ಪ್ರಮುಖ ಸುದ್ದಿ
Astrology Answers : ವ್ಯಾಪಾರದಲ್ಲಿ ತೊಂದರೆಯಾಗುತ್ತಿದೆ, ಏನು ಮಾಡುವುದು ಗುರೂಜಿ?
ಇದು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್. ದ್ವಾರಕನಾಥ್ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ನೀವೂ ಪ್ರಶ್ನೆ ಕೇಳಬಹುದು.
ಪ್ರಶ್ನೆ: ನಾನು ವ್ಯಾಪಾರ ಮಾಡುತ್ತಿದ್ದೇನೆ. ಇದರಲ್ಲಿ ನನಗೆ ನಿರೀಕ್ಷಿಸಿದಷ್ಟು ಲಾಭ ಬರುತ್ತಿಲ್ಲ. ಕೆಲವೊಮ್ಮೆ ಬಹಳ ತೊಂದರೆಯಾಗುತ್ತಿದೆ. ಏನು ಮಾಡುವುದು ಗುರೂಜಿ?
ರಾಶಿ: ಸಿಂಹ ನಕ್ಷತ್ರ: ಹುಬ್ಬ
ಪರಿಹಾರ: ನಿಮ್ಮ ಜಾತಕದ ಪ್ರಕಾರ ಶನಿ ಸಪ್ತಮದಲ್ಲಿ ಇದ್ದು, ನಿಮ್ಮ ವೃತ್ತಿ ಜೀವನದಲ್ಲಿ ತಾತ್ಕಾಲಿಕವಾಗಿ ತೊಂದರೆಗಳು ಕಂಡು ಬಂದಿವೆ. ಗುರು ನವಮದಲ್ಲಿ ಇದ್ದು ನಿಮಗೆ ಹೆಚ್ಚಿನ ಭಾದೆ ಕೊಡುವುದಿಲ್ಲ. ಸೂರ್ಯನ ಅನುಗ್ರಹ ಪಡೆಯಲು ಸೂರ್ಯ ಅಷ್ಟೋತ್ತರ ಪಠಿಸಿ. ರವೆ ಪಾಯಸವನ್ನು ನೈವೇದ್ಯವಾಗಿ ಅರ್ಪಿಸಿ. ಹೀಗೆ ಮಾಡಿದಲ್ಲಿ ಯಾವ ಕಾರ್ಯಗಳಿಗೂ ವಿಘ್ನಗಳು ಬರುವುದಿಲ್ಲ. ಅಧಿಕ ಲಾಭ ಬರದಿದ್ದರೂ ನಿಮ್ಮ ಹೊಟ್ಟೆ ತುಂಬುವಷ್ಟು ಹಾಗೂ ನೀವು ಸಾಲ ಮಾಡಿಕೊಳ್ಳದೇ ನಿಮ್ಮನ್ನು ನೀವೇ ಕಾಪಾಡಿಕೊಳ್ಳಬಹುದಾದಷ್ಟು ಲಾಭವನ್ನು ಪಡೆಯುತ್ತೀರಿ. ದೇವರೋಬ್ಬನೇ ಏನನ್ನೂ ನಿಮ್ಮಿಂದ ನಿರೀಕ್ಷಿಸದೇ, ನಿಮಗೆ ಬೇಕಾಗಿದ್ದನ್ನು ಕೊಡುವವನು. ಶ್ರೀ ಗುರು ದತ್ತಾತ್ರೇಯನನ್ನು ಭಜಿಸಿ, ಪೂಜಿಸಿ. ಒಳ್ಳೆಯದಾಗುತ್ತದೆ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, [email protected]
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?
ಕ್ರೀಡೆ
Wrestlers Protest: ಜೂನ್ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಶರಣ್ ಸಿಂಗ್ ಬಂಧನಕ್ಕೆ ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ತಾತ್ಕಾಲಿಕವಾಗಿ ಈ ಪ್ರತಿಭಟನೆಯಿಂದ ಹಿಂದೆ ಸರಿದ್ದಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಈ ವಿಚಾರವನ್ನು ಅನುರಾಗ್ ಠಾಕೂರ್ ಪ್ರಕಟಿಸಿದ್ದಾರೆ.
