Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ - Vistara News

ಭವಿಷ್ಯ

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕಟಕ ರಾಶಿಯಿಂದ ಸೋಮವಾರ ರಾತ್ರಿ 10:24ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗುವುದು. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ವೃಶ್ಚಿಕ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ ಆಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 12:10 ವಾರ: ಸೋಮವಾರ
ನಕ್ಷತ್ರ: ಪುನರ್ವಸು 27:04 ಯೋಗ: ಸುಕರ್ಮ 23:07
ಕರಣ: ವಣಿಜ 12:10 ಅಮೃತಕಾಲ: ಮಧ್ಯರಾತ್ರಿ 12:32 ರಿಂದ 02:14 ರವರೆಗೆ
ದಿನದ ವಿಶೇಷ: ಕಿಕ್ಕೇರಿ ಮಹಾಲಕ್ಷ್ಮೀ ರಥ, ನವಲಿ ಆಂಜನೇಯ ರಥ

ಸೂರ್ಯೋದಯ : 06:07   ಸೂರ್ಯಾಸ್ತ : 06:32

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವುರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗುವುದು. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ ಇದ್ದು, ಇದರಿಂದ ನೀವು ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಪಡೆಯುವಿರಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಹೆಚ್ಚಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ, ಕಿರಿಕಿರಿ ಹೆಚ್ಚಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ ಆಗಲಿದೆ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಹೆಚ್ಚಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗುವುದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ.ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಶುಕ್ರವಾರ ಮಧ್ಯಾಹ್ನ 02:12 ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಸಿಂಹ ರಾಶಿಯವರು ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 24:03 ವಾರ: ಶುಕ್ರವಾರ
ನಕ್ಷತ್ರ: ಉತ್ತರ ಪಾಲ್ಗುಣಿ 32:12 ಯೋಗ: ಸಿದ್ಧಿ 19:05
ಕರಣ: ವಿಷ್ಟಿ (ಭದ್ರ) 10:47 ಅಮೃತ ಕಾಲ: ಮಧ್ಯರಾತ್ರಿ 12:06 ರಿಂದ 01:55 ವರೆಗೆ
ದಿನದ ವಿಶೇಷ: ಕೊಲ್ಲೂರು ಮೂಕಾಂಬಿಕಾ ಜಯಂತಿ, ಶುಕ್ಲಾದೇವಿ ಪೂಜಾ

ಸೂರ್ಯೋದಯ : 05:53   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡದೊಂದಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ:ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿಯು ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ :ಕುಟುಂಬ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Baba Vanga Predictions: ಪ್ರಪಂಚದ ಅಂತ್ಯ ಯಾವಾಗ? ಈ ವರ್ಷ ಏನೇನಾಗಲಿವೆ? ಬಾಬಾ ವಂಗಾ ಭವಿಷ್ಯ ಹೀಗಿದೆ!

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ (Baba Vanga Predictions) ಅವರು ನುಡಿದಿರುವ ಅನೇಕ ಭವಿಷ್ಯವಾಣಿಗಳು ನಿಜವಾಗಿವೆ. ಇದೀಗ ಅವರು ಪ್ರಪಂಚದ ಅಂತ್ಯ ಯಾವಾಗ ಆಗುತ್ತೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ. ಅಲ್ಲದೇ 2024ರ ಅವರ ಅನೇಕ ಭವಿಷ್ಯವಾಣಿಗಳು ನಿಜವಾಗುವ ಹಾಗಿದೆ. ಅವು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Baba Vanga Predictions
Koo

ವಾಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಎಂಬ ಹೆಸರಿನ ಬಲ್ಗೇರಿಯಾದ (Bulgarian) ಅಂಧ ಮಹಿಳೆ ಬಾಬಾ ವಂಗಾ (Baba Vanga) ಅವರ ಭವಿಷ್ಯವಾಣಿಯನ್ನು (Baba Vanga Predictions) ಸಾಕಷ್ಟು ಮಂದಿ ನಂಬುತ್ತಾರೆ. ಇದಕ್ಕೆ ಮುಖ್ಯ ಕಾರಣ ಹಲವು ವರ್ಷಗಳ ಹಿಂದೆ ಅವರು ನುಡಿದಿರುವ ಬಹುತೇಕ ಭವಿಷ್ಯವಾಣಿಗಳು (Predictions) ನಿಜವಾಗಿವೆ. ಎರಡು ದಶಕಗಳ ಹಿಂದೆಯೇ ಅವರು ನಿಧನರಾಗಿದ್ದು, ಅವರ ಭವಿಷ್ಯವಾಣಿಗಳ ಬಗ್ಗೆ ಜನರು ನಿರಂತರ ಚರ್ಚೆ ಮಾಡುತ್ತಿರುತ್ತಾರೆ.

