ಚಂದ್ರನು ಭಾನುವಾರವೂ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅತಿಯಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಿಥುನ ರಾಶಿಯವರು ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡದೊಂದಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಆದರೆ ನೀವು ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (14-04-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 11:43 12:03 ವಾರ: ಭಾನುವಾರ
ನಕ್ಷತ್ರ: ಆರಿದ್ರಾ 25:33 ಯೋಗ: ಅತಿಗಂಡ 23:31
ಕರಣ: ತೈತುಲ 11:43 ಅಮೃತ ಕಾಲ: ಮಧ್ಯಾಹ್ನ 03:16 ರಿಂದ 04:55 ರವರೆಗೆ
ದಿನದ ವಿಶೇಷ: ಡಾ.ಅಂಬೇಡ್ಕರ್ ಜಯಂತಿ, ಕುರುಬ ಜಯಂತಿ, ಶೃಂಗೇರಿ ಭಾರತೀ ತೀರ್ಥರ ವಾರ್ಧಂತಿ
ಸೂರ್ಯೋದಯ : 06:08 ಸೂರ್ಯಾಸ್ತ : 06:32
ಮೇಷ: ಅತಿಯಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ಇರಲಿದೆ. ಅದೃಷ್ಟ ಸಂಖ್ಯೆ: 7
ವೃಷಭ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡದೊಂದಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಆದರೆ ನೀವು ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಕುಟುಂಬದ ಸದಸ್ಯರು ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕುಂಭ: ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3
ಮೀನ: ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com