Site icon Vistara News

Dina Bhavishya : ಈ ರಾಶಿಯವರು ಇಂದು ಮೌನಕ್ಕೆ ಶರಣಾಗಿ ಬಿಡಿ!

Dina bhavishya

ಚಂದ್ರನು ಮೀನ ರಾಶಿಯಿಂದ ಶುಕ್ರವಾರ ರಾತ್ರಿ 11:19ಕ್ಕೆ ಮೇಷ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ಮೀನಾ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕುಂಭ ರಾಶಿಯವರು ನಿರಾಶಾದಾಯಕ ನಡವಳಿಕೆಯಿಂದಾಗಿ ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಸಕಾರತ್ಮಕ ಆಲೋಚನೆ ಇರಲಿ. ಮಕರ ರಾಶಿಯವರಿಗೆ ದೈಹಿಕವಾಗಿ ಮಾನಸಿಕವಾಗಿ ಹೇಳಿಕೊಳ್ಳುವ ವಾತಾವರಣ ಇಲ್ಲ, ಇದರಿಂದ ಮನೋಸ್ಥೈರ್ಯ ಕುಗ್ಗಲಿದೆ. ಮಾತಿಗೆ ಮಾತು ಬೆಳೆಸುವ ಪ್ರಯತ್ನ ಮಾಡಬೇಡಿ. ತುಲಾ ರಾಶಿಯ ಉದ್ಯೋಗಿಗಳಿಗೆ ಒತ್ತಡದ ನಡುವೆಯೂ ಕಾರ್ಯ ಸ್ಥಳದಲ್ಲಿ ನಿಮಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-08-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 12:44 ವಾರ: ಶುಕ್ರವಾರ
ನಕ್ಷತ್ರ: ಶತತಾರ 07:06/ ಪೂರ್ವ ಭಾದ್ರಪದ 28:43 ಯೋಗ: ಶೋಭನ 06:11
ಕರಣ: ವಿಷ್ಟಿ (ಭದ್ರ) 12:44 ಅಮೃತ ಕಾಲ: ರಾತ್ರಿ 09:32 ರಿಂದ 10:59ರ ವರೆಗೆ

ಸೂರ್ಯೋದಯ : 05:59 ಸೂರ್ಯಾಸ್ತ : 07:06

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆತ್ಮ ವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ವೃತ್ತಿಪರ ಗುರಿಗಳನ್ನು ಸಾಧಿಸಲು ನಿಮ್ಮ ಚೈತನ್ಯವನ್ನು ಹೊಂದಿಸಲು ಇದು ಸರಿಯಾದ ಸಮಯ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಉತ್ಸಾಹ ತುಂಬಿದ ದಿನ. ಇಂದು ನೀವು ಯಾವುದೇ ಕೆಲಸದಲ್ಲಿ ನಿರತರಾಗಿದ್ದರೆ ಖಂಡಿತಾ ಯಶಸ್ಸು ಸಿದ್ಧಿಸಲಿದೆ. ಆರ್ಥಿಕವಾಗಿ ಸದೃಢ. ದಿನದ ಕೊನೆಯಲ್ಲಿ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮಿಥುನ: ಸ್ನೇಹಿತರಿಂದ ಸಹಾಯದ ಕೋರಿಕೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಂದುಕೊಂಡಂತೆ ಲಾಭವಿಲ್ಲ. ನಿಮ್ಮ ಸಿಟ್ಟನ್ನು ಕುಟುಂಬದ ಮೇಲೆ ಹಾಕಿ ಮನಸ್ಸು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕಟಕ: ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ವಿವಿಧ ಮೂಲಗಳಿಂದ ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಮಾನಸಿಕ ಆರೋಗ್ಯ ಸದೃಢ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ. ಉದ್ಯೋಗಿಗಳಿಗೆ ಸಹಕಾರ. ಆರೋಗ್ಯ ಉತ್ತಮ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:2

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಒತ್ತಡದಿಂದ ಕೂಡಿದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಉದ್ಯೋಗಿಗಳಿಗೆ ಒತ್ತಡದ ನಡುವೆಯೂ ಕಾರ್ಯ ಸ್ಥಳದಲ್ಲಿ ನಿಮಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ. ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮಗೊಳ್ಳಲಿದೆ. ಆಲಸ್ಯದಿಂದ ಕಾಲಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಪ್ರಮುಖ ಕಾರ್ಯಗಳಲ್ಲಿ ಹಿನ್ನೆಡೆ. ಅಗತ್ಯ ವಸ್ತುಗಳ ಖರೀದಿಯಿಂದಾಗಿ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನೀವು ಯಾರೊಂದಿಗೂ ದ್ವೇಷ ಮತ್ಸರ ಪಡುವುದು ಬೇಡ, ಇದರಿಂದ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:5

ಧನಸ್ಸು: ಕಾರ್ಯದಲ್ಲಿ ನಿಧಾನಗತಿ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಒತ್ತಡ ಇರಲಿದೆ. ನಿಮ್ಮ ಸಿಟ್ಟನ್ನು ಇತರರ ಮೇಲೆ ಹಾಕಿ ಮನೆಯ ವಾತಾವರಣ ಕದಡುವುದು ಬೇಡ. ಆರ್ಥಿಕ ಪ್ರಗತಿ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ನೆಮ್ಮದಿ ನೆಲೆಸುವಲ್ಲಿ ನೀರು ಹೇಗೆ ಸಹಕರಿಸುತ್ತದೆ?

ಮಕರ: ದೈಹಿಕವಾಗಿ ಮಾನಸಿಕವಾಗಿ ಹೇಳಿಕೊಳ್ಳುವ ವಾತಾವರಣ ಇಲ್ಲ, ಇದರಿಂದ ಮನೋಸ್ಥೈರ್ಯ ಕುಗ್ಗಲಿದೆ. ಮಾತಿಗೆ ಮಾತು ಬೆಳೆಸುವ ಪ್ರಯತ್ನ ಮಾಡಬೇಡಿ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ನಿಮ್ಮ ನಿರಾಶಾದಾಯಕ ನಡವಳಿಕೆಯಿಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಸಕಾರತ್ಮಕ ಆಲೋಚನೆ ಇರಲಿ. ಮನೆಯ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಿ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆದಷ್ಟು ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

ಮೀನ: ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಯಾವುದೇ ಆತಂಕ ಬೇಡ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಆಶಾದಾಯಕ ಬೆಳವಣಿಗೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version