ಬಲ್ಗೇರಿಯನ್ ಕ್ಲೈರ್ವಾಯಂಟ್ ನಲ್ಲಿ 1911ರಲ್ಲಿ ಜನಿಸಿದ ಬಾಬಾ ವಂಗಾ ಬಾಲ್ಯದಿಂದಲೂ ಭವಿಷ್ಯವನ್ನು ಸ್ಪಷ್ಟವಾಗಿ ಕಾಣುತ್ತಿದ್ದರು. ಇವರು 9/11 ದಾಳಿ, ರಾಜಕುಮಾರಿ ಡಯಾನಾ ಅವರ ಸಾವು, ಯುನೈಟೆಡ್ ಸ್ಟೇಟ್ ನ ಮೊದಲ ಕಪ್ಪು ಅಧ್ಯಕ್ಷ ಬರಾಕ್ ಒಬಾಮಾ ಅವರು ಆಗುತ್ತಾರೆ ಮತ್ತು ಕೋವಿಡ್-19 ಸಾಂಕ್ರಾಮಿಕದ ಕುರಿತು ಭವಿಷ್ಯ ನುಡಿದಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಹಲವಾರು ಭವಿಷ್ಯವಾಣಿಗಳನ್ನು ನುಡಿದಿದ್ದು, ಅದರಲ್ಲಿ ಹೆಚ್ಚಿನವು ನಿಜವಾಗಿದೆ. ಬಾಬಾ ವಂಗಾ ಅವರು ಕೆಲವು ಭಯಾನಕ ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಅದು ಹೆಚ್ಚು ಕಳವಳಕಾರಿಯಾಗಿದೆ.

ಮೂರನೇ ಮಹಾಯುದ್ಧ:

ಇದರಲ್ಲಿ 2024ರಲ್ಲಿ ಮೂರನೇ ಮಹಾಯುದ್ಧದ ಭವಿಷ್ಯವನ್ನು ಅವರು ಹೇಳಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಇಸ್ರೇಲ್- ಇರಾನ್ ಮತ್ತು ರಷ್ಯಾ- ಉಕ್ರೇನ್ ನಡುವಿನ ಪ್ರಸ್ತುತ ಉದ್ವಿಗ್ನತೆಯೊಂದಿಗೆ ಇದು ನಿಜವಾಗುತ್ತಿರುವಂತೆ ಕಾಣುತ್ತಿದೆ. ಇದು ಅನೇಕರ ಚಿಂತೆಗೂ ಕಾರಣವಾಗಿದೆ. ಬಾಬಾ ವಂಗಾ ಅವರು 2024ರಲ್ಲಿ ಯುರೋಪ್‌ನಲ್ಲಿ ಭಯೋತ್ಪಾದಕ ದಾಳಿಗಳು ಸೇರಿದಂತೆ ಹಲವು ಕರಾಳ ಘಟನೆಗಳ ಬಗ್ಗೆಯೂ ಮುನ್ಸೂಚನೆ ನೀಡಿದ್ದಾರೆ. ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಅವರು 1996ರಲ್ಲಿ ನಿಧನರಾದ ಅವರು ಪ್ರಪಂಚದ ಅಂತ್ಯದವರೆಗೆ ಮನುಕುಲಕ್ಕೆ ಸಂಭವಿಸಬಹುದಾದ ಅನೇಕ ಘಟನೆಗಳ ಬಗ್ಗೆ ಹೇಳಿದ್ದಾರೆ.

