Site icon Vistara News

Dina Bhavishya: ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ

Dina Bhavishya

ಚಂದ್ರನು ಧನಸ್ಸು ರಾಶಿಯಿಂದ ಸೋಮವಾರ ಬೆಳಗಿನ ಜಾವ 12:05ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಧನಸ್ಸು ರಾಶಿಯವರು ಕುಟುಂಬದ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ದೈಹಿಕವಾಗಿ ಬಳಲುವಂತೆ ಮಾಡಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ಮಕರ ರಾಶಿಯವರು ಇಂದಿನ ದಿವಸ ಯಾರೊಂದಿಗೂ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಸದಸ್ಯರ ವರ್ತನೆ ಕೋಪವನ್ನು ತರಿಸುವುದು. ಆಲಸ್ಯದಿಂದ ಉತ್ತಮ ಕೆಲಸವನ್ನು ಮುಂದೂಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-04-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 21:09 ವಾರ: ಸೋಮವಾರ
ನಕ್ಷತ್ರ: ಮೂಲಾ 23:11 ಯೋಗ: ವರಿಯಾನ 20:28
ಕರಣ: ವಿಷ್ಟಿ (ಭದ್ರ) 09:24 ಅಮೃತ ಕಾಲ: ಸಂಜೆ 04:44 ರಿಂದ 06:21ರ ವರೆಗೆ
ದಿನ ವಿಶೇಷ: ಕೊಲ್ಲೂರು ಮೂಕಾಂಬಿಕಾ ಜಾತ್ರೆ, ಮಂಗಳೂರು ಮಂಗಳಾದೇವಿ ರಥ

ಸೂರ್ಯೋದಯ : 06:16   ಸೂರ್ಯಾಸ್ತ : 06:31

ರಾಹುಕಾಲ : ಬೆಳಗ್ಗೆ 07:48 ರಿಂದ 09:20
ಗುಳಿಕಕಾಲ: ಮಧ್ಯಾಹ್ನ 01:55
ರಿಂದ 03:27
ಯಮಗಂಡಕಾಲ: ಬೆಳಗ್ಗೆ 10:51 ರಿಂದ 12:23

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರೋಗ್ಯ ಸಂಬಂಧಿ ಖರ್ಚು ಹೆಚ್ಚಾಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾಲ ಹರಣಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಬುದ್ಧಿವಂತಿಕೆಯಿಂದ ವರ್ತಿಸಿ, ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಸ್ನೇಹಿತರೊಂದಿಗೆ ಮಾತು, ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಗುರು ದತ್ತಾತ್ರೇಯನನ್ನು ಆರಾಧಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತುರದ ಮಾತುಗಳಲ್ಲಿ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಾಗಲಿದೆ.
ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಬಿಡುವಿರದ ಕೆಲಸದಿಂದ ಒತ್ತಡ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸಾಧಾರಣವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಹಣಕಾಸು ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಕುಟುಂಬದ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ದೈಹಿಕವಾಗಿ ಬಳಲುವಂತೆ ಮಾಡಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚುಇರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ಸಂಗಾತಿಯ ಮಧುರ ಮಾತುಗಳು ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿದೆ. ಇಂದಿನ ದಿವಸ ಯಾರೊಂದಿಗೂ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಸದಸ್ಯರ ವರ್ತನೆ ಕೋಪವನ್ನು ತರಿಸುವುದು. ಆಲಸ್ಯದಿಂದ ಉತ್ತಮ ಕೆಲಸವನ್ನು ಮುಂದೂಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಖರ್ಚಿನ ವಿಷಯಗಳಿಗೆ ಕಡಿವಾಣ ಹಾಕಿ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಸಂಗಾತಿಯು ಸೃಷ್ಟಿಸುವ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಸುಮ್ಮನೆ ವಿಚಾರ ಮಾಡಿ ಕಾಲಹರಣ ಮಾಡುವ ಬದಲು ಸೃಜನಾತ್ಮಕ ಕೆಲಸ ಕಾರ್ಯಗಳಲ್ಲಿ ತೊಡಗಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೊಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version