ಬುಧವಾರ ಕೇಂದ್ರ ಸರ್ಕಾರ ಕುಸ್ತಿಪಟುಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿತ್ತು. ಇದಕ್ಕೂ ಮುನ್ನ ಅನುರಾಗ್ ಠಾಕೂರ್ ಅವರು ತಮ್ಮ ನಿವಾಸದಲ್ಲಿ ಕುಸ್ತಿಪಟುಗಳೊಂದಿಗೆ ಮಹತ್ವದ ಸಭೆಯೊಂದನ್ನು ನಡೆಸಿದ್ದರು. ಇದೀಗ ಸಭೆ ಮುಕ್ತಾಯ ಕಂಡಿದ್ದು ಕುಸ್ತಿ ಪಟುಗಳು ಜೂನ್ 15ರ ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಇದರ ಜತೆಗೆ ಕುಸ್ತಿಪಟುಗಳು ಕೆಲ ಮಹತ್ವದ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ.
ಸಭೆಯ ಬಳಿಕ ಮಾತನಾಡಿದ ಅನುರಾಗ್ ಠಾಕೂರ್, ಕುಸ್ತಿಪಟುಗಳ ಎಲ್ಲ ಸಮಸ್ಯೆಯನ್ನು ಆಲಿಸಲಾಗಿದೆ. ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧದ ತನಿಖೆ ಪೂರ್ಣಗೊಳ್ಳಲಿದೆ. ಹೀಗಾಗಿ ಕುಸ್ತಿಪಟುಗಳು ಜೂನ್ 15ರ ವರೆಗೆ ಪ್ರತಿಭಟನೆ ರದ್ದು ಮಾಡಲು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.
ಸಭೆಯಲ್ಲಿ ಕುಸ್ತಿಪಟುಗಳು ತಮ್ಮ ಮೇಲಿನ ಎಫ್‌ಐಆರ್ ವಾಪಸ್ ಪಡೆಯುವಂತೆ ಮತ್ತು ಜೂನ್ 30ರೊಳಗೆ ನಡೆಯುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ 3 ಅವಧಿ ಪೂರೈಸಿರುವ ಬ್ರಿಜ್ ಭೂಷಣ್ ಸಿಂಗ್ ಮತ್ತು ಅವರ ಸಹಚರರನ್ನು ಮರು ಆಯ್ಕೆ ಮಾಡದಂತೆ ಒತ್ತಾಯಿಸಿದ್ದಾರೆ. ಜತೆಗೆ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ಬಜರಂಗ್ ಪೂನಿಯ, ಸಚಿವರ ಭರವಸೆಯ ಮೇರೆಗೆ ನಾವು ನಮ್ಮ ಪ್ರತಿಭಟನೆಯಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದೇವೆ, ಆದರೆ ನಮ್ಮ ಹೋರಾಟದಿಂದ ಅಲ್ಲ ಎಂದು ಹೇಳಿದ್ದಾರೆ. ಸಾಕ್ಷಿ ಮಲಿಕ್ ಮಾತನಾಡಿ ತಮ್ಮ ವಿರುದ್ಧ ದಾಖಲಾದ ಎಲ್ಲ ಎಫ್ಐಆರ್ಗಳು ಹಿಂಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.