2024ರ ಕುರಿತು ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಹೀಗಿವೆ:

2024ರಲ್ಲಿ ನೈಸರ್ಗಿಕ ವಿಪತ್ತು ಮತ್ತು ತೀವ್ರ ಹವಾಮಾನ ಘಟನೆಗಳು ಸಂಭವಿಸಲಿದೆ. ಈ ದಿನಗಳಲ್ಲಿ ತಾಪಮಾನದ ಏರಿಕೆ ಯನ್ನು ಗಮನಿಸಿದರೆ ಇದು ಸರಿ ಎಂದು ಎನ್ನಬಹುದು. ಸೈಬರ್ ದಾಳಿ ಹೆಚ್ಚಾಗುತ್ತದೆ ಎಂದು ಬಾಬಾ ವಂಗಾ ಅವರ ಮೊದಲೇ ನುಡಿದಿರುವ ಪ್ರಮುಖ ಭವಿಷ್ಯವಾಣಿಗಳಲ್ಲಿ ಒಂದಾಗಿದೆ.

ಬಾಬಾ ವಂಗಾ ಸತ್ತಾಗ ಇಂಟರ್ನೆಟ್ ಪ್ರಾರಂಭವಾಗಿದ್ದು ಮಾತ್ರ. ಆದರೆ ಆಗಲೇ ಅವರು ಹ್ಯಾಕರ್‌ಗಳು ತಮ್ಮ ದಾಳಿಯನ್ನು ಹೆಚ್ಚಿಸುತ್ತಾರೆ, ವಿಶೇಷವಾಗಿ ಪ್ರಮುಖ ಮೂಲಸೌಕರ್ಯಗಳ ಮೇಲೆ ವಿಶ್ವದಾದ್ಯಂತ ಭದ್ರತಾ ಸಮಸ್ಯೆಗಳನ್ನು ಉಂಟುಮಾಡುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

ಆರ್ಥಿಕ ಶಕ್ತಿಯಲ್ಲಿ ಜಾಗತಿಕ ಬದಲಾವಣೆಗಳು, ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಸಾಲದ ಮಟ್ಟಗಳಿಂದಾಗಿ 2024ರಲ್ಲಿ ಆರ್ಥಿಕ ಬಿಕ್ಕಟ್ಟುಗಳ ಕುರಿತು ಬಾಬಾ ವಂಗಾ ಮೊದಲೇ ಹೇಳಿದ್ದಾರೆ.

ಇದನ್ನೂ ಓದಿ: Baba Vanga: 2024 ವರ್ಷವಿಡೀ ಭಯಾನಕ! ಬಾಬಾ ವಂಗಾ ಭವಿಷ್ಯ

ಯುರೋಪ್‌ನಲ್ಲಿ ಹೆಚ್ಚಿನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಮೊದಲೇ ಎಚ್ಚರಿಸಿರುವ ಬಾಬಾ ವಂಗಾ, ದೊಡ್ಡ ರಾಷ್ಟ್ರವೊಂದು ಜೈವಿಕ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಬಹುದು ಅಥವಾ ಬಳಸಬಹುದು ಎಂದು ಹೇಳಿದ್ದರು.

2024ರಲ್ಲಿ ಆಲ್ಝೈಮರ್ ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಕೆಲವು ವೈದ್ಯಕೀಯ ಪ್ರಗತಿಯ ಬಗ್ಗೆ ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಆಶ್ಚರ್ಯ ಎನ್ನುವಂತೆ ರಷ್ಯಾದಲ್ಲಿ ಕ್ಯಾನ್ಸರ್ ಲಸಿಕೆ ಅಭಿವೃದ್ಧಿಯಲ್ಲಿದೆ ಎಂದು ವರದಿಯಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನ ನಡೆಯುತ್ತದೆ ಎಂಬ ಭವಿಷ್ಯವಾಣಿಯನ್ನೂ ಬಾಬಾ ವಂಗಾ ನುಡಿದಿದ್ದಾರೆ. ಇಷ್ಟು ಮಾತ್ರವಲ್ಲ 5079ರಲ್ಲಿ ಜಗತ್ತು ಸಂಪೂರ್ಣ ವಿನಾಶವಾಗುತ್ತದೆ ಎಂಬುದು ಅವರ ಭವಿಷ್ಯವಾಣಿಯಲ್ಲಿದೆ.

