Dina Bhavishya : ಅತಿ ಉತ್ಸಾಹದಲ್ಲಿ ಈ ರಾಶಿಯವರು ಇದೊಂದು ಕೆಲಸ ಮಾಡ್ಬೇಡಿ! - Vistara News

ಪ್ರಮುಖ ಸುದ್ದಿ

Dina Bhavishya : ಅತಿ ಉತ್ಸಾಹದಲ್ಲಿ ಈ ರಾಶಿಯವರು ಇದೊಂದು ಕೆಲಸ ಮಾಡ್ಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಬುಧವಾರವೂ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಉತ್ಸಾಹದ ಭರದಲ್ಲಿ ಯಾವುದೇ ಆಶ್ವಾಸನೆ ನೀಡಬೇಡಿ, ಇದು ಅಪಾಯ ತರುವ ಸಾಧ್ಯತೆಗಳಿವೆ. ಎಚ್ಚರಿಕೆಯಿಂದ ಇರಿ. ಮಿಥುನ ರಾಶಿಯವರು ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಸಿಂಹ ರಾಶಿಯವರು ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ. ಅಂತವರಿಂದ ಎಚ್ಚರಿಕೆ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ,
ಹೇಮಂತ ಋತು, ಮಾರ್ಗಶೀರ್ಷ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 30:45 ವಾರ: ಬುಧವಾರ
ನಕ್ಷತ್ರ: ಆರಿದ್ರಾ 23:27 ಯೋಗ: ಬ್ರಹ್ಮ 26:39
ಕರಣ: ಬಾಲವ 18:20 ಅಮೃತಕಾಲ: ಮಧ್ಯಾಹ್ನ 01:00 ರಿಂದ 02:41 ರವರೆಗೆ
ದಿನದ ವಿಶೇಷ: ಉಪ್ಪುಂದ ರಥ, ಕಾಕೀಟು ಉತ್ಸವ, ಹಂಪಿ ಫಲಪೂಜೋತ್ಸವ

ಸೂರ್ಯೋದಯ : 06:39  ಸೂರ್ಯಾಸ್ತ : 06:01

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಪ್ರೀತಿಯ ಕನಸು ನನಸಾಗುವ ದಿನ. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉತ್ಸಾಹದ ಭರದಲ್ಲಿ ಯಾವುದೇ ಆಶ್ವಾಸನೆ ನೀಡಬೇಡಿ, ಇದು ಅಪಾಯ ತರುವ ಸಾಧ್ಯತೆಗಳಿವೆ. ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮ ಆಕರ್ಷಣಿಯ ವ್ಯಕ್ತಿತ್ವವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸಿದ ಪ್ರಯಾಣ ಲಾಭ ತಂದುಕೊಡಲಿದೆ. ಉದ್ಯೋಗಿಗಳಿಗೆ ಮೆಚ್ಚುಗೆ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಕ್ಕಿಳಿಯಬಹುದು. ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ. ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನವಿದು. ಭೂಮಿ ಸಂಬಂಧ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಸಿಗಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣವಿದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತತರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣ ಇರಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು,ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ.ಮಾತಿನಲ್ಲಿ ಹಿಡಿತವಿರಲಿ.ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ,ಆಲೋಚಿಸಿ ಹೆಜ್ಜೆ ಇಡಿ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಮಧ್ಯಮ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣ. ಕೆಲಸ ಕಾರ್ಯಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Paris Olympics 2024 : ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ತನ್ನ ಮೊದಲ ಪಂದ್ಯದಲ್ಲಿ ರೋಚಕ ಗೆಲುವಿನೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಫ್ರೆಂಚ್ ರಾಜಧಾನಿಯ ಯೆವೆಸ್-ಡು-ಮನೋಯಿರ್ ಸ್ಟೇಡಿಯಂ 2 ರಲ್ಲಿ ಶನಿವಾರ (ಜುಲೈ 27) ನಡೆದ ಗುಂಪು ‘ಬಿ’ ಆರಂಭಿಕ ಪಂದ್ಯದಲ್ಲಿ ಹರ್ಮನ್​ಪ್ರೀತ್​ ಸಿಂಗ್ ಪಡೆ ಮೊದಲ ಕ್ವಾರ್ಟರ್​ನಲ್ಲಿ 0-1 ಅಂತರದ ಹಿನ್ನಡೆ ಎದುರಿಸಿದರೂ ಅಂತಿಮವಾಗಿ 3-2 ಅಂತರದಿಂದ ಗೆದ್ದುಕೊಂಡಿತು. ಮೊದಲ ಕ್ವಾರ್ಟರ್ನಲ್ಲಿ ಭಾರತ ತಂಡ ಹಿನ್ನಡೆ ಅನುಭವಿಸಿದರೂ, ಎರಡನೇ ಮತ್ತು ಮೂರನೇ ಕ್ವಾರ್ಟರ್​ನಲ್ಲಿ ಮನ್ದೀಪ್ ಸಿಂಗ್ ಮತ್ತು ವಿವೇಕ್ ಸಾಗರ್ ಪ್ರಸಾದ್ ಗಳಿಸಿದ ಗೋಲುಗಳ ನೆರವಿನಿಂದ ಭಾರತ ಮೇಲುಗೈ ಸಾಧಿಸಿತು.

ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

ಮುಂದಿನ ಪಂದ್ಯಗಳಲ್ಲಿ ಕಠಿಣ ಪರೀಕ್ಷೆಗಳನ್ನು ಎದುರಿಸಬೇಕಾಗಿರುವುದರಿಂದ ಪೂಲ್ ಬಿ ಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ನಿರ್ಣಾಯಕ ಗೆಲುವಾಗಿದೆ. ಆಸ್ಟ್ರೇಲಿಯಾ, ಬೆಲ್ಜಿಯಂ, ಅರ್ಜೆಂಟೀನಾ ಮತ್ತು ಐರ್ಲೆಂಡ್ ತಂಡಗಳೊಂದಿಗೆ ಭಾರತ ‘ಪೂಲ್’ ನಲ್ಲಿ ಡ್ರಾ ಸಾಧಿಸಿದೆ. ಆರಂಭಿಕ ದಿನದ ಗೆಲುವಿನ ನಂತರ ಭಾರತವು ತಮ್ಮ ಪೂಲ್​ನಲ್ಲಿ ಎರಡನೇ ಸ್ಥಾನಕ್ಕೆ ಏರಿತು.

8ನೇ ನಿಮಿಷಕ್ಕೆ ಹಿನ್ನಡೆ

8ನೇ ನಿಮಿಷದ ಆರಂಭದಲ್ಲೇ ಭಾರತ 0-1ರ ಹಿನ್ನಡೆ ಅನುಭವಿಸಿತ್ತು. ಗ್ರೇಗ್ ಫುಲ್ಟನ್ ಅವರ ನೇತೃತ್ವದ ನ್ಯೂಜಿಲ್ಯಾಂಡ್​ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ಆದರೆ ಅವರು ಗೋಲ್ ಪೋಸ್ಟ್​​ ಮುಂದೆ ಸ್ಥಿರತೆ ತೋರಲಿಲ್ಲ. ಅಭಿಷೇಕ್ ಭಾರತಕ್ಕೆ ಆರಂಭಿಕ ಮುನ್ನಡೆ ತರು ಭರವಸೆ ಕೊಟ್ಟರೂ ನ್ಯೂಜಿಲೆಂಡ್​ ಅನುಭವಿ ಗೋಲ್​ಕೀಪರ್​ ಡೊಮಿನಿಕ್ ಡಿಕ್ಸನ್ ತಡೆದರು. ಮೊದಲ ಕ್ವಾರ್ಟರ್​ನಲ್ಲಿ ಗುರ್ಜಂತ್ ಸಿಂಗ್​​ಗೆ ಗ್ರೀನ್ ಕಾರ್ಡ್ ಸಿಕ್ಕಿತು. ಇದು ಭಾರತದ ಸಮಬಲ ಸಾಧಿಸುವ ಅವಕಾಶಗಳಿಗೆ ಅಡ್ಡಿಯಾಯಿತು.

ಇದನ್ನೂ ಓದಿ: IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

ನಿಕ್ ವುಡ್ಸ್ ಹಳದಿ ಕಾರ್ಡ್ ನೊಂದಿಗೆ ಐದು ನಿಮಿಷಗಳ ಕಾಲ ಅಮಾನತುಗೊಂಡಿದ್ದರಿಂದ ನ್ಯೂಜಿಲೆಂಡ್ ಗೆ ಎರಡನೇ ಕ್ವಾರ್ಟರ್ ದೊಡ್ಡ ಹೊಡೆತವಾಯಿತು.

