ಪ್ರಶ್ನೆ: ಮದುವೆಯಾಗಬೇಕೆಂದು ಬಹಳದ ದಿನದಿಂದ ಹುಡುಗಿ ಹುಡುಕುತ್ತಿದ್ದೇನೆ. ಎಲ್ಲಿಯೂ ಸಂಬಂಧ ಕೂಡಿ ಬರುತ್ತಿಲ್ಲ. ಏನು ಮಾಡುವುದು ಗುರೂಜಿ?
ರಾಶಿ: ಮೀನ ನಕ್ಷತ್ರ: ರೇವತಿ
ಪರಿಹಾರ: ಮೀನ ರಾಶಿಗೆ ಗುರುವು ದ್ವಿತೀಯದಲ್ಲಿ ಇರುವುದರಿಂದ ಕುಲಗುರುಗಳ ಅನುಗ್ರಹ ಪಡೆದರೆ ನಿಮ್ಮ ಇಷ್ಟಾರ್ಥಗಳು ನೆರವೇರುತ್ತವೆ. ಶಿರಸಿ ಸಮೀಪದ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಗುರುಗಳನ್ನು ಸಂದರ್ಶಿಸಿ ಅವರು ಮಾಡುವ ಶ್ರೀ ಚಕ್ರ ಅರ್ಚನೆಯ ಪ್ರಸಾದವನ್ನು ಪಡೆದು ಬನ್ನಿ. ಯೋಗ್ಯ ವಧುವಿಗೆ ಹುಡುಕಿ. ವಿದ್ಯಾವಂತೆಯಾದ ವಧುವು ನಿಮಗೆ ಸಿಗುತ್ತಾಳೆ. ಮೇಷ ರಾಶಿಗೆ ಗುರುವೂ ಬಂದಿದ್ದು, ರಾಹು ಸಂಯೋಜನೆ ಅಲ್ಲಿ ಇರುವುದರಿಂದ, ಸ್ವಲ್ಪ ತಡವಾದರೂ ಗುರುವು ನಿಮ್ಮನ್ನು ಅನುಗ್ರಹಿಸುತ್ತಾನೆ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, janasamparka@vistaranews.com
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?