Site icon Vistara News

Astrology Answers : ನನಗೆ ಮನೆ ಕಟ್ಟುವ ಯೋಗ ಇದೆಯೇ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ಬಹಳ ವರ್ಷದಿಂದ ಮನೆ ಕಟ್ಟಬೇಕೆಂಬುದು ನನ್ನ ಕನಸಾಗಿದೆ. ನನಗೆ ಮನೆ ಕಟ್ಟುವ ಯೋಗ ಇದೆಯೇ ಗುರೂಜಿ?
ರಾಶಿ: ಕಟಕ ನಕ್ಷತ್ರ: ಪುಷ್ಯ

ಪರಿಹಾರ: ಕಟಕ ರಾಶಿಯವರಿಗೆ ಈಗ ಶನಿಯು ಅಷ್ಟಮದಲ್ಲಿದ್ದಾನೆ. ಒಂಬತ್ತನೇ ಮನೆಯ ಗುರುವಿನಿಂದ ನಿಮ್ಮ ಮನೆ ಕಟ್ಟುವ ಆಸೆಯು ಈಡೇರುವ ಸಾಧ್ಯತೆಗಳಿವೆ. ಆದರೆ ಕುಲದೇವರನ್ನು ಅನನ್ಯವಾಗಿ ಪ್ರಾರ್ಥಿಸಬೇಕು. ಸುಬ್ರಹ್ಮಣ್ಯನನ್ನು ಆರಾಧಿಸಿ. ಸುಬ್ರಹ್ಮಣ್ಯ ಅಷ್ಟೋತ್ತರ ಪಠಿಸಿ. ನಿಮ್ಮ ಮನೋಭಿಲಾಷೆ ಪೂರ್ಣಗೊಂಡು ನೂತನ ಗೃಹದಲ್ಲಿ ಸುಖ-ಸಂತೋಷದಿಂದ ಬಾಳುವಿರಿ. ಹನ್ನೊಂದು ಮಂಗಳವಾರಗಳ ಕಾಲ ಸುಬ್ರಹ್ಮಣ್ಯನಿಗೆ ಕ್ಷೀರಾಭಿಷೇಕವನ್ನು ಮಾಡಿಸಿ. ಒಳ್ಳೆಯದಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Vastu Tips: ಈ ಅಭ್ಯಾಸಗಳು ದಾರಿದ್ರ್ಯಕ್ಕೆ ದಾರಿ, ಇವುಗಳಿಂದ ದೂರವಿರಿ!

Exit mobile version