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಸಿಂಹ ರಾಶಿಯಿಂದ ಬುಧವಾರ 01:38ಕ್ಕೆ ಕನ್ಯಾರಾಶಿಗೆ ಪ್ರವೇಶಿಸಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರಿಗೆ ಹಣಕಾಸು, ವ್ಯಾಪಾರ- ವ್ಯವಹಾರಗಳಲ್ಲಿ ಲಾಭ. ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ. ಮೀನ ರಾಶಿಯವರು ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 21:32 ವಾರ: ಗುರುವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 29:07 ಯೋಗ: ವಜ್ರ 18:03
ಕರಣ: ಗರಜ 08:21 ಅಮೃತ ಕಾಲ: ರಾತ್ರಿ 9:57 ರಿಂದ 11:45 ವರೆಗೆ
ದಿನದ ವಿಶೇಷ: ಬೆಂಗಳೂರು ಕೋಟೆ ರಥ

ಸೂರ್ಯೋದಯ : 05:42   ಸೂರ್ಯಾಸ್ತ : 07:07

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಿಸಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ, ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ. ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗಲು ಅವಕಾಶಗಳು ಬರಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯಕ್ಕೆ ಬಹಳಷ್ಟು ಮೆಚ್ಚುಗೆ ಸಿಗುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣ, ಹಣಕಾಸು ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಧ್ಯಮ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ, ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾನೆ, ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಅವರ ಕೋಪಕ್ಕೆ ಕೋಪಗೊಳ್ಳುವುದಕ್ಕಿಂತ ಅವರ ಮಾತುಗಳನ್ನು ನೀವು ಅರ್ಥಮಾಡಿಕೊಳ್ಳುವುದು ಉತ್ತಮ. ಹಳೆ ಸ್ನೇಹಿತರೊಂದಿಗೆ ಭೇಟಿ, ಮಾತನಾಡಲು ಯೋಜಿಸಬಹುದು. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ, ಕೌಟುಂಬಿಕ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ನಿಮ್ಮ ಆಕರ್ಷಿತ ವ್ಯಕ್ತಿತ್ವವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ವಾಹನ ಚಾಲನೆ ಮಾಡುವಾಗ ಜಾಗೃತೆ ಅವಶ್ಯವಾಗಿ ವಹಿಸಿ, ಅಪಘಾತ ಸಂಭವ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ.ಮನದ ಬಯಕೆ ಇಡೆರುವ ಆಶಾಭಾವನೆ ಮೂಡಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಭೂಮಿ ಸಂಬಂಧಿ ವ್ಯವಹಾರ ನಡೆಯುವ ಸಾಧ್ಯತೆ ಇದ್ದು, ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿ ಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಉದ್ಯೋಗಿಗಳಿಗೆ ನಿಧಾನಗತಿಯಿಂದಾಗಿ ಸ್ವಲ್ಪ ಒತ್ತಡ ತರುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೇನಿಸುವುದು. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸು, ವ್ಯಾಪಾರ- ವ್ಯವಹಾರಗಳಲ್ಲಿ ಲಾಭ. ಅನಿವಾರ್ಯ ಕಾರಣ ನೀವು ಖರ್ಚು ಮಾಡುವ ಸಾಧ್ಯತೆಯಿಂದಾಗಿ ಮನಸ್ಸಿಗೆ ಕೊಂಚ ಬೇಸರ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಇಂದು ನಿಮ್ಮ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡವುದು ಬೇಡ. ಆರೋಗ್ಯ ಪರಿಪೂರ್ಣ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಸಾಧ್ಯತೆ. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡುವಂತೆ ಮಾಡಬಹುದು, ಅದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣ, ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು, ಆರ್ಥಿಕ ಸ್ಥಿತಿ ಉತ್ತಮ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ನಿಮ್ಮ ಆಕರ್ಷಿತ ವ್ಯಕ್ತಿತ್ವ ಇತರರನ್ನು ಸೆಳೆಯಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದ್ದು, ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದುದ್ದನ್ನೆಲ್ಲ ಮಾಡುತ್ತಾರೆ. ಇಂದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಹಣಕಾಸು ಹೂಡಿಕೆ ಬಗೆಗೆ ಆಲೋಚನೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಅದರಿಂದ ದೂರ ಇರಿ. ನಿಮ್ಮ ಆಪ್ತರೊಂದಿಗೆ ವಿಷಯ ಹಂಚಿಕೊಳ್ಳುವ ಸಾಧ್ಯತೆ. ಆದರೆ ಗೌಪ್ಯ ವಿಷಯಗಳು ಗೌಪ್ಯವಾಗಿದ್ದರೆ ಚೆನ್ನ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು. ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ನಿಮ್ಮ ಅಪಾರ ವಿಶ್ವಾಸ ನಿಮಗೆ ಯಶಸ್ಸು ತಂದುಕೊಡಲಿದೆ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟು ಆಗುವ ಸಾಧ್ಯತೆ. ನೀವು ಅತೀ ಉದಾರಿಯಾಗಿದ್ದಲ್ಲಿ – ನಿಮ್ಮ ನಿಕಟ ಜನರು ನಿಮ್ಮ ಅನುಚಿತ ಲಾಭ ತೆಗೆದುಕೊಳ್ಳಬಹುದು. ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವೃಥಾ ಗಾಳಿಯಲ್ಲಿ ಗೋಪುರ ಕಟ್ಟಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಬದಲಿಗೆ ಏನಾದರೂ ಅರ್ಥಪೂರ್ಣವಾದುದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ. ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಿಂದ ಬುಧವಾರ 01:38ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕಟಕ ರಾಶಿಯವರು ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 19:16 ವಾರ: ಬುಧವಾರ
ನಕ್ಷತ್ರ: ಮಘಾ 26:10 ಯೋಗ: ಹರ್ಷಣ 17:13
ಕರಣ: ಕೌಲವ 06:17 ಅಮೃತ ಕಾಲ: ರಾತ್ರಿ 11:33ರಿಂದ 01:19ವರೆಗೆ
ದಿನದ ವಿಶೇಷ: ಶಿರಸಿಂಗಿ ಕಾಶಿ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:46

