Site icon Vistara News

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Dina Bhavishya

ಚಂದ್ರನು ಬುಧವಾರವೂ ವೃಷಭ ರಾಶಿಯನ್ನು ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣದೊಂದಿಗೆ ಶುಭ ಸುದ್ದಿ ಸಿಗಲಿದೆ. ತುಲಾ ರಾಶಿಯವರ ಆರೋಗ್ಯ ಪರಿಪೂರ್ಣ ವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಬಿದಿಗೆ 17:31 ವಾರ: ಬುಧವಾರ
ನಕ್ಷತ್ರ: ಭರಣಿ 27:04 ಯೋಗ: ವಿಷ್ಕುಂಭ 10:36
ಕರಣ: ಬಾಲವ 06:57 ಅಮೃತ ಕಾಲ: ರಾತ್ರಿ 10:42 ರಿಂದ 12:10
ದಿನದ ವಿಶೇಷ: ಶೃಂಗೇರಿ ನರಸಿಂಹ ಭಾರತೀ ಆರಾಧನೆ, ಚಂದ್ರ ದರ್ಶನ

ಸೂರ್ಯೋದಯ : 06:10   ಸೂರ್ಯಾಸ್ತ : 06:32

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣದೊಂದಿಗೆ ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:6

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:5

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯ ಕಾಳಜಿ ಇರಲಿ ಅವಶ್ಯಕವಿದೆ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು. ಆದ್ದರಿಂದ ಹಾದಿ ಅವಶ್ಯಕ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲುವಾಗಿ ಖರ್ಚು ಇರಲಿದೆ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಇರಲಿದೆ. ವ್ಯಾಪಾರ ವ್ಯವಹಾರ ಸಾಧಾರಣ ಇರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ ಇರಲಿದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಉತ್ಸಾಹಭರಿತ ಜೀವನವಿದು. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಸಿಗಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಇತರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version