Site icon Vistara News

ಇಂದು ಉಮಾವತಾರವಾದ ದಿನ, ಯಾವ ರಾಶಿಗೆ ಪಾರ್ವತಿ ಕೃಪೆ ತೋರಿದ್ದಾಳೆ ನೋಡಿ!

ಪಂಚಾಂಗ

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ

ತಿಥಿ:  ಚತುರ್ಥಿ 26:41 ವಾರ:  ಶುಕ್ರವಾರ
ನಕ್ಷತ್ರ: ಪುನರ್ವಸು 19:03 ಯೋಗ: ವೃದ್ಧಿ  27:31
ಕರಣ: ವಣಿಜ 13:30 ದಿನ ವಿಶೇಷ: ಉಮಾವತಾರ ವ್ರತ, ವಿಶ್ವ ಸೈಕಲ್‌ ದಿನ

ಸೂರ್ಯೋದಯ :  05:42               ಸೂರ್ಯಾಸ್ತ  : 07:06

ರಾಹು ಕಾಲ : ಪ್ರಾತಃ ಕಾಲ 10.30 ರಿಂದ 12.00
ಗುಳಿಕಕಾಲ:  ಪ್ರಾತಃ ಕಾಲ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ

ಮೇಷ: ದಿನದ ಮಟ್ಟಿಗೆ ಒತ್ತಡ. ಕುಟುಂಬದ ಹಿರಿಯ ಸದಸ್ಯರ ಆರೋಗ್ಯದ ಕಡೆಗೆ ಗಮನ ಹರಿಸಿ. ಭೂ ಸಂಬಂಧಿ ವ್ಯವಹಾರ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಆಕರ್ಷಕ ವ್ಯಕ್ತಿತ್ವ ಇತತರ ಗಮನ ಸೆಳೆಯುವುದು. ಅಮೂಲ್ಯ ವಸ್ತುಗಳು ಹಾಗೂ ವಾಹನ ಖರೀದಿ ಶುಭ ಯೋಗ. ಹೊಸ ಆಲೋಚನೆಗಳು ಪುಷ್ಟಿ ನೀಡುತ್ತವೆ. ದಿನದ ಮಟ್ಟಿಗೆ ಖರ್ಚು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 1

ಮಿಥುನ: ಕುಟುಂಬದ ಸದಸ್ಯರಿಂದ ಒತ್ತಡ. ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಆಲೋಚಿಸಿ. ಕೋಪದಿಂದ ಯಾವುದನ್ನು ಕಳೆದುಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಜವಾಬ್ದಾರಿ ಕಾರ್ಯಗಳಿಂದ ಹೆಚ್ಚು ಒತ್ತಡ. ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ಶಾಂತಿಯಿಂದ ವರ್ತಿಸಿ. ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ಬಹುಕಾಲದ ಕನಸು ನನಸಾಗುವ ಸಮಯ. ಅನಿವಾರ್ಯ ಪ್ರಸಂಗಗಳ ಕಾರಣ ಮನೆಯವರೊಂದಿಗೆ ವಾದಕ್ಕೆ ಇಳಿಯುವುದು ಬೇಡ, ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ತಾಳ್ಮೆಯಿಂದ ವರ್ತಿಸಿ. ದಿನದ ಮಟ್ಟಿಗೆ ಖರ್ಚು. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು. ಜವಾಬ್ದಾರಿ ಹೆಚ್ಚಲಿದೆ. ವ್ಯಾಪರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಆರ್ಥಿಕ ಸಹಾಯದ ಬೇಡಿಕೆ. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮ. ವ್ಯಾಪರ ವ್ಯವಹಾರ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ. ತಾಳ್ಮೆ ಅವಶ್ಯ. ವ್ಯಾಪರ ವ್ಯವಹಾರದಲ್ಲಿ ಇಮ್ಮಡಿ ಲಾಭ. ಆರ್ಥಿಕವಾಗಿ ಬಲಿಷ್ಠ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಆಪ್ತರೊಂದಿಗೆ ಸಮಯ ಕಳೆಯವಿರಿ. ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಆರ್ಥಿಕ ಪ್ರಗತಿ. ಆರೋಗ್ಯ ಪರಿಪೂರ್ಣ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯ ವಾಗಿ ಇರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version