Site icon Vistara News

Dina Bhavishya : ಈ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ!

daily horoscope predictions for April 18 2024

ಚಂದ್ರನು ಗುರುವಾರ ಬೆಳಗ್ಗೆ 10:10ಕ್ಕೆ ಕನ್ಯಾರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಆಗಲಿದೆ. ಆರೋಗ್ಯದಲ್ಲಿ ಉತ್ತಮ ಸ್ಥಿತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಸಿಂಹ ರಾಶಿಯವರಿಗೆ ಆಪ್ತರು ನಿಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಲಿದ್ದಾರೆ. ಆದರೆ, ಯಾವುದೇ ವಿಷಯ ಇದ್ದರೂ ನಿಮ್ಮ ನಿಲುವನ್ನು ದೃಢವಾಗಿಟ್ಟುಕೊಂಡಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಉಂಟಾಗಲಿದೆ. ಉದ್ಯೋಗ, ಆರೋಗ್ಯದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ ವಾರ: ಗುರುವಾರ
ನಕ್ಷತ್ರ: ಆಶ್ಲೇಷಾ 07:55 ಯೋಗ: ಗಂಡ 24:41
ಕರಣ: ಗರಜ 17:31 ಅಮೃತಕಾಲ: ಬೆಳಗ್ಗೆ 6:10ರಿಂದ 07:57

ಸೂರ್ಯೋದಯ : 06:05   ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಆಗಲಿದೆ. ಆರೋಗ್ಯದಲ್ಲಿ ಉತ್ತಮ ಸ್ಥಿತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಶಾಂತ ಮನಃಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಮಿಥುನ: ಜೀವನದಲ್ಲಿ ಅಭದ್ರತೆಯು ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 9

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಉಂಟಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನ ನಿಮ್ಮದಾಗಲಿದೆ. ಬಹುದಿನಗಳ ಕನಸು ನನಸಾಗುವ ಸಮಯ ಬಂದಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಆಪ್ತರು ನಿಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಲಿದ್ದಾರೆ. ಆದರೆ, ಯಾವುದೇ ವಿಷಯ ಇದ್ದರೂ ನಿಮ್ಮ ನಿಲುವನ್ನು ದೃಢವಾಗಿಟ್ಟುಕೊಂಡಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಉಂಟಾಗಲಿದೆ. ಉದ್ಯೋಗ, ಆರೋಗ್ಯದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ ಇದೆ. ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಮೀನ: ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಲಿದ್ದು, ಮಾನಸಿಕ ಅಸಮತೋಲನಕ್ಕೆ ಕಾರಣವಾಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version