Dina Bhavishya : ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣ ಬಲ - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣ ಬಲ

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Dina Bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಂದ್ರನು ಶುಕ್ರವಾರ ಕಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ಹಾಗೂ ಕಟಕ ರಾಶಿಯವರ ಅತಿರೇಕದ ಮಾತುಗಳು ಜಗಳ ಉಂಟು ಮಾಡಬಹುದು. ಹೀಗಾಗಿ ಮಾತಿನಲ್ಲಿ ಹಿಡಿತವಿರಲಿ. ಕನ್ಯಾ ರಾಶಿಯವರು ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಮೀನ ರಾಶಿಯವರಿಗೆ ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಧನಸ್ಸು ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ ಅಹೋರಾತ್ರಿ ವಾರ: ಶುಕ್ರವಾರ
ನಕ್ಷತ್ರ: ಮೃಗಶಿರಾ 30:01 ಯೋಗ: ವ್ಯಾಘಾತ 15:04
ಕರಣ: ಭವ 17:44 ಅಮೃತ ಕಾಲ: ರಾತ್ರಿ 08:30 ರಿಂದ 10:14 ರವರೆಗೆ
ದಿನದ ವಿಶೇಷ : ಅಡಿ ಶುಕ್ರವಾರ

ಸೂರ್ಯೋದಯ : 06:07 ಸೂರ್ಯಾಸ್ತ : 06:43

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಅತಿರೇಕದ ಮಾತುಗಳು ಜಗಳ ಉಂಟು ಮಾಡಬಹುದು. ಹೀಗಾಗಿ ಮಾತಿನಲ್ಲಿ ಹಿಡಿತವಿರಲಿ. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಕುಟುಂಬದ ಆಪ್ತರಿಂದ ಆಮಂತ್ರಣ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕ ಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ, ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ.
ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಶೀಘ್ರ ಕೋಪದಿಂದ ಕಾರ್ಯದಲ್ಲಿ ಹಾನಿ. ಆರ್ಥಿಕ ಪ್ರಗತಿ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ. ನಂಬಿದ ವ್ಯಕ್ತಿಗಳು ನಿಮಗೆ ಮೋಸ ಮಾಡಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು. ಆರ್ಥಿಕ ಪ್ರಗತಿ ಸಾಧಾರಣ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ. ಕುಟುಂಬದಲ್ಲಿ ಹೊಸ ಭರವಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಸರಿಯಾದ ದಿಕ್ಕಿನಲ್ಲಿ ಬಾಗಿಲಿದ್ದರೆ ಸುಖ, ಶಾಂತಿ ನೆಲೆಸುತ್ತಾ?

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

VISTARANEWS.COM


on

ನವದೆಹಲಿ: ಜಗತ್ತು ಈಗ ಮತ್ತೊಂದು ಮಾರಕ ರೋಗದ ಆತಂಕದಲ್ಲಿದೆ. ಈ ಆತಂಕಕ್ಕೆ ಕಾರಣವಾಗಿದ್ದು ಹ್ಯಾಂಟವೈರಸ್‌. ಇದನ್ನು ಕೊರೋನಾ ವೈರಸ್‌ ಸಹೋದರಿ ಎಂದೇ ಹೇಳಲಾಗುತ್ತಿದೆ.
ಡಚ್‌ ಪ್ರವಾಸಿ ಹಡಗು ಎಂವಿ ಹೊಂಡಿಯಸ್‌ನಲ್ಲಿ ಹ್ಯಾಂಟವೈರಸ್‌ ಹರಡಿರುವ ಸುದ್ದಿ ಜಗತ್ತನ್ನೇ ಆತಂಕಕ್ಕೆ ದೂಡಿದೆ. ೧೪೯ ಜನರಿದ್ದ ಈ ಹಡಗಿನಲ್ಲಿ ಮೂವರು ಹ್ಯಾಂಟವೈರಸ್‌ಗೆ ಬಲಿಯಾಗಿದ್ದಾರೆ. ಈ ಹಡಗಿನಲ್ಲಿ ಇಬ್ಬರು ಭಾರತೀಯರೂ ಪ್ರವಾಸ ಮಾಡುತಿದ್ದರು ಎಂದು ಕೆಲವು ವರದಿಗಳು ಹೇಳಿವೆ. ಸದ್ಯ ಈ ಹಡಗು ಆಫ್ರಿಕಾದ ಬಂದರಿನಲ್ಲಿ ಲಂಗರು ಹಾಕಿದೆ. ಅಸ್ವಸ್ಥ ಪ್ರಯಾಣಿರನ್ನು ಚಿಕಿತ್ಸೆಗೆ ರವಾನಿಸಲಾಗಿದೆ.
ಹ್ಯಾಂಟವೈರಸ್ ಅಂದರೇನು?
ಹ್ಯಾಂಟವೈರಸ್ ಒಂದು ಅಪರೂಪದ ಆದರೆ ಅಪಾಯಕಾರಿ ವೈರಸ್. ಇದು ಇಲಿಗಳ ಮೂತ್ರ, ಜೊಲ್ಲು ಅಥವಾ ಮಲದ ಮೂಲಕ ಹರಡುತ್ತದೆ. ಹ್ಯಾಂಟ ವೈರಸ್ ಗಾಳಿಯಲ್ಲಿ ಹರಡೋದಿಲ್ಲ. ಮನುಷ್ಯನಿಂದ ಮನುಷ್ಯನಿಗೆ ಹರಡುವ ಸಾಂಕ್ರಾಮಿಕವೂ ಇದಲ್ಲ. ಇಲಿ ಹಾಗೂ ಹೆಗ್ಗಣದ ಜಾತಿಯ ‘ದಂಶಕ’ಗಳಲ್ಲಿ ಈ ವೈರಸ್‌ ಕಾಣಿಸಿಕೊಳ್ಳುತ್ತೆ. ಈ ದಂಶಕಗಳ ಮಲ, ಮೂತ್ರ ಅಥವಾ ಜೊಲ್ಲು ರಸ ಮಾನವನ ಸಂಪರ್ಕಕ್ಕೆ ಬಂದಾಗ ಮಾನವನಿಗೂ ಹ್ಯಾಂಟ ವೈರಸ್ ಹರಡುತ್ತೆ. ಜ್ವರ, ತಲೆನೋವು, ಹೊಟ್ಟೆ ನೋವು, ಮೈ-ಕೈ ನೋವು, ವಾಂತಿ, ಭೇದಿ ಇತ್ಯಾದಿ ಈ ರೋಗದ ಲಕ್ಷಣಗಳು.

Continue Reading

Latest

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನುಭವಿಸಿದರೂ ತಾನು ಮಾತ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಇಂದು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಾವು ಪಶ್ಚಿಮ ಬಂಗಾಳದಲ್ಲಿ ಸೋತಿಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ಆದರೆ ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಇವಿಎಂಗಳ ಲೂಟಿ ಮಾಡಲಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಸೇರಿಕೊಂಡಿದೆ. ಆದರೆ ನೈತಿಕವಾಗಿ ನಾವು ಗೆಲುವನ್ನು ಸಾಧಿಸಿದ್ದೇವೆ ಎಂದಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading
Advertisement
Rakshit Shetty Richard Anthony Produce By Hombale
ದೇಶ1 hour ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ1 hour ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ1 hour ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