Site icon Vistara News

Dina Bhavishya : ಇಂದು ಈ ರಾಶಿಯವರ ಜೇಬು ಖಾಲಿ; ಸ್ವಲ್ಪ ಹುಷಾರು!

Dina bhavishya

ಚಂದ್ರನು ಶನಿವಾರವೂ ಕಟಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಸಂಬಂಧಿಗಳ ವಿಚಾರಕ್ಕೆ ನಿಮ್ಮ ಸಂಗಾತಿಯ ಜತೆಗೆ ವಾದ ಮಾಡುವ ಸಾಧ್ಯತೆ. ವೃಷಭ ರಾಶಿಯವರು ನಕಾರಾತ್ಮಕ ಭಾವನೆಗಳನ್ನು ಬಿಟ್ಟು ಬಿಡಿ. ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಸಿಂಹ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕನ್ಯಾ ರಾಶಿಯವರು ಹತಾಶೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ. ತುಲಾ ರಾಶಿಯವರಿಗೆ ಅನಿವಾರ್ಯ ಕಾರಣದಿಂದ ಖರ್ಚು ಹೆಚ್ಚಾಗಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 06:30 ವಾರ: ಶನಿವಾರ
ನಕ್ಷತ್ರ: ಆರಿದ್ರಾ 32:25 ಯೋಗ: ಹರ್ಷಣ 15:20
ಕರಣ: ಬಾಲವ 06:30 ಅಮೃತ ಕಾಲ: ರಾತ್ರಿ 09:26 ರಿಂದ 11:12 ರವರೆಗೆ
ದಿನದ ವಿಶೇಷ : ಸರ್ವತ್ರ ಏಕಾದಶಿ

ಸೂರ್ಯೋದಯ : 06:07 ಸೂರ್ಯಾಸ್ತ : 06:42

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅನಿವಾರ್ಯ ಕಾರಣದಿಂದ ಸಮಯ ವ್ಯರ್ಥವಾಗುತ್ತದೆ. ಸಂಬಂಧಿಗಳ ವಿಚಾರಕ್ಕೆ ನಿಮ್ಮ ಸಂಗಾತಿಯ ಜತೆಗೆ ವಾದ ಮಾಡುವ ಸಾಧ್ಯತೆ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲವಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ನಕಾರಾತ್ಮಕ ಭಾವನೆಗಳನ್ನು ಬಿಟ್ಟು ಬಿಡಿ. ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ವ್ಯಾಪಾರವನ್ನು ಬಲಪಡಿಸಲು ಇಂದು ನೀವು ಯಾವುದೇ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬಹುದು. ಇದಕ್ಕಾಗಿ ನಿಮ್ಮ ಆಪ್ತರು ನಿಮಗೆ ಆರ್ಥಿಕವಾಗಿ ಸಹಾಯ ಮಾಡಬಹುದು. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಉದ್ಯೋಗಿಗಳಿಗೆ ಭರವಸೆಯ ದಿನ ಇದಾಗಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ. ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ- ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಮಕ್ಕಳ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹಾಕುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಹಣದ ಅಗತ್ಯವಿರುತ್ತದೆ, ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ನೀವು ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದುವ ಸಾಧ್ಯತೆ.
ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಹತಾಶೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಭರವಸೆಯ ಅವಕಾಶ ಇರಲಿದೆ. ಆರ್ಥಿಕ ಪ್ರಗತಿ ಸಾಧರಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನಿವಾರ್ಯ ಕಾರಣದಿಂದ ಖರ್ಚು ಹೆಚ್ಚಾಗಲಿದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಗಾತಿಯ ವರ್ತನೆ ಇಂದು ನಿಮ್ಮ ವೃತ್ತಿಪರ ಸಂಬಂಧಗಳಿಗೆ ತೊಂದರೆಯನ್ನುಂಟುಮಾಡಬಹುದು. ಉದ್ಯೋಗಿಗಳಿಗೆ ಒತ್ತಡದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ವೃಶ್ಚಿಕ: ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುತ್ತದೆ. ತಾಳ್ಮೆಯಿಂದಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಇಂದು ಅದ್ಭುತ ಮತ್ತು ಸೃಜನಶೀಲವಾಗಿರುವಂತಹ ಆಲೋಚನೆಗಳು ಬರಬಹುದು. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಧನಸ್ಸು: ಒತ್ತಡದ ವಾತಾವರಣದಿಂದ ಹೊರ ಬರಲು ಧ್ಯಾನ, ಯೋಗ ಮಾಡಿ. ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು. ನೀವು ಈ ಸಲಹೆಯನ್ನು ಅನುಸರಿಸಿದರೆ, ಖಂಡಿತವಾಗಿಯೂ ಹಣವನ್ನು ಗಳಿಸುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ವಿರಾಮದ ವಾತಾವರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಸರಿಯಾದ ದಿಕ್ಕಿನಲ್ಲಿ ಬಾಗಿಲಿದ್ದರೆ ಸುಖ, ಶಾಂತಿ ನೆಲೆಸುತ್ತಾ?

ಮಕರ: ಧಾರ್ಮಿಕ ಭಾವನೆ ಉದ್ಭವಿಸಿ, ದೈವಿಕ ಜ್ಞಾನವನ್ನು ಪಡೆಯಲು ನೀವು ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಂತೆ ಮಾಡುತ್ತವೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು. ಉದ್ಯೋಗಿಗಳಿಗೆ ಹೊಸ ಉತ್ಸಾಹ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

ಮೀನ: ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬರಲಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ನಕರಾತ್ಮಕ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version