ಇದನ್ನೂ ಓದಿ Wrestlers Protest: ಅನುರಾಗ್ ಠಾಕೂರ್ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
#WATCH | Government has assured us that police investigation will be completed before 15th June. We have requested that all FIRs against wrestlers should be taken back and he has agreed to it. If no action is taken by 15th June, we will continue our protest: Wrestler Bajrang… pic.twitter.com/1hi9Qp0RFY
— ANI (@ANI) June 7, 2023
ಇದಕ್ಕೂ ಮೊದಲು ಜನವರಿಯಲ್ಲಿ ಕುಸ್ತಿಪಟುಗಳ ಜತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸಭೆ ನಡೆಸಿದ್ದರು. ಆ ವೇಳೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದ್ದರು. ಇದರಿಂದ ಕುಸ್ತಿಪಟುಗಳು ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಟ್ಟಿದ್ದರು. ಬಳಿಕ ಲೈಂಗಿಕ ದೌರ್ಜನ್ಯ ಆರೋಪಗಳ ತನಿಖೆಗಾಗಿ ಭಾರತ ಒಲಿಂಪಿಕ್ ಸಂಸ್ಥೆಯು ಐಒಎ ಮಹಿಳಾ ಬಾಕ್ಸರ್ ಎಂಸಿ ಮೇರಿಕೋಮ್ ಮತ್ತು ಕುಸ್ತಿಪಟು ಯೋಗೇಶ್ವರ್ ದತ್ ಆರ್ಚರಿ ಸ್ಪರ್ಧಿ ಡೋಲಾ ಬ್ಯಾನರ್ಜಿ ಮತ್ತು ಭಾರತ ವೇಟ್‌ಲಿಫ್ಟಿಂಗ್ ಫೆಡರೇಷನ್ ಅಧ್ಯಕ್ಷ ಸಹದೇವ್ ಯಾದವ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿತ್ತು. ಇದರ ಪರಿಣಾಮ ಕುಸ್ತಿಪಟುಗಳು ಭರವಸೆ ನೀಡಿದಂತೆ ಕೆಲವು ತಿಂಗಳ ಕಾಲ ಕಾದಿದ್ದರು. ಆದರೆ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲ ಕಾರಣ ಮತ್ತೆ ಪ್ರತಿಭಟನೆ ನಡೆಸಿದ್ದರು. ಇದೀಗ ದ್ವಿತೀಯ ಬಾರಿ ಭರವಸೆ ನೀಡಿರುವ ಅನುರಾಗ್ ಠಾಕೂರ್ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.
ಕರ್ನಾಟಕ
ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್ ಐಡಿಯನ್ನು ಆರ್‌ಆರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್ ಗಿಮಿಕ್ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Wrestlers Protest: ಅನುರಾಗ್ ಠಾಕೂರ್ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಸಿಂಗ್ ಶರಣ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ; ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. WTC Final 2023: ಆಡುವ ಬಳಗದಿಂದ ಅಶ್ವಿನ್ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆರ್. ಅಶ್ವಿನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್ ಶರ್ಮ ಅವರು ಅಶ್ವಿನ್ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್ ಜತೆ ಪರಾರಿ!
ಭೋಪಾಲ್‌ನ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್‌ಫ್ರೆಂಡ್‌ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ
ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲ ಪರಾಜಿತ ಅಭ್ಯರ್ಥಿಗಳ ಸಭೆ ಆಯೋಜನೆಯಾಗಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡ ನಂತರದಲ್ಲಿ ಬಹುತೇಕ ಮೌನವಾಗಿರುವ ಬಿಜೆಪಿ ಇದೀಗ ವಿಧಾನಸಭೆ ಚುನಾವಣೆಯ ಅವಲೋಕನಕ್ಕೆ ಮುಂದಾಗಿದೆ. ನೂತನ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಸಭೆಯನ್ನು ಗುರುವಾರ ಬೆಂಗಳೂರಿನಲ್ಲಿ ಆಯೋಜಿಸಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ನೂತನವಾಗಿ ಚುನಾಯಿತರಾದ 66 ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆಯು ಗುರುವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲ ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಎಲ್ಲ ಪರಾಜಿತ ಅಭ್ಯರ್ಥಿಗಳು ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.
ಸಂಜೆ ರಾಜ್ಯ ಕೋರ್ ಕಮಿಟಿ ಸಭೆ
ಬುಧವಾರ ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಗುರುವಾರ ನಡೆಯುವ ಎಲ್ಲ ಸಭೆಗಳಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯದ ಪ್ರಭಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಆರ್. ಅಶೋಕ್ ಅವರು ಭಾಗವಹಿಸಿ ಸಭೆಯಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ.