ಶೈಲಿಯಲ್ಲಿ ಪುಟಿದೇಳುವ ಭಾರತ!
ಹರ್ಮನ್ ಪ್ರೀತ್ ಸಿಂಗ್​ಗೆ ಎದುರಾಳಿ ತಂಡ ಪೆನಾಲ್ಟಿ ಕಾರ್ನರ್ ಅವಕಾಶ ನಿರಾಕರಿಸಿದ ಹೊರತಾಗಿಯೂ ನ್ಯೂಜಿಲೆಂಡ್ ನ ಬಲಿಷ್ಠ ಡಿಫೆನ್ಸ್ ವಿಭಾಗ ಕುಸಿಯಿತು. ಎರಡನೇ ಕ್ವಾರ್ಟರ್​ನಲ್ಲಿ ಭಾರತದ ನಾಯಕನಿಗೆ ಎರಡನೇ ಅವಕಾಶ ಸಿಕ್ಕಿತು. ಈ ವೇಳೆ ಗೋಲ್ ಪೋಸ್ಟ್​​ ಸಮೀಪದಲ್ಲಿದ್ದ ಮನ್ದೀಪ್ ಸಿಂಗ್ ಅವರು ಡಿಕ್ಸನ್ ಅವರನ್ನು ಹಿಂದಿಕ್ಕಿ ಭಾರತಕ್ಕೆ 1-1 ಅಂತರದ ಮುನ್ನಡೆ ತಂದುಕೊಟ್ಟರು. ಭಾರತವು ಮೂರನೇ ಕ್ವಾರ್ಟರ್ ಅನ್ನು ಹೊಸ ಆತ್ಮವಿಶ್ವಾಸದೊಂದಿಗೆ ಪ್ರಾರಂಭಿಸಿತು. ಮನ್ದೀಪ್ ಸಿಂಗ್ ಒಂದು ಗೋಲು ಬಾರಿಸಿದರು. ಆದರೆ, ಸ್ಕಾಟ್ ಬಾಯ್ಡೆ ಅವರ ಪ್ರಯತ್ನದ ಮೂಲಕ ನ್ಯೂಜಿಲೆಂಡ್ ತಿರುಗೇಟು ನೀಡಿತು. ಆದರೆ ಕೊನೆಯಲ್ಲಿ ಪೆನಾಲ್ಟಿ ಸ್ಟ್ರೋಕ್​ ಮೂಲಕ ನಾಯಕ ಹರ್ಮನ್​ ಪ್ರೀತ್ ಸಿಂಗ್ ಗೋಲ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Continue Reading

ದೇಶ

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

Tihar Jail: ಜೈಲಿನಲ್ಲಿ 125 ಕೈದಿಗಳಿಗೆ ಎಚ್‌ಐವಿ ಇದೆ ಎಂಬ ಮಾಹಿತಿ ಲಭ್ಯವಾಗುತ್ತಲೇ ಇತರ ಕೈದಿಗಳಲ್ಲಿ ಆತಂಕ ಮನೆಮಾಡಿದೆ ಎಂದು ತಿಳಿದುಬಂದಿದೆ. ಇನ್ನೂ 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Tihar Jail
Koo