ರಾಹುಕಾಲ ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ:ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೇರುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ:ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕಾಳಜಿ ವಹಿಸಿ. ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ, ಅದರಿಂದ ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ :ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನ ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಜೀವನದಲ್ಲಿ ಭರವಸೆ ಸಿಗಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Pawan Kalyan
Latest6 mins ago

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Ram Mandir
ದೇಶ6 mins ago

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Celebrity Ethnic Fashion
ಫ್ಯಾಷನ್6 mins ago

Celebrity Ethnic Fashion: ನಟ ಧನುಷ್‌ ಗೌಡರ ಗ್ರ್ಯಾಂಡ್‌ ಎಥ್ನಿಕ್‌ ಜಾಕೆಟ್‌ ವಿಶೇಷತೆ ಏನು?

Actor Darshan
ಕರ್ನಾಟಕ17 mins ago

Actor Darshan: ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

Actor Darshan
ಬೆಂಗಳೂರು18 mins ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

Samarjit Lankesh Dhool Yebsava Video Song Out
ಸ್ಯಾಂಡಲ್ ವುಡ್28 mins ago

Samarjit Lankesh: ʻಗೌರಿʼ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ’ ಸಾಂಗ್ ರಿಲೀಸ್!

Viral Video
ಕ್ರಿಕೆಟ್29 mins ago

Viral Video: ‘ಹಿಟ್​ ದಿ ಟಾರ್ಗೆಟ್’​ ಎಂದು ಬೌಲಿಂಗ್​ ಅಭ್ಯಾಸ ಆರಂಭಿಸಿದ ಮೊಹಮ್ಮದ್ ಶಮಿ

BS Yediyurappa
ಪ್ರಮುಖ ಸುದ್ದಿ32 mins ago

BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

World Blood Donor Day Awareness Jatha in Bengaluru
ಕರ್ನಾಟಕ39 mins ago

World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

World Blood Donor Day
ಆರೋಗ್ಯ52 mins ago

World Blood Donor Day: ರಕ್ತದಾನ ಯಾರು ಮಾಡಬಹುದು? ಯಾರು ಮಾಡಬಾರದು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು18 mins ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 week ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

ಟ್ರೆಂಡಿಂಗ್‌