ಈ ಸಭೆಯಲ್ಲಿ ರಾಜ್ಯದ ಚುನಾವಣೆಯ ಕುರಿತು ಅವಲೋಕನ, ಕೇಂದ್ರ ಸರ್ಕಾರದ 9 ವರ್ಷಗಳ ಯೋಜನೆ, ಜುಲೈ 03 ರಂದು ನಡೆಯಲಿರುವ ಅಧಿವೇಶನ, ತೆರವಾಗಿರುವ 3 ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Text Book: ಹೊಸ ಪಠ್ಯಕ್ರಮ ರಚನೆಗೆ ಸಮಿತಿ; ಬಿಜೆಪಿ ಅವಧಿಯ ಅಧ್ಯಾಯಗಳಿಗೆ ಕೊಕ್?
ದೇಶ
ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ; ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂದುಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಇದೇ ವೇಳೆ ಕಲ್ಲು ತೂರಾಟವೂ ನಡೆದಿದೆ.
ಕೊಲ್ಹಾಪುರ: ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಅವರನ್ನು ವೈಭವೀಕರಿಸಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹಿಂದು ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು. ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸುತ್ತಲೇ ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ಮಾಡಿದರು. ಇದರಿಂದ ಕೆರಳಿದ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಯಿತು. ಲಾಠಿ ಚಾರ್ಜ್ ಹಾಗೂ ಹಿಂದು ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Massive protest by Hindus in Kolhapur, Maharashtra over controversial social media posts glorifying Aurangzeb and Tipu Sultan. pic.twitter.com/1d6XH9iori
— Viक़as (@VlKASPR0NAM0) June 7, 2023
ಏನಿದು ಪ್ರಕರಣ?
ಮೈಸೂರು ಅರಸ ಟಿಪ್ಪು ಸುಲ್ತಾನ್ ಹಾಗೂ ಮೊಘಲ್ ಅರಸ ಔರಂಗಜೇಬ್ ಅವರನ್ನು ವೈಭವೀಕರಿಸಿ ಒಂದಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಹಿಂದು ಸಂಘಟನೆಗಳು ಖಂಡಿಸಿದ್ದು, ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕೊಲ್ಹಾಪುರ ಬಂದ್‌ಗೆ ಕರೆ ನೀಡಿದ್ದರು. ಅದರಂತೆ ಪ್ರತಿಭಟನೆ ನಡೆಸುವಾಗ ಗಲಾಟೆ ನಡೆದಿದೆ.
ಕಾನೂನು ಕೈಗೆತ್ತಿಕೊಳ್ಳದಂತೆ ಸಿಎಂ ಮನವಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದು ಸಂಘಟನೆಗಳಿಗೆ ಬೆಲೆ ಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದಕ್ಕಾಗಿ, ಹಿಂದು ಸಂಘಟನೆಗಳು ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿವೆ. ಅದರಲ್ಲೂ, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದು, ಇದರಿಂದ ಕಾರ್ಯಕರ್ತರ ಕೋಪ ಹೆಚ್ಚಾಗಿದೆ. ಆಗ ಪ್ರತಿಭಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು 21 ಜನರನ್ನು ಬಂಧಿಸಿದ್ದು, ಕೊನೆಗೆ ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ.
#WATCH | It's the government's responsibility to maintain law and order in the state. I also appeal to the public for peace and calm. Police investigation is underway and action will be taken against those found guilty: Maharashtra CM Eknath Shinde on Kolhapur incident pic.twitter.com/bzGBKXjkqT
— ANI (@ANI) June 7, 2023
ಇನ್ನು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ, “ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಬಾರದು” ಎಂದು ಮನವಿ ಮಾಡಿದ್ದಾರೆ. ಸದ್ಯ, ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಪರಿಸ್ಥಿತಿ ತಹಬಂದಿಗೆ ಬಂದಿದೆ. ಆದರೂ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ತಿಳಿದುಬಂದಿದೆ.
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ12 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ14 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಉತ್ತರ ಕನ್ನಡ22 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ17 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ23 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ23 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?
-
ಕರ್ನಾಟಕ8 hours ago
Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!