ನವದೆಹಲಿ: ಜೈಲು ಅಂದರೆ, ಅಲ್ಲೆಲ್ಲ ಕನಿಷ್ಠ ಮೂಲ ಸೌಕರ್ಯಗಳಿರುತ್ತವೆ. ಒಂದೇ ಸೆಲ್‌ನಲ್ಲಿ ನಾಲ್ಕೈದು ಕೈದಿಗಳೊಂದಿಗೆ ಮಲಗಬೇಕು, ಸಾಮೂಹಿಕ ಶೌಚಾಲಯ, ಸೊಳ್ಳೆಗಳ ಕಾಟ, ಸಹ ಕೈದಿಗಳ ಉಪಟಳ, ತಣ್ಣೀರಿನ ಸ್ನಾನ ಮಾಡಬೇಕು, ಜೈಲಧಿಕಾರಿಗಳು ಹೇಳಿದ ಕೆಲಸ ಮಾಡಬೇಕು. ಆದರೆ, ಭಾರತದ ಜೈಲುಗಳಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದರೂ ಸೌಕರ್ಯ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಇಂತಹ ಆರೋಪಕ್ಕೆ ನಿದರ್ಶನ ಎಂಬಂತೆ, ತಿಹಾರ ಜೈಲಿನಲ್ಲಿರುವ (Tihar Jail) 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌ (HIV Positive) ಬಂದಿದೆ. ಅಷ್ಟೇ ಅಲ್ಲ, 200 ಕೈದಿಗಳು ಸೆಕ್ಸ್‌ ಸಂಬಂಧಿ ಕಾಯಿಲೆಯಿಂದ (Syphilis) ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ತಿಹಾರ ಜೈಲಿನಲ್ಲಿ ಒಟ್ಟು 14 ಸಾವಿರ ಕೈದಿಗಳಿದ್ದಾರೆ. ಇವರಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಿದಾಗ, ಅವರಲ್ಲಿ 125 ಮಂದಿಗೆ ಎಚ್‌ಐವಿ ಪಾಸಿಟಿವ್‌, ಇನ್ನೂ 200 ಮಂದಿ ಸಿಫಿಲ್ಸ್‌ ಎಂಬ ಸೆಕ್ಸ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ತಿಹಾರ ಜೈಲಿನಲ್ಲಿ ನಿಯಮಿತವಾಗಿ ಕೈದಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅವರು ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಾರೆಯೇ? ಅವರ ಆರೋಗ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲು ತಪಾಸಣೆ ಮಾಡಲಾಗುತ್ತದೆ.

ಇತ್ತೀಚೆಗೆ ತಿಹಾರ ಜೈಲಿನ ಡಿಜಿ ಆಗಿ ಸತೀಶ್‌ ಗೋಲ್ಚಾ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರು ಕೈದಿಗಳ ಆರೋಗ್ಯ ತಪಾಸಣೆಗೆ ಸೂಚಿಸಿದ್ದರು. ಅದರಂತೆ, ಕಳೆದ ಮೇ ಹಾಗೂ ಜೂನ್‌ ತಿಂಗಳಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನೂ, 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಸುರಕ್ಷಿತ ಲೈಂಗಿಕ ಸಂಪರ್ಕ ಸೇರಿ ಹಲವು ಕಾರಣಗಳಿಂದಾಗಿ ಎಚ್‌ಐವಿ ತಗುಲುತ್ತದೆ. ಆದರೆ, ಜೈಲಿನಲ್ಲಿರುವ ನೂರಾರು ಕೈದಿಗಳಿಗೆ ಹೇಗೆ ಏಕಾಏಕಿ ಎಚ್‌ಐವಿ ತಗುಲಿತು ಎಂಬ ಪ್ರಶ್ನೆ ಕಾಡುತ್ತಿದೆ. ಇನ್ನು, ಜೈಲಿನಲ್ಲಿ 125 ಕೈದಿಗಳಿಗೆ ಎಚ್‌ಐವಿ ಇದೆ ಎಂಬ ಮಾಹಿತಿ ಲಭ್ಯವಾಗುತ್ತಲೇ ಇತರ ಕೈದಿಗಳಲ್ಲಿ ಆತಂಕ ಮನೆಮಾಡಿದೆ ಎಂದು ತಿಳಿದುಬಂದಿದೆ. ಇವರ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: K Kavitha : ತಿಹಾರ್​ ಜೈಲಿನಿಂದಲೇ ಕವಿತಾ ಅರೆಸ್ಟ್​​; ಇದೀಗ ಸಿಬಿಐ ಸರದಿ

Continue Reading

ಪ್ರಮುಖ ಸುದ್ದಿ

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

IND vs SL: ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

IND vs SL
Koo

ಪಲ್ಲೆಕೆಲೆ: ನಾಯಕ ಸೂರ್ಯಕುಮಾರ್​ (58 ರನ್​) ಅರ್ಧ ಶತಕ ಹಾಗೂ ರಿಷಭ್​ ಪಂತ್​ (49 ರನ್​) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ (IND vs SL) ಮೊದಲ ಪಂದ್ಯದಲ್ಲಿ 43 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಭಾರತ ತಂಡದ ಗೆಲುವಿನಲ್ಲಿ ಕೊನೇ ಹಂತದಲ್ಲಿ ಬೌಲರ್​ಗಳು ಕೂಡ ಪ್ರಮುಖ ಪಾತ್ರ ವಹಿಸಿದರು. ಇದರೊಂದಿಗೆ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಶುಭಾರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್ ಕೂಡ ಹೊಸ ಅಧ್ಯಾಯ ಆರಂಭಿಸಿದರು.

ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್​ (21 ಎಸೆತಕ್ಕೆ 40 ರನ್​), ಶುಭ್​ಮನ್​ ಗಿಲ್​ (16 ಎಸೆತಕ್ಕೆ 34 ರನ್​) ಉತ್ತಮ ಆರಂಭ ತಂದುಕೊಟ್ಟರು. ಈ ಜೋಡಿ ಮೊದಲ ವಿಕೆಟ್​ಗೆ 74 ರನ್ ಬಾರಿಸಿತು. ಬಳಿಕ ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ನಾಯಕ ಸೂರ್ಯಕುಮಾರ್ ಉತ್ತಮವಾಗಿ ಆಡಿದರು. ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಲಂಕಾ ಬೌಲರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು. ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು. ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. 26 ಎಸೆತಕ್ಕೆ ಬೌಂಡರಿ ಹಾಗೂ 2 ಸಿಕ್ಸರ್ ಸಮೇತ ಅವರು 58 ರನ್ ಬಾರಿಸಿತು.

ಇದನ್ನೂ ಓದಿ: Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

ರಿಷಭ್ ಉತ್ತಮ ಆಟ

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು. ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಔಟಾಗುವ ಮೊದಲು ಅವರು 33 ಎಸೆತಕ್ಕೆ 6 ಫೋರ್​, 1 ಸಿಕ್ಸರ್ ಸಮೇತ 49 ರನ್ ಬಾರಿಸಿದರು. ಆದರೆ, ಒಂದು ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಲಂಕಾ ಉತ್ತಮ ಆರಂಭ

ಭಾರತದ ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಲಂಕಾ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 84 ರನ್ ಬಾರಿಸಿತು. ಆರಂಭಿಕ ಬ್ಯಾಟರ್​ ಪಾತುಮ್ ನಿಸ್ಸಾಂಕ 4 ಎಸೆತಕ್ಕೆ 79 ರನ್ ಬಾರಿಸಿದರೆ ಕುಸಾಲ್ ಮೆಂಡಿಸ್​ 27 ಎಸೆತಕ್ಕೆ 45 ರನ್ ಗಳಿಸಿದರು. ಹೀಗಾಗಿ ಲಂಕಾ ಗೆಲುವಿನ ಸನಿಹ ಬರುವ ನಿರೀಕ್ಷೆ ಇತ್ತು. ಆದರೆ, ಕೊನೇ ಹಂತದಲ್ಲಿ ಅಕ್ಷರ್ ಪಟೇಲ್​ (3 ರನ್​ಗಳಿಗೆ 2 ವಿಕೆಟ್​), ಅರ್ಶ್​ದೀಪ್ ಸಿಂಗ್ (24 ಎಸೆತಕ್ಕೆ 2 ವಿಕೆಟ್​), ರಿಯಾನ್ ಪರಾಗ್​ 1.2 ಓವರ್​ಗಳಲ್ಲಿ 5 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹೀಗಾಗಿ ಲಂಕಾ ತಂಡಕ್ಕೆ ಯಾವುದೇ ಹಂತದಲ್ಲಿ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. 149 ರನ್​ಗಳಿಗೆ 3 ವಿಕೆಟ್ ಮಾತ್ರ ಕಳೆದುಕೊಂಡಿದ್ದ ಲಂಕಾ ಮುಂದಿನ 21 ರನ್ ಮಾಡುವಷ್ಟರಲ್ಲಿ ಉಳಿದ ಏಳು ವಿಕೆಟ್ ನಷ್ಟ ಮಾಡಿಕೊಂಡು ಸೋಲೊಪ್ಪಿಕೊಂಡಿತು.

Continue Reading

ಪ್ರಮುಖ ಸುದ್ದಿ

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Rishabh Pant : ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

VISTARANEWS.COM


on

Rishabh Pant
Koo

ಬೆಂಗಳೂರು: ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ (Rishabh Pant) ಬ್ಯಾಟಿಂಗ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯವು ಪಲ್ಲೆಕೆಲೆಯ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ರಿಷಭ್ ಪಂತ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದರು. ಅವರು ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಉತ್ತಮ ಸಾಥ್ ಕೊಟ್ಟರು.

