ಪ್ರಶ್ನೆ: ಮನೆಯವರು ನನಗೆ ಹುಡುಗಿ ಹುಡುಕುತ್ತಿದ್ದಾರೆ. ಎಲ್ಲಿಯೂ ಸಂಬಂಧ ಕೂಡಿ ಬರುತ್ತಿಲ್ಲ. ನನ್ನ ಮದುವೆ ಯಾವಾಗ ಆಗುತ್ತದೆ ಗುರೂಜಿ?
ರಾಶಿ: ಮಕರ ನಕ್ಷತ್ರ: ಉತ್ತರಾಷಾಢ
ಪರಿಹಾರ: ಮಕರ ರಾಶಿಯವರಿಗೆ ಶನಿ ಸಂಚಾರದಲ್ಲಿ ಇದ್ದಾನೆ. ಹೀಗಾಗಿಯೇ ನಿಮಗೆ ಸೂಕ್ತವಾದ ವಧುವು ಸಿಕ್ಕಿಲ್ಲ. ಈ ಸಂದರ್ಭದಲ್ಲಿ ನಿಮ್ಮ ಆಸೆ-ಆಕಾಂಕ್ಷೆ, ನಿರೀಕ್ಷೆಗಳಿಗೆ ತಕ್ಕಳಾದ ಹುಡುಗಿಯು ಸಿಗುವುದು ಕಷ್ಟ. ಎಲ್ಲರಿಗೂ ಎಲ್ಲವೂ ಸಿಗುವುದಿಲ್ಲ. ಮನುಷ್ಯನು ತನ್ನ ಆಸೆಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು. ನಾನು ಮದುವೆಯಾಗುವ ಹುಡುಗಿ ಹೀಗೇ ಇರಬೇಕು ಎನ್ನುವುದು ಸರಿ. ಆದರೆ ವಾಸ್ತವದಲ್ಲಿ ಎಲ್ಲವನ್ನೂ ನೋಡುವುದು ಕಷ್ಟ. ಉತ್ತಮ ಕುಲದವಳಾದ ಸಂಸ್ಕಾರ ಇರುವ ಹೆಣ್ಣು ಹುಡುಕಿ. ಇದಕ್ಕೆ ಹಿರಿಯರ ಮಾರ್ಗದರ್ಶನ ಪಡೆಯಿರಿ. ಖಂಡಿತವಾಗಿಯೂ ನಿಮ್ಮ ಮದುವೆ ನೆರವೇರುತ್ತದೆ. ಶ್ರೀ ನಂಜುಂಡೇಶ್ವರನ ದರ್ಶನ ಪಡೆಯಿರಿ. ಕುಲದೇವರಲ್ಲಿ ಗಿರಿಜಾ ಕಲ್ಯಾಣ ಮಾಡಿಸುತ್ತೇನೆಂದು ಪ್ರಾರ್ಥನೆ ಮಾಡಿಕೊಳ್ಳಿ. ಶುಭವಾಗಲಿ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, janasamparka@vistaranews.com
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?