Site icon Vistara News

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಭಾರಿ ಒತ್ತಡ!

dina bhavishya august 10 2023

ಚಂದ್ರನು ಬುಧವಾರ ಬೆಳಗ್ಗೆಯೇ 09:05ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಶುಕ್ರವಾರ ಸಂಜೆ 6.52ಕ್ಕೆ ಚಂದ್ರನು ಕರ್ಕರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಕನ್ಯಾ ರಾಶಿಯವರಿಗೆ ಇಂದು ಶುಭ ಕಾರ್ಯಗಳಿಗಾಗಿ ಖರ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಉಂಟಾಗಲಿದೆ. ಅಲ್ಲದೆ, ಜವಾಬ್ದಾರಿಗಳು ಹೆಚ್ಚಾಗಲಿದೆ. ತುಲಾ ರಾಶಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-08-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 29:05 ವಾರ: ಗುರುವಾರ
ನಕ್ಷತ್ರ: ರೋಹಿಣಿ 27:59 ಯೋಗ: ಧ್ರುವ 15:08
ಕರಣ: ವಣಿಜ 16:34 ಅಮೃತ ಕಾಲ: ರಾತ್ರಿ 12:37 ರಿಂದ 02:19ರವರೆಗೆ
ದಿನದ ವಿಶೇಷ : ಕುಮಾರಶೈಲ ಕೃತ್ತಿಕೋತ್ಸವ

ಸೂರ್ಯೋದಯ : 06:07 ಸೂರ್ಯಾಸ್ತ : 06:43

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢರಾಗಲಿದ್ದಾರೆ. ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲವಿದ್ದರೆ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಲಾಭವಾಗಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲವಿದ್ದರೆ, ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಸಿಗಲಿದ್ದು, ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿದೆ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆ ಇದ್ದು, ಎಚ್ಚರದಿಂದಿರಿ. ಆರ್ಥಿಕವಾಗಿ ಕೊಂಚ ಲಾಭ ಆಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಉಂಟಾಗಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಬರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಕಾಣಲಿದೆ. ಆರ್ಥಿಕವಾಗಿ ಲಾಭವಾಗಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲುವಾಗಿ ಖರ್ಚಾಗಲಿದೆ. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಉಂಟಾಗಬಹುದು. ವ್ಯಾಪಾರ ವ್ಯವಹಾರ ಸಾಧಾರಣ ಇರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರಿಂದ ಹಣ ಸಹಾಯದ ಕೋರಿಕೆ ಬರಲಿದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲವಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮನೆಯಲ್ಲಿ ಜಗಳ, ಮನಸ್ತಾಪ ಹೆಚ್ಚಾಗುತ್ತಿದೆಯೇ? ಇಲ್ಲಿದೆ ಪರಿಹಾರ

ಮಕರ: ಉತ್ಸಾಹಭರಿತ ಜೀವನ ನಿಮ್ಮದಾಗಲಿದೆ. ಆರ್ಥಿಕವಾಗಿ ಲಾಭವಿದ್ದು, ಹೂಡಿಕೆ ವ್ಯವಹಾರಗಳಲ್ಲಿ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಬರಬಹುದು. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಾಗಲಿದೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಮಾಡುವಿರಿ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಡೀರ್ ಧನಲಾಭ ಆಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version