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಆದರೆ ಗಮನ ಸೆಳೆದದ್ದು ಅಸಿತಾ ಫರ್ನಾಂಡೊ ವಿರುದ್ಧ ಆಡಿದ ಹೆಲಿಕಾಪ್ಟರ್ ಶಾಟ್. ಕೀಪರ್-ಬ್ಯಾಟರ್​ ಎಂಎಸ್ ಧೋನಿ ಅವರ ಸಿಗ್ನೇಚರ್ ಶಾಟ್ ಅನ್ನು ಪರಿಪೂರ್ಣವಾಗಿ ಪುನರಾವರ್ತಿಸಿ ಅದ್ಭುತ ಸಿಕ್ಸರ್ ಬಾರಿಸಿದರು.

16ನೇ ಓವರ್​ನ 4ನೇ ಎಸೆತದಲ್ಲಿ ಅಸಿತಾ ಫರ್ನಾಂಡೊ ಯಾರ್ಕರ್ ಎಸೆದರು. ರಿಷಭ್ ಪಂತ್ ತಮ್ಮ ಮಣಿಕಟ್ಟುಗಳನ್ನು ಬಳಸಿ ಆಡಿದರು. ನಂತರ ಹೆಲಿಕಾಪ್ಟರ್ ಶಾಟ್ ಅನ್ನು ಪರಿಪೂರ್ಣವಾಗಿ ಪೂರ್ತಿಗೊಳಿಸಿದರು. ಚೆಂಡು ಮಿಡ್​ ವಿಕೆಟ್​ ಮೂಲಕ ಆಕಾಶಕ್ಕೆ ಹಾರಿ ಬಿತ್ತು.

ಇದನ್ನೂ ಓದಿ: IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

ರಿಷಭ್ ಪಂತ್ ತಮ್ಮ ಇನಿಂಗ್ಸ್​​ನಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತ ಕ್ರಿಕೆಟ್ ತಂಡವು ಮಧ್ಯದಲ್ಲಿ ಕೆಲವು ತ್ವರಿತವಾಗಿ ವಿಕೆಟ್​ಗಲ್ನು ಕಳೆದುಕೊಂಡ ನಂತರ ನಿರ್ಣಾಯಕ ಸಮಯದಲ್ಲಿ ಅವರ ಶತಕ ಬಂತು. ಅವರು ಬಲವಾಗಿ ಬ್ಯಾಟಿಂಗ್ ಮಾಡುವ ಮೂಲಕ ತಮ್ಮ ತಂಡಕ್ಕೆ ಇನ್ನಿಂಗ್ಸ್ ಅನ್ನು ಉನ್ನತ ಮಟ್ಟದಲ್ಲಿ ಮುಗಿಸಲು ಸಹಾಯ ಮಾಡಿದರು.

ರಿಷಭ್ ಪಂತ್ 33 ಎಸೆತಗಳಲ್ಲಿ 49 ರನ್ ಸಿಡಿಸಿ ಔಟಾದರು. ಅವರು ಸುಮಾರು 130 ಸ್ಟ್ರೈಕ್​ರೇಟ್​ನೊಂದಿಗೆ ಆಡಿದರು ಮತ್ತು ಅವರ ಇನ್ನಿಂಗ್ಸ್​ನಲ್ಲಿ 6 ಬೌಂಡರಿಗಳು ಮತ್ತು 1 ಸಿಕ್ಸರ್ ಸೇರಿಕೋಂಡಿತ್ತು. ಅವರ ಅದ್ಭುತ ಪ್ರದರ್ಶನದ ಹಿನ್ನೆಲೆಯಲ್ಲಿ ಭಾರತವು 213 ರನ್​ಗಳನ್ನು ಬಾರಿಸಿತು.

ನಾಯಕನಾಗಿ ಸೂರ್ಯಕುಮಾರ್ ಯಾದವ್ ಭರ್ಜರಿ ಆಟ

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಬಲಗೈ ಬ್ಯಾಟರ್​ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹೋದರು. ಬೌಳರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು.

ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು ಮತ್ತು ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (34) ಮತ್ತು ಯಶಸ್ವಿ ಜೈಸ್ವಾಲ್ (40) ನೀಡಿದ ಆರಂಭವನ್ನು ಬಲಗೈ ಬ್ಯಾಟರ್​ ಸದುಪಯೋಗಪಡಿಸಿಕೊಂಡರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ27 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ37 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ47 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ1 hour ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ2 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ3 hours ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ3 hours ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