ಚಂದ್ರನು ಭಾನುವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (3-11-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ಬಿದಿಗೆ 22:04 ವಾರ: ಭಾನುವಾರ
ನಕ್ಷತ್ರ: ಅನುರಾಧ 32:03 ಯೋಗ: ಸೌಭಾಗ್ಯ 11:38
ಕರಣ: ಬಾಲವ 09:15 ಅಮೃತಕಾಲ: ರಾತ್ರಿ 08:45 ರಿಂದ 10:30
ಸೂರ್ಯೋದಯ : 06:12 ಸೂರ್ಯಾಸ್ತ : 05:54
ಮೇಷ: ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2
ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ.ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಉದ್ಯೋಗಿಗಳಿಗೆ ಮಿಶ್ರ ಫಲ.ಆರೋಗ್ಯ ಪರಿಪೂರ್ಣ.ದಿನದ ಮಟ್ಟಿಗೆ ಖರ್ಚು ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1
ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ.ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.ಆರೋಗ್ಯ ಮಧ್ಯಮ.ಹಣಕಾಸು ಪ್ರಗತಿ ಉತ್ತಮ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 8
ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ.ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ.ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3
ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1
ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು.ದಿನದ ಮಟ್ಟಿಗೆ ಖರ್ಚು.ಜವಾಬ್ದಾರಿ ಹೆಚ್ಚಲಿದೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಸುದ್ಧಿ ಸಿಗಲಿದೆ .ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ:ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ.ಆರ್ಥಿಕ ಸಹಾಯದ ಬೇಡಿಕೆ.ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ.ಕುಟುಂಬದವರ ಸಹಕಾರ ಸಿಗಲಿದೆ.ಆರೋಗ್ಯ ಮಧ್ಯಮ.ವ್ಯಾಪರ ವ್ಯವಹಾರ ಉತ್ತಮ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ವೃಶ್ಚಿಕ: ಅನಿರೀಕ್ಷಿತ ಪ್ರಯಾಣ.ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ.ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ.ತಾಳ್ಮೆ ಅವಶ್ಯ.ವ್ಯಾಪರ ವ್ಯವಹಾರದಲ್ಲಿ ಇಮ್ಮಡಿ ಲಾಭ.ಆರ್ಥಿಕವಾಗಿ ಬಲಿಷ್ಠ. ಆದಾಯದ ಮೂಲಗಳು ಹೆಚ್ಚಾಗಲಿದೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4
ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ.ಅನಿವಾರ್ಯ ಕಾರಣಗಳಿಂದ ಖರ್ಚು.ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ.ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಅನಿವಾರ್ಯ ಕಾರಣಗಳಿಂದ ಖರ್ಚು.ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು,ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮ.ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ.ಆರ್ಥಿಕ ಪ್ರಗತಿ.ಆರೋಗ್ಯ ಪರಿಪೂರ್ಣ.ಆಪ್ತರಿಂದ ಉಡುಗೊರೆ ಸಿಗುವುದು.ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯ ವಾಗಿ ಇರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ.ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.ಆಪ್ತರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com