುಭವಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Vastu Tips: ಈ ಅಭ್ಯಾಸಗಳು ದಾರಿದ್ರ್ಯಕ್ಕೆ ದಾರಿ, ಇವುಗಳಿಂದ ದೂರವಿರಿ!

Exit mobile version